ಗದಗ | ವಿಶೇಷ ಅಭಿಯಾನ ನಡೆಸಿ ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವಂತೆ ಉಪನಿರ್ದೇಶಕರ ಸೂಚನೆ

Date:

ಶಿಕ್ಷಣ ಇಲಾಖೆ ಹಾಗೂ ಸರ್ವ ಶಿಕ್ಷಣ ಅಭಿಯಾನದ ಮುಖ್ಯ ಗುರಿ ಪ್ರತಿಯೊಂದು ಮಗುವನ್ನು ಪ್ರಾಥಮಿಕ ಶಿಕ್ಷಣದ ಮುಖ್ಯ ವಾಹಿನಿಗೆ ಸೇರಿಸುವುದು, ಅವರಿಗೆ ಉಚಿತ ಮತ್ತು ಕಡ್ಡಾಯದ ಶಿಕ್ಷಣ ದೊರೆಯುವಂತೆ ಮಾಡುವುದಾಗಿದೆ. ಪ್ರತಿಯೊಂದು ಮಗುವೂ ಯಾವುದಾದರೊಂದು ಸರ್ಕಾರಿ ಶಾಲೆಗೆ ಸೇರಲೇಬೇಕು. ಈ ದಿಸೆಯಲ್ಲಿ ಗದಗ ಜಿಲ್ಲೆಯಲ್ಲಿ‌ ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದೆನ್ನುವ ಕಳಕಳಿಯಿಂದ ಇಲಾಖೆಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಗದಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಅವರು ತಾವಿರುವ ಮನೆಯಿಂದ ಹೊರವಲಯದಲ್ಲಿ ವಾಯುವಿಹಾರಕ್ಕೆ ತೆರಳಿದಾಗ ಗುಡಿಸಲೊಂದನ್ನು ಕಂಡರು. ಅಲ್ಲಿರುವ ಕುಟುಂಬವನ್ನು ಮಾತನಾಡಿಸಿದಾಗ ಅವರಿಗೆ ಇಬ್ಬರು ಮಕ್ಕಳಿರುವ ಸಂಗತಿ ತಿಳಿಯಿತು. ಅವರ ಶಿಕ್ಷಣದ ಬಗ್ಗೆ ವಿಚಾರಿಸಿದಾಗ ಶಾಲಾ ವಯಸ್ಸಿನ ಎರಡು ಮಕ್ಕಳು ಶಾಲೆಯ ಮುಖವನ್ನೇ ನೋಡಿರದಿರುವುದು ಅಚ್ಚರಿ ಮೂಡಿಸಿತು.

ಕುಮಾರ, ಸಂತೋಷ, ಶರಣಪ್ಪ, ಬಜಪ್ಪನವರ ಹಾಗೂ ಶ್ರಾವಣಿ ಶರಣಪ್ಪ ಭಜಪ್ಪನವರ ಇಬ್ಬರು ಮಕ್ಕಳು ಶಾಲೆಗೆ ಸೇರದಿರುವ ಕುರಿತು ಪೋಷಕರನ್ನು ವಿಚಾರಿಸಿದಾಗ ಎಲ್ಲಿಯಾದರೂ ಸಮೀಪದ ಶಾಲೆಗಳಲ್ಲಿ ಇವರ ದಾಖಲಾತಿ ಆಗಿದೆಯೇ ಹೇಗೆಂದು ಶಿಕ್ಷಣ ಸಂಯೋಜಕರಿಂದ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆಗೆ ಒಳಪಡಿಸಿದರು. ಯಾವ ಶಾಲೆಯಲ್ಲಿಯೂ ಇವರ ಹೆಸರು ದಾಖಲಾಗದಿರುವುದನ್ನು ಮನವರಿಕೆ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧಾರ್ ಕಾರ್ಡ್‌ ಇಲ್ಲದಿರುವುದರಿಂದ ಶಾಲೆಗೆ ದಾಖಲು ಮಾಡಲು ಆಗಲಿಲ್ಲವೆಂದು ಪಾಲಕರು ತಿಳಿಸಿದಾಗ ಕೂಡಲೇ ಆಧಾರ್‌ ಕಾರ್ಡ್‌ ಮಾಡಿಸಲು ಕ್ರಮ ಕೈಗೊಳ್ಳಲಾಯಿತು. ಅಲ್ಲದೇ, ಅವರ ಗುಡಿಸಲಿನ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-9 ಆದರ್ಶ ನಗರ ಗದಗ ಇಲ್ಲಿ ಸೆ.30ರಂದು ಉಪನಿರ್ದೇಶಕರು ಮಕ್ಕಳ ದಾಖಲಾತಿ ಮಾಡಿಸಿ ಅವರಿಗೆ ಸ್ಥಳದಲ್ಲಿಯೇ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ಗೋಪಾಲ ದಾಸರ ಹಾಗೂ ಸಿಆರ್‌ಪಿ ಜೊತೆಗಿದ್ದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | 6 ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ;‌ ರೈತರಿಗೆ ಅನ್ಯಾಯ: ಆರೋಪ

ಗದಗ ಜಿಲ್ಲೆಯಲ್ಲಿ ಸರ್ವ ಶಿಕ್ಷಣ ಅಭಿಯಾನ ಬಂದ ಮೇಲೆ ಶಾಲೆಯಿಂದ ಹೊರಗುಳಿದ ಇಂಥ ಮಕ್ಕಳನ್ನು ಗುಡಿಸಲುಗಳಲ್ಲಿ ಕಣ್ಣಿಗೆ ಕಾಣದೇ ಶಿಕ್ಷಣದಿಂದ ವಂಚಿತರಾಗಿದ್ದ ಮಕ್ಕಳನ್ನು ಒಂದು ತಿಂಗಳಲ್ಲಿ ವಿಶೇಷ ಅಭಿಯಾನ ನಡೆಸಿ ಶಾಲೆಗೆ ದಾಖಲು ಮಾಡಿಕೊಳ್ಳುವಂತೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...