ಗದಗ | ಸರ್ಕಾರಿ ಇಲಾಖೆ ಸಿಬ್ಬಂದಿಗಳಿಗೆ ಕ್ರಿಕೆಟ್‌ ಪಂದ್ಯಾವಳಿ

Date:

ಸರ್ಕಾರಿ ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಲ್ಲೇ ಕಾಲ ಕಳೆಯುವ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗಳು ಒಬ್ಬರಿಗೊಬ್ಬರು ಪರಿಚಿತರಾಗಲು ಒಳ್ಳೆಯ ಸ್ನೇಹ ಸಂಬಂಧದ ಸೇತುವೆಯಾಗಿ ಈ ಕ್ರಿಕೆಟ್ ಕ್ರಿಡೆ ಸಹಾಯವಾಗಲಿದೆ, ಜತೆಗೆ ಪ್ರೇರಣೆಯಾಗಿದೆ” ಎಂದು ಲಕ್ಷ್ಮೇಶ್ವರ ತಹಶೀಲ್ದಾರ್ ವಿ ವಾಸುದೇವ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ಇಲಾಖೆಗಳ ಸಿಬ್ಬಂದಿಗಳ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.‌

ಸ್ವತಃ ಲಕ್ಷ್ಮೇಶ್ವರ ತಾಲೂಕು ತಹಶಿಲ್ದಾರ್‌ ಅವರು ಕ್ರಿಕೆಟ್ ಆಟದಲ್ಲಿ ತಮ್ಮ ಕಂದಾಯ ಇಲಾಖೆಯ ಮುಖ್ಯ ನಾಯಕರಾಗಿ ಮೈದಾನದಲ್ಲಿ ಉತ್ತಮ ಆಟ ಪ್ರದರ್ಶಿಸುವವ ತಮ್ಮ ಸಿಬ್ಬಂದಿಗೆ ಮತ್ತು ಎದುರು ಆಟಗಾರರಿಗೂ ಚಪ್ಪಾಳೆ ತಟ್ಟುವುದರ ಮೂಲಕ ಹುರಿದುಂಬಿಸಿ ಉತ್ಸಹ ತುಂಬುತ್ತಿದ್ದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪರಿವರ್ತನೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಅನನ್ಯ: ಜ್ಯೋತಿ ಬೊಮ್ಮ

ತಾಲೂಕು ಪಂಚಾಯತ್ ಉಪ ನಿರ್ದೇಶಕರ ಧರ್ಮಣ್ಣ ಅವರ ವೀಕ್ಷಕರ ವಿವರಣೆ (ಕಾಮೆಂಟ್ರಿ)ಉತ್ತಮವಾಗಿತ್ತು ಮತ್ತು ಎಲ್ಲ ತಂಡದವರಿಗೂ ಉತ್ಸಾಹ ತುಂಬುವಂತಿತ್ತು. ಕ್ರಿಡೆ ವೀಕ್ಷಿಸುವ ವೀಕ್ಷಕರ ಮೆಚ್ಚುಗೆಯ ಮಾತುಗಳೂ ಕೇಳಿ ಬಂದವು.

ಲಕ್ಷ್ಮೇಶ್ವರ ಸಬ್ ಇನ್ಸ್‌ಪೆಕ್ಟರ್ ಈರಣ್ಣ ರಿತ್ತಿ, ತಾಲೂಕು ಪಂಚಾಯತ್ ಉಪ ನಿರ್ದೇಕ‌ ಧರ್ಮಣ್ಣ, ತಾಲೂಕು ಗ್ರೇಡ್ ಟು ತಹಶೀಲ್ದಾರ್ ಮಂಜುನಾಥ ಅಮಾಸಿ, ಉಪ ತಹಶೀಲ್ದಾರ್ ಕಿಮ್ಮಾಯಿ, ತಾಲೂಕು ಕಂದಾಯ ಇಲಾಖೆ ರಾಜಸ್ವ ಅಧಿಕಾರಿ ನದಾಫ್ ಇದ್ದರು.

ವರದಿ : ಕೇಶವ್‌ ಕಟ್ಟಿಮನಿ, ಸಿಟಿಜ಼ನ್‌ ಜರ್ನಲಿಸ್ಟ್‌ ಲಕ್ಷ್ಮೇಶ್ವರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...