ಗದಗ | ಆಟೋ ಸ್ಟ್ಯಾಂಡ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ಚಾಲಕರಿಂದ ತಹಶೀಲ್ದಾರ್‌ಗೆ ಮನವಿ

Date:

ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಆಟೋಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್ ಕಲ್ಪಿಸಿ, ನಮಗೆ ಯಾರು ತಂಟೆ ತಕರಾರು ಮಾಡದಂತೆ ನಮಗೆ ಆಟೋ ಚಲಾಯಿಸಿಕೊಂಡು ನಮ್ಮ ಬದುಕನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಯಂಗ್ ಇಂಡಿಯಾ ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೇಸಾಬ್ ಮುಲ್ಲಾ ಮನವಿ ಮಾಡಿದರು.

ಯಂಗ್ ಇಂಡಿಯಾ ಪರಿವಾರ ಆಟೋ ಚಾಲಕರು ಮತ್ತು ಮಾಲಕರ ಸಂಘವು ಆಟೋ ಚಾಲಕರಿಗೆ ಆಟೋ ಸ್ಟ್ಯಾಂಡ್ ವ್ಯವಸ್ಥೆ ಕಲ್ಪಿಸುವಂತೆ ಗದಗ ಜಿಲ್ಲೆಯ ಮುಂಡರಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಸುಮಾರು ಪಟ್ಟಣದಲ್ಲಿ 40-45 ಆಟೋ ವಾಹನ ಚಾಲಕರು ಆಟೋ ವಾಹನವನ್ನು ಚಲಾಯಿಸುತ್ತಾ ನಮ್ಮ ಜೀವನವನ್ನು ನಡೆಸಿಕೊಂಡು ಬಂದಿದ್ದೇವೆ. ನಗರದಲ್ಲಿ ಒಟ್ಟು 45 ಕುಟುಂಬದವರು ಆಟೋ ದುಡಿಮೆಯ ಮೇಲೆ ನಮ್ಮ ಬದುಕು ಅವಲಂಬನೆಯಾಗಿರುತ್ತದೆ. ಸುಮಾರು  20-25 ವರ್ಷಗಳಿಂದ ಆಟೋ ವಾಹನವನ್ನು ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಹಚ್ಚಿ ಓಡಿಸುತ್ತಾ ಬಂದಿರುತ್ತೇವೆ. ಈಗ ನಾವು ವಾಹನವನ್ನು ಹಚ್ಚುವ ಸ್ಥಳದಲ್ಲಿ ಬೃಹತ್ ಕಟ್ಟಡ ನಿರ್ಮಾಣವಾಗಿದ್ದು, ನಮ್ಮ ವಾಹನವನ್ನು ನಿಲ್ಲಲು ಬಿಡುತ್ತಿಲ್ಲ” ರಾಜೇಸಾಬ್ ಮುಲ್ಲಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241113 WA0006

ಇದರಿಂದ ನಮಗೆ ವಾಹನವನ್ನು ನಿಲ್ಲಿಸಲು ಕೊಪ್ಪಳ ಕ್ರಾಸ್‌ನಲ್ಲಿ ಎಲ್ಲಿಯೋ ಜಾಗ ಇಲ್ಲದಂತಾಗಿದೆ. ಕೊಪ್ಪಳ ಕ್ರಾಸಿನಲ್ಲಿಯೇ ಎರಡು ಆಟೋ ವಾಹನಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್‌ ಅನ್ನು ನಿರ್ಮಿಸುವ ಮೂಲಕ ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಮಾಜಿ ಪುರಸಭೆ ಸದಸ್ಯ ಸಂತೋಷ ಹಿರೇಮನಿ ಮಾತನಾಡಿ, “ಆಟೋ ಚಾಲಕರು ಸುಮಾರು ಇಪ್ಪತೈದು ವರ್ಷಗಳಿಂದ ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್ ಬಳಿ ಆಟೋ ನಿಲ್ಲಿಸುತ್ತಾ ಬಂದಿದ್ದಾರೆ. ಈಗ  ಆಟೋ ಚಾಲಕರಿಗೆ ಆಟೋ ಹಚ್ಚಬೇಡಿ ಎಂದರೆ ಸರಿಯೇ? ಈ ಆಟೋಗಳಿಂದಲೇ ಅವರ ಜೀವನ ನಡೆಯುತ್ತಿದೆ. ಕೂಡಲೇ ಆಟೋ ಸ್ಟಾಂಡ್ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯಂಗ್ ಇಂಡಿಯಾ ಪರಿವಾರ ಆಟೋ ಚಾಲಕರು ಮತ್ತು ಮಾಲಕರ ಸಂಘ (ರಿ) ಮುಂಡರಗಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...