ಗದಗ | ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ: ಬಿ ವೈ ವಿಜಯೇಂದ್ರ

Date:

ಜವಾಬ್ದಾರಿಯುತ ಸರ್ಕಾರ ಹೇಗೆ ನಡೆದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿಲ್ಲ. ಇಷ್ಟು ದಿನದಿಂದ ಪ್ರತಿಭಟನೆ ಮಾಡುತ್ತಿದ್ದೀರಲ್ಲ, ಸಂಬಂಧಿಸಿದ ಸಚಿವರು ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ. ನಿಮ್ಮ ಸೌಜನ್ಯ ಆಲಿಸದ ದುರಹಂಕಾರ ವರ್ತನೆಯನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಡಿಪಿಆರ್ ಇಲಾಖೆ ನೌಕರರು ಹಾಗೂ ಖಾಸಗಿ ಕಂಪನಿಗಳಲ್ಲಿ ಹಣ ತುಂಬಿ ವಂಚನೆಗೆ ಒಳಗಾದ ಫಲಾನುಭವಿಗಳು ಅಹೋರಾತ್ರಿ ಧರಣಿ ನಡೆಸುತ್ತಿರುವಲ್ಲಿಗೆ ಹೋಗಿ ಮಾತನಾಡಿದರು.

“ಗ್ರಾಮೀಣ ಭಾಗದ ಬೆನ್ನೆಲುಬಾದ ಗ್ರಾಮ ಪಂಚಾಯಿತಿ ನೌಕರರು, ಗ್ರಾಮ ಪಂಚಾಯತ್ ಸದಸ್ಯರು ನ್ಯಾಯಯುತ ಬೇಡಿಕೆಗಾಗಿ ಹೋರಾಟ ಮಾ‌ಡುತ್ತಿದ್ದೀರಿ. ಆರ್‌ಡಿಪಿಆರ್ ಸಚಿವರಿಗೆ ರಾಜ್ಯದ ಎಲ್ಲ ಇಲಾಖೆಯ ಬಗ್ಗೆ ಮೂಗು ತೂರಿಸಲು ಗೊತ್ತಾಗುತ್ತೆ. ಅವುಗಳ ಬಗ್ಗೆ ಚರ್ಚೆ ಮಾಡ್ತಾರೆ. ಜಗತ್ತಿನ ರಾಜಕಾರಣದ ಬಗ್ಗೆ ಮಾತನಾಡ್ತಾರೆ. ಆದರೆ ಅವರ ಇಲಾಖೆಯಲ್ಲಿ ಎಷ್ಟು ಸಮಸ್ಯೆಯಿದೆ. ಬೇಡಿಕೆಗಳು ಸಮಂಜಸ ಇದೆಯೋ, ಇಲ್ಲವೋ, ತಜ್ಞರಿಂದ ಮಾಹಿತಿ ಪಡೆದು ಸ್ಪಂದಿಸುವ ಸೌಜನ್ಯ ತೋರಿಸುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಣ ಕಟ್ಟಿಸಿಕೊಂಡು, ಬಡವರಿಗೆ ನಿವೇಶನ ನೀಡಿಲ್ಲ: ಕರವೇ ಗಜಪಡೆ ಆರೋಪ

“ಸಿಎಂ ಹಾಗೂ ಸಂಬಂಧಿಸಿದ ಸಚಿವರು ಈ ಬಗ್ಗೆ ಸಭೆ ಕರೆದು ಮನವಿ ಬಗ್ಗೆ ಚರ್ಚೆ ಮಾಡಿ. ಕೂಲಕುಂಶವಾಗಿ ಪರಿಶೀಲಿಸಿ ಯಾವ ಸಮಸ್ಯೆ ಬಗೆ ಹರಿಸಬಹುದು ಅದರ ಬಗ್ಗೆ ಕ್ರಮ ಕೈಗೊಳ್ಳಿ. ಇಲ್ಲವಾದರೆ ಆರ್‌ಡಿಪಿಆರ್ ಇಲಾಖೆಯವರು ನಡೆಸುವ ನ್ಯಾಯಬದ್ಧ ಹೋರಾಟಕ್ಕೆ ನಿಮ್ಮ ಬೆಂಬಲವಿದೆ” ಎಂದು ಪ್ರತಿಭಟನಾಕಾರರಿಗೆ ಅಭಯ ನೀಡಿದರು.

ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ ಸಿ ಪಾಟೀಲ, ಮಾಜಿ ಸಚಿವ ಕಳಕಪ್ಪ ಬಂಡಿ, ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಜಿಲ್ಲಾಧ್ಯಕ್ಷ ರಾಜು ಕುರುಡಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...