ಗದಗ | ಅತಿವೃಷ್ಟಿ ಮಳೆಗೆ ಬೆಳೆ ಹಾನಿ: ಬೆಳೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ರೈತ ಸಂಘ ಮನವಿ

Date:

“ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದ ಕಟಾವಿಗೆ ಬಂದ ಹೆಸರು ಬೆಳೆ ಸೇರಿದಂತೆ ಈರುಳ್ಳಿ ಗೋವಿನಜೋಳ ಮೆನಸಿನಕಾಯಿ ಶೇಂಗಾ ಸುರ್ಯಕಾಂತಿ, ಇತರೆ ಬೆಳೆಗಳಿಗೆ ಹಾನಿ ಉಂಟಾಗಿದೆ. ಇದರಿಂದ ರೈತರು ಮತ್ತಷ್ಟು ಸಾಲದಸುಳಿಗೆ ಸಿಲುಕಿ ಪರದಾಟ ನಡೆಸಿದ್ದು, ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ನೀಡಬೇಕು” ಎಂದು ರೈತರು ಆಗ್ರಹಿಸಿದರು.

ಗದಗ ಜಪಟ್ಟಣದ ಜಿಲ್ಲಾಡಳಿತ ಭವನದ ಎದುರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಅತಿಯಾದ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ಹಾಗೂ ಬೆಳೆ ವಿಮೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

“ರೋಣ ತಾಲ್ಲೂಕಿನ ಅಳವುಂಡಿ ರೈತನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಂದುಕಡೆ ವಿಮಾ ಕಂಪನಿಗಳು ರೈತರಿಗೆ ಬೆಳೆ ವಿಮೆ ತುಂಬಿಸಿಕೊಂಡು ವಿಮಾ ಕಂಪನಿಗಳು ಅರ್ಹ ರೈತರಿಗೆ ಸಕಾಲದಲ್ಲಿ ಬೆಳೆ ವಿಮೆ ನೀಡದೇ ಸತಾಯಿಸುತ್ತಿದ್ದಾರೆ. ಬೆಳೆ ವಿಮಾ ಪರಿಹಾರ ಪೂರೈಕೆಯಲ್ಲಿ ವಿಮಾ ಏಜೆಂಟರ ಹಾವಳಿಯು ಹೆಚ್ಚುತ್ತಲೇ ಇದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದ್ದರೂ, ಜಿಲ್ಲಾಧಿಕಾರಿಗಳು ಈವರೆಗೂ ಇದರ ಬಗ್ಗೆ ಸೂಕ್ತ ತನಿಖೆ ನಡೆಸುತ್ತಿಲ್ಲ.ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ರೈತರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹದಾಯಿ ಸೇರಿದಂತೆ ಕೃಷ್ಣಾ “ಬಿ” ಸ್ವೀಂ 3ನೇ ಹಂತದ ಕೊಪ್ಪಳ ಏತ ನೀರಾವರಿ ಯೋಜನೆಯ ಅಡಿಯಲ್ಲಿ ರೋಣ ತಾಲ್ಲೂಕಿನ 13 ಗ್ರಾಮಗಳಿಗೆ ನೀರಾವರಿ ಒಳಪಡಬೇಕಾಗಿತ್ತು.ಆದರೆ ಗದಗ ಜಿಲ್ಲೆಯಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಈ ಯೋಜನೆಗಳು ಇಂದಿಗೂ ನೆನೆಗುದಿಗೆ ಬಿದ್ದಿವೆ. ಗದಗ ಜಿಲ್ಲೆಯಲ್ಲಿ ಮಳೆ ಆಶ್ರೀತ ಬೇಸಾಯ ಜೀವಂತವಾಗಿದೆ” ಎಂದರು.

“ವಿದ್ಯುತ್ ಉತ್ಪಾದನೆಯ ಹೆಸರಿನಲ್ಲಿ ಯಾವುದೇ ಮಿತಿಗಳಿಲ್ಲದೆ ಖಾಸಗಿ ಕಂಪನಿಗಳು ಗಾಳಿ ವಿದ್ಯುತ್ ಕಂಬಗಳನ್ನು ಯಾವುದೇ ಅಡತಡೆ ಇಲ್ಲದೆ ನಿರ್ಮಿಸುವ ಮೂಲಕ ಭೂಮಿಯ ಮೇಲಿನ ತೇವಾಂಶ ಹಾಳಾಗುವಂತೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಕೃಷಿಯ ಬಿಕ್ಕಟ್ಟು ರೈತರು ತಮ್ಮ ಭೂಮಿಯನ್ನು ಹಣದ ಆಸೆಗಾಗಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿರುವುದರಿಂದ ಆಹಾರ ಉತ್ಪಾದನೆಗೂ ಕೂಡಾ ಭವಿಷ್ಯದಲ್ಲಿ ಸಮಸ್ಯೆ ಉಂಟಾಗಲಿದೆ. ಇದೆಲ್ಲ ಈ ಭಾಗದ ರಾಜಕಾರಣಿಗಳಿಗೆ ಗೊತ್ತಿದ್ದರು ಅವರು ಇದಕ್ಕೆ ಕಡಿವಾಣ ಹಾಕದಿರುವ ಅವರ ನಡೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ” ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷರು ಬಡಗೇಲಪುರ ನಾಗೇಂದ್ರ ಮಾತನಾಡಿ, “ಬೆಳೆ ಸಾಲ ನೀಡುವ ರಾಷ್ಟ್ರೀಕೃತ ಬ್ಯಾಂಕುಗಳು ವಿಧಿಸುತ್ತಿರುವ ಹಲವಾರು ಷರತ್ತುಗಳು ರೈತರು ಇನ್ನು ಮುಂದೆ ಯಾವುದೇ ಕಾರಣಕ್ಕೂ ಬೆಳೆ ಪಡೆಯಲು ಸಾಧ್ಯವಿಲ್ಲದಂತ ಪರಿಸ್ಥಿತಿ ನಿರ್ಮಿಸಿವೆ. ಬ್ಯಾಂಕುಗಳು ಬೆಳೆ ಸಾಲ ನೀಡುವ ವಿಧಾನಗಳನ್ನು ಸರಳಿಕರಿಸಬೇಕು. ಅನಗತ್ಯ ದಾಖಲಾತಿಗಳನ್ನು ಕೇಳದೆ ಲಭ್ಯವಿರುವ ದಾಖಲಾತಿಗಳ ಆಧಾರದಲ್ಲಿ ಸಾಲ ಮಂಜೂರ ಮಾಡಲು ಕ್ರಮವಹಿಸಬೇಕು” ಎಂದು ಒತ್ತಾಯಿಸಿದರು.

“ರೈತ ಸಂಘದ ಜಿಲ್ಲಾಧ್ಯಕ್ಷರು ಮುತ್ತಣ್ಣ ಚೌಡರೆಡ್ಡಿ ಮಾತನಾಡಿ, “ಇತ್ತೀಚೆಗೆ ಸುರಿದ ಬಾರಿ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಬವುತೇಕ ರಸ್ತೆಗಳು ಹಾಳಾಗಿದ್ದು, ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಮತ್ತು ರೈತರು ತಮ್ಮ ಅಳೆದು ಉಳಿದ ಬೆಳೆಗಳನ್ನು ಜಮೀನುಗಳಿಂದ ಮನೆಗೆ ತರಲು ಸಾಧ್ಯವಾಗುತ್ತಿಲ್ಲ. ತಕ್ಷಣವೇ ಜಿಲ್ಲಾಡಳಿತ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ರೈತರ ಒತ್ತಾಯವಾಗಿದೆ. ಜಿಲ್ಲೆಯಾದ್ಯಂತ ಹೆಸರು ಬೆಳೆ ಬಂದಿದ್ದರು ಈಗ ಅದರ ಬೆಲೆ ತೀವ್ರ ಕುಸಿತ ಕಂಡಿದ್ದು, ರೈತರ ಹಿತ ದೃಷ್ಟಿಯಿಂದ ಹೆಸರು ಬೆಳೆ ಖರೀದಿ ಕೇಂದ್ರಗಳನ್ನು ತಕ್ಷಣವೇ ಸ್ಥಾಪಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಸ್ಎಫ್ಐ ಪ್ರತಿಭಟನೆ

“ಈ ಎಲ್ಲ ನಮ್ಮ ಹಕ್ಕೊತ್ತಾಗಳಿಗೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿಗಳು ಸಂಘಟನೆಯ ರೈತರ ಸಭೆ ನಡೆಸಬೇಕು. ನಮ್ಮ ಹವಾಲುಗಳನ್ನು ಕೇಳಲು ಸಮಯವಕಾಶ ನೀಡಬೇಕು. ಏಳು ದಿನಗಳ ಒಳಗಾಗಿ ರೈತ ಮುಖಂಡರ ಸಭೆಯನ್ನು ಕರೆಯದೆ ಹೋದಲ್ಲಿ ಕಾರ್ಯಾಲಯದ ಎದುರು ಧರಣಿ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರೋಣ ತಾಲ್ಲೂಕು ಅಧ್ಯಕ್ಷರು ಸಂಗಣ್ಣ ಪವಾಡಶೆಟ್ಟರ, ರೈತ ಮುಖಂಡರು ಸಂಗಣ್ಣ ದಂಡಿನ, ಮೇಘರಾಜ್ ಬಾವಿ, ಎಸ್. ಎನ್. ಪರಡ್ಡಿ, ಬಸವರಾಜ ಜಕ್ಕಲಿ, ಎಸ್. ಎನ್. ಹುಲ್ಲೂರು, ರಾಮಣ್ಣ ತಳವಾರ, ಶಿವಾನಂದ ಇಟಗಿ, ಇನ್ನೂ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...