ಗದಗ | ಬಿಸಿಲಿನ ತಾಪಕ್ಕೆ ಸಾಕುಪ್ರಾಣಿಗಳ ಸಾವು; ಪಶು ಆಸ್ಪತ್ರೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

Date:

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಳೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಗ್ರಾಮದ ರೈತರು ಗ್ರಾಮ ಪಂಚಾಯಿತಿ ಎದುರು ಸತ್ತ ಕುರಿಯನ್ನು ಇಟ್ಟು ಪ್ರತಿಭಟಿಸಿದರು.

“ಪಶು ಆರೋಗ್ಯ ಕೇಂದ್ರ ಇಲ್ಲದಿದ್ದರಿಂದ ಗ್ರಾಮಸ್ಥರು ಸರ್ಕಾರಕ್ಕೆ ಸಾವಿರಾರು ಬಾರಿ ಮನವಿ ಸಲ್ಲಿಸಿ ಸೋತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಸಿದ್ದಾರಾಮಯ್ಯ ಸರ್ಕಾರದ ಜನಸ್ಪಂದನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಬಾಳೆಹೊಸೂರು ಗ್ರಾಮ ಘಟಕದಿಂದ ಮನವಿ ಸಲ್ಲಿಸಲಾಗಿತ್ತು, ಘನ ಸರ್ಕಾರ ರಾಜ್ಯದ ಅನೇಕ ಗ್ರಾಮಗಳಿಗೆ ಮತ್ತು ತಾಲೂಕುಗಳಿಗೆ ಪಶು ಅಸ್ಪತ್ರೆ ಮಂಜೂರು ಮಾಡಿದ ಪಟ್ಟಿಯಲ್ಲಿ ಬಾಳೆಹೊಸೂರು ಗ್ರಾಮಕ್ಕೂ ಪಶು ಆಸ್ಪತ್ರೆ ಮಂಜುರಾಗಿದೆ” ಎಂದು ಪ್ರತಿಭಟನಾಕಾರರು ಹೇಳಿದರು.

“ಜಿಲ್ಲಾ ಮತ್ತು ತಾಲೂಕಿನ ಪಶು ವೈದ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಬಾಳೆಹೊಸೂರು ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ತಾತ್ಕಾಲಿಕ ಕಟ್ಟಡ ಶೋಧಿಸಬೇಕಾಗಿತ್ತು.  ಮೂಲಭೂತ ಸೌಕರ್ಯಗಳುಳ್ಳ ಒಂದು ಕಟ್ಟಡ ಒದಗಿಸಿಕೊಡಲು ಪಶು ಅಧಿಕಾರಗಳು ಪಂಚಾಯಿತಿ ಆಡಳಿತಾಧಿಕಾರಿಗಳಿಗೂ ವಿನಂತಿಸಿದ್ದಾರೆ. ಆದರೆ ಬಾಳೆಹೊಸೂರು ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಮತ್ತು ಸದಸ್ಯರು ಈಯವರೆಗೆ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುರಿ ದನ-ಕರಗಳು ಅಡವಿ-ಅರಣ್ಯದಲ್ಲಿ ಕಿಲೋ ಮೀಟರ್ ದೂರದವರೆಗೂ ಮೇಯಲು ಹೋದ ಜಾನುವಾರುಗಳು ಬೇಸಿಗೆಯ ಬಿಸಿಲಿನ ಜಳಕ್ಕೆ ತತ್ತರಿಸಿ ಅಲ್ಲಲ್ಲೇ ಸಾಯುತ್ತಿವೆ. ಮನೆಗಳಲ್ಲಿರುವಾಗಲೇ ಪ್ರಾಣಿಗಳನ್ನು ಆಸ್ಪತ್ರೆಗೆ ಸೇರಿಸಬೇಕೆಂದರೆ ಹತ್ತಿರದಲ್ಲಿ ಆಸ್ಪತ್ರೆಗಳಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಸಿಲಿನ ಜಳಕ್ಕೆ ಕೋಳಿಗಳ ಸಾವು; ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

ಕುರಿಗಳ ಮಾಲೀಕ ಕೃಷ್ಣಪ್ಪ ಜಾಲವಾಡಗಿ, ಗ್ರಾಮ ಘಟಕ ರೈತ ಸಂಘ ಅದ್ಯಕ್ಷ ಲೋಕೇಶ ಜಾಲವಡಗಿ, ಉಪಾಧ್ಯಕ್ಷ ನಿಂಗಪ್ಪ ಸೋಮಪ್ಪ ಗುಡ್ಡಣ್ಣವರ, ಬಸವರಡ್ಡಿ ಹನಮರಡ್ಡಿ, ಮಂಜುನಾಥ ಗುಡಗೇರಿ, ಮಂಜುನಾಥ ಕಬ್ಬೇರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...