ಗದಗ | ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯ

Date:

ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮುಖಂಡರು ಮನವಿ ಸಲ್ಲಿಸಿದರು.

ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶರಣು ಗೋಡಿ ಮಾತನಾಡಿ, “ನಮ್ಮ ಜಿಲ್ಲೆಯಲ್ಲಿ ಹರಿದಿರುವ ತುಂಗಭದ್ರಾ ನದಿಯಿಂದ ಸುಮಾರು 25 ವರ್ಷಗಳ ಹಿಂದೆ ಕುಡಿಯುವ ನೀರಿನ ಯೋಜನೆಯನ್ನು, ಹಾವೇರಿ ಜಿಲ್ಲೆಯ ಮೇವುಂಡಿ ಜಾಕ್ ವೆಲ್‌ನಿಂದ ಲಕ್ಷ್ಮೇಶ್ವರ ನಗರಕ್ಕೆ ಕುಡಿಯುವ ನೀರಿನ ಯೋಜನೆ ಸಾಕಾರವಾಗಿತ್ತು” ಎಂದರು.

“ಆದರೆ 25 ವರ್ಷಗಳ ನಂತರ ಆ ಪೈಪ್‌ಲೈನ್‌ಗಳು ತುಕ್ಕು ಹಿಡಿದು ಹಲವೆಡೆ ಸೋರುತ್ತಿವೆ. ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಮೇವುಂಡಿ ಜಾಕ್‌ವೆಲ್‌ವರೆಗೂ ತುಂಗಭದ್ರ ನದಿಯ ಹಮ್ಮಿಗಿ ಡ್ಯಾಮಿನ ಹಿನ್ನೀರು ಮೇವುಂಡಿ ಹದ್ದಿನವರೆಗೂ ಇರುತ್ತದೆ. ಬೇಸಿಗೆ ಕಾಲದಲ್ಲಿ ನದಿ ನೀರು ಖಾಲಿಯಾಗಿ ಲಕ್ಷ್ಮೇಶ್ವರದ ಜನತೆ ಕುಡಿಯುವ ನೀರಿಗೆ ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಹಮ್ಮಿಗಿ ಡ್ಯಾಮಿನ ಹಿನ್ನೀರನ್ನು ಗುಮ್ಮಾಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ನಮ್ಮ ಆಗ್ರಹ” ಎಂದು ಶರಣು ಗೋಡಿ ತಿಳಿಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ನಾಗೇಶ್ ಅಮರಪುರ, ಪ್ರವೀಣ್ ಆಚಾರಿ, ನಾಗರಾಜ್ ಅಣ್ಣಿಗೇರಿ, ಇಸ್ಮಾಯಿಲ್ ಅಡೂರು, ವಿನಾಯಕ್ ಛತ್ರಭಾವಿ, ಮಹಮ್ಮದಾಲಿ ಶಿಗ್ಗಾವಿ, ಮೊಯಿನುದ್ದಿನ್ ಮನಿಯಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...