ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

Date:

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜರುಗಿದ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು. ಡೆಂಘೀ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ  ಪರಿಸರ ಸ್ವಚ್ಛತೆವಾಗಿಟ್ಟುಕೊಳ್ಳುವುದು ಬಹುಮುಖ್ಯ. ಈ ಕುರಿತು ಎಲ್ಲ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್‌ಗಳು, ಡ್ರಮ್‌ಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‌ಗಳು, ಎಳನೀರಿನ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ‌. ಇವುಗಳ ಸಂಪೂರ್ಣ ನಿಯಂತ್ರಣದ ಬಗ್ಗೆ ಅರಿವು ಜನರಲ್ಲಿ ಮೂಡಿಸಬೇಕು” ಎಂದು ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.

ನಿರ್ಲಕ್ಷ್ಯ ಬೇಡ

ಎರಡನೇ ಬಾರಿ ಡೆಂಘೀ ಬಾಧೆಗೆ ಒಳಗಾದವರು ಸ್ವಲ್ಪವೂ ನಿರ್ಲಕ್ಷ್ಯ ಮಾಡಬಾರದು. ಯಾಕೆಂದರೆ ಅದು ತೀವ್ರ ಸ್ವರೂಪಕ್ಕೆ ಹೋಗುವ ಸಾಧ್ಯತೆಗಳು ಅಧಿಕವಾಗಿದೆ. ತಕ್ಷಣ ಚಿಕಿತ್ಸೆ ಪಡೆದು ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಸಹ ಜನಸಾಮಾನ್ಯರಿಗೆ ಅರಿವು ಮೂಡಿಸುವದನ್ನು ಮರೆಯಬಾರದು ಎಂದು ಹೇಳಿದರು.

ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಸೊಳ್ಳೆಗಳ ಉತ್ಪತ್ತಿ ಸಂಪೂರ್ಣ ನಿಯಂತ್ರಿಸಬೇಕು. ಸೊಳ್ಳೆಗಳ ಸಂಭಾವ್ಯ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶಪಡಿಸಲು ಎಲ್ಲರೂ‌ ಮುಂದಾಗಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿಗೆ ಕಾರಣ. ನಿಂತ ನೀರನ್ನು ತೊಡೆದುಹಾಕಲು ಬ್ಯಾರಲ್‍ಗಳು, ಹೂದಾನಿಗಳು, ಬೇಸಿನ್‍ಗಳು ಅಥವಾ ಕಪ್‍ಗಳು ಮತ್ತು ಬಳಕೆಯಾಗದ ಟಯರ್ ಸೇರಿದಂತೆ ನಿಂತಿರುವ ನೀರಿನ ಎಲ್ಲ ಮೂಲಗಳನ್ನು ತೆರವುಗೊಳಿಸಿ ಸೊಳ್ಳೆ ನಿವಾರಕಗಳನ್ನು ಬಳಸಿ ಸಾರ್ವಜನಿಕರು ಡೆಂಘೀ ನಿಯಂತ್ರಿಸಬೇಕು” ಎಂದರು.

ಚರಂಡಿ ನಾಲೆಗಳಲ್ಲಿ ಕಸಕಡ್ಡಿಗಳನ್ನು ಎಸೆಯದೇ ನೀರು ಸರಾಗವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಮನೆಯಲ್ಲಿರುವ ನೀರು ಸಂಗ್ರಹಣಾ ಪಾತ್ರೆಗಳು ಮತ್ತು ಡ್ರಮ್‍ಗಳನ್ನು ಸರಿಯಾದ ಮುಚ್ಚಳದಿಂದ ಮುಚ್ಚಿರಿ ಹಾಗೂ ದೊಡ್ಡ ತೊಟ್ಟಿಗಳನ್ನು ವಾರಕ್ಕೊಮ್ಮೆ ಸಂಪೂರ್ಣವಾಗಿ ಖಾಲಿ ಮಾಡಿ, ಸರಿಯಾಗಿ ಮುಚ್ಚಿರಿ ಅಥವಾ ಸೊಳ್ಳೆ ನಿಯಂತ್ರಣ ಜಾಲರಿಗಳನ್ನು ಅಳವಡಿಸಬೇಕು ಈ ಕುರಿತು ಅರಿವು ಮೂಡಿಸಿ ಎಂದು ನಿರ್ದೇಶಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ ಮಾತನಾಡಿ, ತೀವ್ರ ಜ್ವರ, ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಉಂಟಾಗುವುದು ಡೆಂಘೀ ಜ್ವರದ ಲಕ್ಷಣಗಳಾಗಿವೆ. ಜ್ವರದ ಲಕ್ಷಣಗಳೊಂದಿಗೆ ಬಾಯಿ , ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವದ, ಚರ್ಮದ ಮೇಲೆ ರಕ್ತಸ್ರಾವದ ಗುರುತುಗಳು, ಕಪ್ಪುಮಲ ವಿಸರ್ಜನೆ , ವಿಪರೀತ ಬಾಯಾರಿಕೆ ಅಥವಾ ಪ್ರಜ್ಞೆ ತಪ್ಪುವುದು ಇವುಗಳು ಡೆಂಗ್ಯೂ ಶಾಕ್ ಸಿಂಡ್ರೋಮ್‌ದ ಲಕ್ಷಣಗಳಾಗಿವೆ.

ಸಾರ್ವಜನಿಕರು ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಸೊಳ್ಳೆಗಳ ನಾಶಕ್ಕೆ ಕೀಟನಾಶಕ ಸಿಂಪಡಿಸಲು ಬರುವ ಆರೋಗ್ಯ ಸಿಬ್ಬಂದಿಗೆ ನೆರವಾಗಿಗಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

ಮನೆಯ ಸುತ್ತಮುತ್ತ ಒಡೆದ ಡಬ್ಬ, ಟೈರು, ಎಳೆನೀರಿನ ಚಿಪ್ಪು ಮುಂತಾದ ಸಣ್ಣಸಣ್ಣ ಮೆಳೆ ನೀರು ಸಂಗ್ರಹಣೆಗೆ ಅವಕಾಶವಾಗುವಂತಹ ಯಾವುದೇ ವಸ್ತುಗಳನ್ನು ಎಸೆಯಬಾರದು. ಸಂಜೆ ಹೊತ್ತಿನಲ್ಲಿ ಆದಷ್ಟು ಮೈ ತುಂಬಾ ಬಟ್ಟೆ ಹೊದೆಯಿರಿ ಮತ್ತು ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಿರಿ. ಏಕೆಂದರೆ ಈ ವೇಳೆಯಲ್ಲಿ ಸೊಳ್ಳೆಯ ಚಟುವಟಿಕೆಗಳು ಹೆಚ್ಚಿರುತ್ತವೆ. ಮನೆಯ ಎಲ್ಲ ಕಿಟಕಿ ಬಾಗಿಲುಗಳೀಗೆ ಕೀಟ ತಡೆಗಟ್ಟುವ ಜಾಲರಿಗಳನ್ನು ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ನೀರಿನ ಬಾವಿ, ಕಾರಂಜಿಗಳು, ಕಟ್ಟಡ ನಿರ್ಮಾಣಕ್ಕಾಗಿ ಸಂಗ್ರಹಿಸಿದ ನೀರು ಶೇಖರಣೆ, ಕೆರೆ , ಕುಂಟೆ ಹೊಂಡ , ಗದ್ದೆ ಜೌಗು ಪ್ರದೇಶದಲ್ಲಿ ಸೊಳ್ಳೆ ಮರಿಗಳನ್ನು ತಿನ್ನುವ ಗ್ಯಾಂಬೂಸಿಯಾ ಮತ್ತು ಗಪ್ಪಿಯೆಂಬ ಲಾರ್ವಾಹಾರಿ ಮೀನುಗಳನ್ನು ಬಿಟ್ಟು ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಬೇಕು ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ್ ಮಾತನಾಡಿ, :ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ 1479 ಡೆಂಘೀ ಸಂಶಯಾಸ್ಪದ ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 1102 ಪ್ರಕರಣಗಳನ್ನು ಪರೀಕ್ಷಿಸಲಾಗಿದೆ. 70 ಡೆಂಘೀ ಪ್ರಕರಣಗಳು ಖಚಿತಪಟ್ಟಿವೆ. 49 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 32 ಜನರಿಗೆ ಗದಗನ ಜಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಜನ ಐಸಿಯುನಲ್ಲಿದ್ದಾರೆ. 2 ಜನರು ವೆಂಟಿಲೇಟರ್ ಇಡಲಾಗಿತ್ತು. ಅವರು ಕೂಡ ಈಗ ವೆಂಟಿಲೇಟರ್‌ನಿಂದ ಹೊರಬಂದಿದ್ದಾರೆ ಎಂದು ಮಾಹಿತಿ‌ ಒದಗಿಸಿದರು.

ಸಭೆಯಲ್ಲಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ‌‌ ಶಸ್ತ್ರಚಿಕಿತ್ಸಕ ಡಾ. ಬಿ.ಸಿ.ಕರೆಗೌಡ್ರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...