ಗದಗ | ಡಿಸೆಂಬರ 20ಕ್ಕೆ ಬೆಂಗಳೂರಿನಲ್ಲಿ ದೇವದಾಸಿ ಮಹಿಳೆಯರು, ಮಕ್ಕಳ ಆಹೋರಾತ್ರಿ ಧರಣಿ

Date:

“ಕರ್ನಾಟಕ ರಾಜ್ಯದ ಸಾಮಾಜಿಕ ದೌರ್ಜನ್ಯ ಹಾಗೂ ಬಹಿಷ್ಕಾರಕ್ಕೊಳಗಾದ ಮತ್ತು ಆರ್ಥಿಕವಾಗಿ ಪರಾವಲಂಬಿಗಳಾದ ದಲಿತರು, ದಲಿತ ದೇವದಾಸಿ ಮಹಿಳೆಯರು ಮತ್ತು ಒಂಟಿ ಮಹಿಳೆಯರು ಹಾಗೂ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಮಸಣ ಕಾರ್ಮಿಕರು ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ 20 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲು ನಿರ್ಧರಿಸಲಾಗಿದೆ” ಎಂದು ಸಂಘಟನೆಯ ಮಾಳವ್ವ ಅರಳಿಗಿಡದ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಮ್ಮನ್ನು ಕಡೆಗಣಿಸುತ್ತಿವೆ. ದೇಶ ಹಾಗೂ ರಾಜ್ಯದಲ್ಲಿ ಸಾಮಾಜಿಕ ಮತ್ತುಆರ್ಥಿಕ ತಾರತಮ್ಯ, ಬಹಿಷ್ಕಾರಗಳನ್ನು ನಿವಾರಿಸುವಲ್ಲಿ ಬಹುತೇಕ  ವಿಫಲವಾಗಿವೆ. ಇದರಿಂದ ಅತ್ಯಂತ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲೂ ರಾಜ್ಯದಲ್ಲಿ ಶೇ 80ಕ್ಕೂ ಅಧಿಕ ಸಮುದಾಯಗಳು ಈಗಲೂ ಜಾತಿ, ಲಿಂಗ ತಾರತಮ್ಯ, ಅಸ್ಪೃಶ್ಯತೆ, ದೇವದಾಸಿ ಪದ್ದತಿ, ಬಿಟ್ಟ ಚಾಕರಿ ಮತ್ತು ಬಹಿಷ್ಕಾರಕ್ಕೊಳಗಾದ ಒಂಟಿ ಮಹಿಳೆಯಾಗಿ ಜೀವನ ನಡೆಸುತ್ತಿದ್ದಾರೆ” ಎಂದರು.

ಜಿಲ್ಲಾ ಗೌರವಾಧ್ಯಕ್ಷರು ಬಾಲು ರಾಠೋಡ ಮಾತನಾಡಿ, “ದೇವದಾಸಿ ಮಹಿಳೆಯರ ಸಂಪೂರ್ಣ ಗಣತಿ, ವಯೋಮಿತಿ ಹಾಕದೆ ಎಲ್ಲರನ್ನು ಸೇರಿಸಬೇಕು. ಎಲ್ಲರಿಗೂ ಪುನರ್ವಸತಿ ಮಾಡಬೇಕು. ಮೂರು ತಲೆಮಾರಿನ  ಸದಸ್ಯರನ್ನು  ತಕ್ಷಣವೇ ಗಣತಿ ಮಾಡಬೇಕು. ದೇವದಾಸಿ ಪದ್ದತಿ  ನಿಷೇಧದ  ಹಳೆಯ ಕಾಯ್ದೆಗಳನ್ನು ತೋರಿಸಿ ದೇವದಾಸಿ ಮಹಿಳೆಯರನ್ನು ಗಣತಿಯಾಚೆ ಇಡುವುದನ್ನು ತಡೆಯಬೇಕು. ಇವರು ತೀರ್ವ ಆರ್ಥಿಕ ದುಸ್ಥಿತಿ ಮತ್ತು ಹಿರಿತನದ  ಆಧಾರದಲ್ಲಿ ಕಾಲಮಿತಿಯೊಳಗೆ ಸ್ವಾವಲಂಬಿ ಬದುಕನ್ನು ಸಾಧಿಸುವಂತೆ ಪುನರ್ವಸತಿಗೆ ಕ್ರಮವಹಿಸಬೇಕು” ಎಂದು ಒತ್ತಾಯಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂಟಿ ಮಹಿಳೆಯರು, ಮಸಣ ಕಾರ್ಮಿಕರು ಮತ್ತು ದೇವದಾಸಿ ಮಹಿಳೆಯರಿಗೆ, ಬಡ ದಲಿತರಿಗೆ ಮಾಸಿಕ ಸಾಮಾಜಿಕ ಪಿಂಚಣಿಯನ್ನು 6000 ರೂ ನೀಡಬೇಕು” ಎಂದು ಒತ್ತಾಯಿಸಲಾಗುವದು

ಪತ್ರಿಕಾ ಗೋಷ್ಠಿಯಲ್ಲಿ ದೇವದಾಸಿ ಮಕ್ಕಳ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರು ಮಲ್ಲಿಕಾರ್ಜುನ ಮಾದರ, ಕನಕಪ್ಪ ರಾಂಪೂರ, ಗೀರಿಜವ್ವ ಪೂಜಾರ, ಆನಂದ ಮಾದರ, ಅಂದವ್ವ ನಂದಾಪೂರ, ಶಾಂತವ್ವ ಮಾದರ, ಕನಕರಾಯ ಹಾದಿಮನಿ ಲ್, ಬಸವರಾಜ ಮಾದರ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...