ಗದಗ | ಬೆಳೆ ಹಾನಿ; ರೈತರಿಗೆ ₹91 ಕೋಟಿ ರೂ ಪರಿಹಾರ ವಿತರಣೆಗೆ ಚಾಲನೆ 

Date:

ಗದಗ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ₹91 ಕೋಟಿ ರೂ ಪರಿಹಾರ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಬಿಟಿ ಮುಖಾಂತರ ಬೆಳೆ ಹಾನಿ ಪರಿಹಾರ ವಿತರಣೆಗೆ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಗದಗ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿದರು.

ಗದಗ ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ಜಿಲ್ಲೆಗೆ ಒಟ್ಟಾರೆ 91 ಕೋಟಿ ರೂ. ಬಿಡುಗಡೆಯಾಗಿದೆ.

“ಗದಗ ಮತ್ತು ಶಿರಹಟ್ಟಿ ತಾಲೂಕಿನ ರೈತರಿಗೆ 21 ಕೋಟಿ ರೂ. ಪರಿಹಾರ ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ನಂತರ ನರಗುಂದ, ರೋಣ ತಾಲೂಕಿನ ರೈತರಿಗೆ 55 ಕೋಟಿ ರೂ. ವಿತರಿಸಿ ನಂತರ ಉಳಿದ ತಾಲೂಕುಗಳಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮೂಲಕ ವಿತರಿಸಲಾಗುತ್ತಿದೆ” ಎಂದು ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೋಟಗಾರಿಕೆ ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಜಿಲ್ಲೆಯ 18540 ರೈತರಿಗೆ ಇಂದು ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು. ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ಸೇವಂತಿಗೆ ಬೆಳೆಗಳು ಪ್ರಮುಖ ಹಾನಿಯಾದ ಬೆಳೆಗಳಾಗಿವೆ. ಅದರಂತೆ ಕೃಷಿ ಬೆಳೆಗಳಾದ ಹೆಸರು, ಗೋವಿನಜೋಳ , ಶೇಂಗಾ ಹಾನಿಯಾದ ಪ್ರಮುಖ ಬೆಳೆಗಳಾಗಿವೆ” ಎಂದು ತಿಳಿಸಲಾಗಿದೆ

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...