ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

Date:

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು ಮುಂಡರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್‌ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಸಮನಿ ಅವರು ಕರೆ ನೀಡಿದರು.

ಮುಂಡರಗಿ ಪಟ್ಟಣದಲ್ಲಿ ಕಡ್ಡಾಯ ಮತದಾನ ಹಾಗೂ ಮತದಾನ ಜಾಗೃತಿಗಾಗಿ ತಾಲೂಕು ಸ್ವೀಪ್ ಸಮಿತಿ ಹಾಗೂ ಸರ್ಕಾರಿ ನೌಕರರ ವಿವಿಧ ವೃಂದಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ ಧನಂಜಯ ಎಂ. ಅವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ  ಮಾತನಾಡಿದ ಅವರು, ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ ಎಂದರು.

ಹಾಗಾಗಿ ಎಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು. ಬೇರೆ ಸ್ಥಳಗಳಲ್ಲಿ ವಾಸವಿರುವ ನಿಮ್ಮ ಸಂಬಂಧಿಕರು, ನೆಂಟರ ಮತಗಳು ವ್ಯರ್ಥವಾಗದಂತೆ ಚಲಾಯಿಸಲು ಸ್ವಯಂಪ್ರೇರಣೆಯಿಂದ ತಿಳಿಸಿ ಮೇ ಏಳರಂದು ತಪ್ಪದೇ ಮತ ಚಲಾಯಿಸಲು ಮಾಹಿತಿ ನೀಡಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಮಾತನಾಡಿದ ತಹಸೀಲ್ದಾರ ಧನಂಜಯ. ಎಂ ಅವರು ನಾವೆಲ್ಲ ಭಾರತದ ಸಂವಿಧಾನದ ಅಡಿ ಮತದಾನದ ಹಕ್ಕನ್ನು ಬಳಸಿಕೊಳ್ಳುವ ಮೂಲಕ ಸದೃಢ ನಾಳೆಗಳಿಗಾಗಿ ಮತದಾನದ ಹಕ್ಕನ್ನು ತಪ್ಫದೇ ಚಲಾಯಿಸೋಣ. ಮೇ ಏಳರಂದು ಮತದಾನ ಮಾಡುವುದು ಅರ್ಹ ಮತದಾರರ ಜವಾಬ್ದಾರಿ ಹಬ್ಬ ಸಂಭ್ರಮದಂತಿರಲಿ. ಸಾರ್ವಜನಿಕರು ತಮ್ಮ ನೆರೆ ಹೊರೆಯಲ್ಲೂ ಉಳಿದವರಿಗೆ ಮತದಾನದ ಬಗೆಗೆ ಜಾಗೃತಿ ಮೂಡಿಸಿ ಮತ ಹಾಕಲು ತಿಳವಳಿಕೆ ಮೂಡಿಸಬೇಕು ಎಂದರು.

ತಾಲೂಕಿನ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಸಂಘ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ, ದೈಹಿಕ ಶಿಕ್ಷಕರ ಸಂಘ, ಇನ್ನುಳಿದ ವೃಂದ ಸಂಘಗಳ ಸದಸ್ಯರು ಭಾಗವಹಿಸಿದ್ದ ಮತದಾನ ಜಾಗೃತಿ ಬೈಕ್ ಜಾಥಾ ತಾಲೂಕು ಪಂಚಾಯತಿ ಆವರಣದಿಂದ ಬಸ್‌ ನಿಲ್ದಾಣದ ಮಾರ್ಗವಾಗಿ ಅಂಬಾಭವಾನಿ ನಗರದಿಂದ ಹಾಯ್ದು ಮೇನ್ ಬಜಾರ್, ಕೋಟೆ ಭಾಗದ ಮೂಲಕ ಸಂಚರಿಸಿ ಕೊಪ್ಪಳ ಕ್ರಾಸ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಘೋಷಣೆಗಳನ್ನು ಕೂಗಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಪಡ್ನೇಶ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ, ತಾಲೂಕು ಪಂಚಾಯತ್‌ ಸಿಬ್ಬಂದಿ, ತಾಲೂಕಿನ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ, ದೈಹಿಕ ಶಿಕ್ಷಕರ ಸಂಘ, ಇನ್ನುಳಿದ ಶಿಕ್ಷಕರ ವೃಂದ ಸಂಘಗಳ ಸದಸ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...