ಗದಗ | ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐಎಂ ಪಕ್ಷದಿಂದ ಜನದನಿ ರ್ಯಾಲಿ: ಯು ಬಸವರಾಜ

Date:

“ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿಯು ‘ಪರ್ಯಾಯ ರಾಜಕಾರಣಕ್ಕಾಗಿ ಜನದನಿ ರ್ಯಾಲಿ’ ಎನ್ನುವ ಬೃಹತ್ ಜನಾಂದೋಲನವನ್ನು ಇದೇ ಡಿಸೆಂಬರ್ 21 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ” ಎಂದು ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಯು ಬಸವರಾಜ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ ವಾದಿ ಸಿಪಿಎಂ ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿ ಅವರು ಮಾತನಾಡಿದರು. ಇದನ್ನು ಉದ್ದೇಶಿಸಿ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯು ಬಸವರಾಜ ಮಾತನಾಡಿದರು.

“ಈ ರ್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 30 ಸಾವಿರಕ್ಕೂ ಅಧಿಕ ಮಧ್ಯಮ ಹಾಗೂ ಬಡ ರೈತರು, ಬಗರಹುಕುಂ ಸಾಗುವಳಿದಾರರು, ಭೂಸ್ವಾಧೀನ ವಿರೋಧಿ ಹೋರಾಟ ನಿರತ ರೈತರು, ಸಂಘಟಿತ, ಅಸಂಘಟಿತ ವಲಯದ ಕಾರ್ಮಿಕರು, ವಿವಿಧ ಸರ್ಕಾರಿ ವಲಯದ ಯೋಜನಾ ಕಾರ್ಮಿಕರು, ಖಾಸಗಿ ಸರ್ಕಾರಿ ವಲಯಗಳ ಗುತ್ತಿಗೆ ನೌಕರರು, ಗ್ರಾಮೀಣ ವಲಯದ ಉದ್ಯೋಗ ಖಾತ್ರಿ ಹಾಗೂ ಕೃಷಿ ಕೂಲಿಕಾರರು, ಮಹಿಳೆಯರು, ವಿದ್ಯಾರ್ಥಿ ಯುವಜನರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸಮಿತಿ ಸದಸ್ಯರಾದ ಜಿ ನಾಗರಾಜ್ ಮಾತನಾಡಿ “ರಾಜ್ಯಾದ್ಯಂತ ಇರುವ ಸಿಪಿಐ(ಎಂ) ಶಾಖೆಗಳ ನೇತೃತ್ವದಲ್ಲಿ ಈಗಾಗಲೇ ನವೆಂಬರ್ 1 ರಿಂದ ಡಿಸೆಂಬ‌ರ್ 15ರವರೆಗೆ ರಾಜ್ಯದ ಉದ್ದಗಲಕ್ಕೂ ನಿತ್ಯ ನೂರಾರು ಕಾರ್ಯಕರ್ತರು ಕರಪತ್ರ, ಕಿರು ಪಸ್ತಕಗಳ ವಿತ್ತರಣೆ ಮೂಲಕ ಸಾವಿರಾರು ಮನೆ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ಹೇಗೆ ಜನಸಾಮಾನ್ಯರ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಇದಕ್ಕೆ ಪರ್ಯಾಯವಾಗಿ ಸಿಪಿಎಂ ಪಕ್ಷ ನೇತೃತ್ತದ್ದ ಕೇರಳ ಹಾಗೂ ಹಿಂದಿನ ಪ.ಬಂಗಾಳ, ತ್ರಿಪುರ ಸರ್ಕಾರಗಳು ಜಾರಿ ಮಾಡಿದ ಹಾಗೂ ಮಾಡುತ್ತಿರುವ ಜನಪರ ನೀತಿಗಳು ಹೇಗೆ ಜನರ ಬದುಕನ್ನು ಉತ್ತಮಪಡಿಸಲು ಸಹಾಯವಾಗಿವೆ” ಎಂದರು.

“ರಾಜ್ಯದಲ್ಲೂ ಸಿಪಿಎಂ ಹಾಗೂ ಇತರೆ ಎಡ ಶಕ್ತಿಗಳ ನಡೆಸುತ್ತಿರುವ ಪರ್ಯಾಯ ರಾಜಕಾರಣ ಅದನ್ನು ಜನರು ಬೆಂಬಲಿಸಬೇಕಾದ ಅನಿವಾರ್ಯತೆಯನ್ನು ಮನವರಿಕೆ ಮಾಡಲಾಗುತ್ತಿದೆ. ಮಾತ್ರವಲ್ಲ ರಾಜ್ಯದ ಜನರ ಎದುರಿಸುತ್ತಿರುವ ಸುಮಾರು 20 ಅಧಿಕ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕ್ರಮವಹಿಸಬೇಕು” ಸಾರ್ವಜನಿಕರಿಂದ ಮನೆಮನೆಗಳಿಂದ ಸಿಹಿ ಸಂಗ್ರಹಗಳನ್ನು ಜೋತೆಗೆ ನಿಧಿ ಸಂಗ್ರಹವನ್ನು ನಡೆಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಿಪಿಐಎಂ ಗದಗ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಮಾತನಾಡಿ, “ಡಿಸೆಂಬರ್ 21 ರಂದು ನಡೆಯಲಿರುವ ಸಭೆಯಲ್ಲಿ ಗದಗ ಜಿಲ್ಲೆಯಿಂದ ಸುಮಾರು 1000 ಕ್ಕೂ ಹೆಚ್ಚು ಜನ ಪಕ್ಷದ ಸದಸ್ಯರು ಹಾಗೂ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಸೇರಿ ಪಕ್ಷದ ಪೊಲಿಟ್ ಬ್ಯೂರೋ ಸದಸ್ಯರು ಕಾಮ್ರೇಡ್ ಯು ವಾಸುಕಿ ಹಾಗೂ ರಾಜ್ಯದ ಪ್ರಮುಖ ಸಿಪಿಎಂ ನಾಯಕರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ, ಸದಸ್ಯರಾದ ಮಹೇಶ್ ಹೀರೆಮಠ್, ಮೇಹಬೂಬ ಹವಾಲ್ದಾರ, ಎಂ ಎಸ್ ಹಡಪದ, ಪೀರು ರಾಠೋಡ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...