ಗದಗ | ಅತೀವೃಷ್ಟಿಯಿಂದಾದ ಬೆಳೆ ಹಾನಿ; ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ

Date:

“ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಸಭೆಯಲ್ಲಿ ಪೂರ್ವ ಮುಂಗಾರು (1-4-25 ರಿಂದ 31-5-25 ) ಮಳೆಯಿಂದಾದ ಕೃಷಿ, ತೋಟಗಾರಿಕೆ ಬೆಳೆ ಹಾನಿ, ಮನೆ ಹಾನಿ, ಪ್ರವಾಹ, ಸಿಡಿಲಿನಿಂದಾದ ಜೀವಹಾನಿ, ಜಾನುವಾರು ಪ್ರಾಣ ಹಾನಿ, ಪರಿಹಾರ ವಿತರಣೆ, ವಿವಿಧ ಜಲಾಶಯಗಳ ದುರಸ್ತಿ ಇರುವ ಕ್ರಸ್ಟ್ ಗೇಟ್ ಗಳ ಮಾಹಿತಿ, ರೈತರಿಗೆ ಅವಶ್ಯಕ ಬೀಜ, ರಸಗೊಬ್ಬರ, ಕೀಟನಾಶಕಗಳ ಬೇಡಿಕೆ, ರಸ್ತೆ ಹಾಗೂ ಮೂಲಸೌಕರ್ಯಗಳ ಹಾನಿ ಕುರಿತು ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಬಗ್ಗೆ ದೃಢೀಕರಿಸಿ, 10 ದಿನಗಳರೊಳಗೆ ಸಮೀಕ್ಷೆ ವರದಿ ಸಲ್ಲಿಸಬೇಕು. ಮನೆಹಾನಿ, ಪ್ರಾಣ ಹಾನಿ, ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಲ್ಪಿಸಲು ಸೂಚಿಸಿ, ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕಗಳ ಪೂರೈಕೆ ಬಗ್ಗೆಯೂ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು “ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿ ಕುರಿತು ಮಾಹಿತಿ ನೀಡಿ, ಬೆಳೆ ಹಾನಿಗೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ” ಎಂದರು.

IMG 20250908 WA0206

“ಗದಗ ಜಿಲ್ಲೆಯಲ್ಲಿ 93709 ಸಾವಿರ ಹೆಕ್ಟೇರ್ ಪ್ರದೇಶ ಕೃಷಿ ಹಾಗೂ 7454 ಸಾವಿರ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಸೇರಿ ಒಟ್ಟು ಜಿಲ್ಲೆಯಲ್ಲಿ 1.01 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. 183 ಬಾಗಶ: ಮನೆ ಹಾನಿಯಾಗಿದ್ದು, ಈವರೆಗೆ ಮಾರ್ಗಸೂಚಿಯನ್ವಯ 28.04 ಲಕ್ಷ ಪರಿಹಾರ‌ ನೀಡಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಮಳೆಗಿಂತ ಶೇ. 33 ರಷ್ಟು ಅಧಿಕ‌ ಮಳೆಯಾಗಿದೆ” ಎಂದರು.

“ಜಿಲ್ಲೆಯಲ್ಲಿ 3.12 ಲಕ್ಷ ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇತ್ತು, ಶೇ. 108 ರಷ್ಟು ಗುರಿ ಸಾಧನೆಯಾಗಿದ್ದು, 1.49 ಲಕ್ಷ ಹೆಕ್ಟೇರ್ ಹೆಸರು ಬೆಳೆ ಹಾಗೂ 93 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಇತರೆ ಬೆಳೆ ಹಾನಿಯಾಗಿದೆ. ಇದರಿಂದಾಗಿಗಿ ಜಿಲ್ಲೆಯ ಒಟ್ಟಾರೆ 94 ಸಾವಿರ ರೈತರು ಹಾನಿ ಅನುಭವಿಸಿದ್ದಾರೆ” ಎಂದು ಡಿಸಿ ಸಿ ಎನ್ ಶ್ರೀಧರ ಮಾಹಿತಿ ಒದಗಿಸಿದರು.

“ಗದಗ ಜಿಲ್ಲೆಯಲ್ಲಿ ಬೆಳೆದ ಹೆಸರು ಬೆಳೆ ಇನ್ನೇನು ಪಸಲು ಸಿಗುತ್ತದೆ ಎಂಬ ನಿರೀಕ್ಷೆ ಯಲ್ಲಿದ್ದ ರೈತರಿಗೆ ಅತಿವೃಷ್ಠಿಯಿಂದಾಗಿ ಹೆಸರು ಬೆಳೆ ಸಂಪೂರ್ಣವಾಗಿ ಹಾನಿಗೀಡಾಗಿದೆ. ಇದರಿಂದ ರೈತರಿಗೆ ಅಪಾರ ಹಾನಿಯಾಗಿದ್ದು, ಶೀಘ್ರವಾಗಿ ಜಂಟಿ ಸಮೀಕ್ಷೆ ಕೈಗೊಂಡು ಪರಿಹಾರ ತಂತ್ರಾಂಶದಲ್ಲಿ ನೋಂದಣಿ ಮಾಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಬೆಳೆ ಹಾನಿಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು” ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಕೆ ಪಾಟೀಲ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಸ್ಎಫ್ಐ ಪ್ರತಿಭಟನೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್,  ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಎಸಿ ಗಂಗಪ್ಪ ಎಂ,  ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಹುಲಗಣ್ಣವರ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟೆಮನಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...