ಗದಗ | ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರಿಗೆ ಅವಮಾನಿಸಿದ ದಲಿತ ವಿರೋಧಿ ಮೇಲೆ ಕ್ರಮಕ್ಕೆ ಆಗ್ರಹ

Date:

“ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರಿಗೆ ಅವಮಾನ ಮಾಡಿದ ಮಬ್ಬಕ್ತ, ಸನಾತನಿ, ಆರ್.ಎಸ್.ಎಸ್ ಚೇಲಾ, ದಲಿತ ವಿರೋಧಿ, ದೇಶದ್ರೋಹಿ, ವಕೀಲನನ್ನು ವಿಚಾರಣೆ ಮಾಡಬೇಕು. ಈ ಘಟನೆ ನಡೆಯಲು ಪ್ರೇರೆಪಿಸಿದವರನ್ನು ಹಾಗೂ ಇವನ ಹಿಂದಿರುವವರನ್ನು ವಿಚಾರಿಸಿ ದೇಶದ್ರೋಹ ಪ್ರಕರಣ ದಾಖಲಿಸಿ, ದೇಶದಿಂದ ಗಡಿಪಾರು ಮಾಡಬೇಕು” ಎಂದು ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷರು ಶಿವಾನಂದ ತಮ್ಮಣ್ಣನವರ ಅಗ್ರಹಿಸಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಪ್ರಿಂ ಕೋರ್ಟಿನ ಸಭಾಂಗಣದಲ್ಲಿ ನ್ಯಾಯಮೂರ್ತಿಗಳು ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ವಕೀಲರನ್ನು ದೇಶದಿಂದ ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. 

“ಸುಪ್ರೀಂ ಕೋರ್ಟಿನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆ ನಿಜಕ್ಕು ಖಂಡನಿಯ. ನ್ಯಾಯಮೂರ್ತಿಗಳಿಗೆ ಈ ರೀತಿ ಆದರೆ ಇನನ್ನೂ ಜನಸಾಮಾನ್ಯರ ಗತಿಯೇನು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ನೇಲದ ಕಾನೂನು ಹಾಗೂ ಸಂವಿಧಾನಿಕ ಸ್ಥಾನಗಳನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ದೇಶದ ಸರ್ವೋಚ್ಚ ನ್ಯಾಯಾಪಿಠಕ್ಕಾದ ದೊಡ್ಡ ಅಪಮಾನ. ದಲಿತ ಸಮುದಾಯದಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋದಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದು ಎಪ್ಪತೈದು ವರ್ಷಗಳ ನಂತರವು ಮನುವಾದಿಗಳ ಮನಸಿನಲ್ಲಿ ಭದ್ರವಾಗಿ ಉಳಿದುಕೊಂಡಿದೆ, ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಎಂಟು ಎಕರೆ ಕಬ್ಬು ಸುಟ್ಟು ಕರಕಲು

“ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಗವಾಯಿ ಅವರ ತಾಯಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮವೊಂದರ ಆಹ್ವಾನ ಸ್ವೀಕರಿಸದಿದ್ದಕ್ಕೆ ಶೂ ಎಸೆಯಲು ಯತ್ನಿಸಿರಬಹುದು ಎಂದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕೃತ್ಯ ಎಸಗಿದ ವಕೀಲನ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಮನವಿ ಸಂದರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...