ಗದಗ | ಕಸ್ತೂರ ಬಾ ಬಾಲಕಿಯರ ವಸತಿ ನಿಲಯಕ್ಕೆ ಹೊಸ ಕಟ್ಟಡ ನಿರ್ಮಿಸಲು ಆಗ್ರಹ

Date:

ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರ ಬಾ ಬಾಲಕಿಯರ ವಸತಿ ನಿಲಯದ ಕೊಠಡಿಗಳು ಶಿಥಿಲಗೊಂಡಿವೆ. ಅವುಗಳನ್ನು ದುರಸ್ತಿ ಮಾಡಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ಪಡೆ (ಕರವೇ) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಕಾರ್ಯಕರ್ತರು, “ವಸತಿ ನಿಲಯದ ಕಟ್ಟಡ ಹಾಳಾಗಿದ್ದು ಮಳೆ ನೀರು ಕಟ್ಟಡದ ಒಳಗಡೆ ಸೋರಿ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆಗಿದ್ದು, ವಸತಿಗೆ ಅನಾನುಕೂಲವಾಗಿದೆ” ಎಂದು ಆರೋಪಿಸಿದ್ದಾರೆ.

ಮನವಿ‌ ಸಲ್ಲಿಸಿ ಮಾತನಾಡಿದ ಕರವೇ ಮುಖಂಡ ಚೇತನ ಕಣವಿ ಮಾತನಾಡಿ, “ಶಾಲೆಗೆ ಸರಿಯಾದ ಜಾಗದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸತಿ ನಿಲಯದ ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲದಂತಾಗಿದೆ ಈಗಿನ ಕರ್ನಾಟಕ ಕಸ್ತೂರಬಾ ವಸತಿ ನಿಲಯದ ಆವರಣದಲ್ಲಿ ನೀರು ನಿಂತಿದ್ದರಿಂದ ವಿದ್ಯಾರ್ಥಿಗಳ ಜೀವನ ನರಕ ಸದೃಶ ವಾತಾವರಣದ ನಿರ್ಮಾಣ ವಾಗಿದೆ. ಅದರಿಂದ ಈ ಕೂಡಲೇ ಗೋಜನೂರ ಗ್ರಾಮದ ಕರ್ನಾಟಕ ಕಸ್ತೂರಬಾ ವಸತಿ ನಿಲಯಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡಬೇಕು, ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರವಾಗಿ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸುವ ವೇಳೆ ಕರವೇ ಕಾರ್ಯಕರ್ತರು ಬಸನಗೌಡ ಪಾಟೀಲ್, ದಾವಲಸಾಬ ಆನಿ, ಪ್ರವೀಣ ವಡಕಣ್ಣವರ, ಶಂಕ್ರಪ್ಪ ಸವಣೂರು, ಪ್ರಭು ಕೊಂಡಿಕೊಪ್ಪ ಇನ್ನೂ‌ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...