ಗದಗ | ದಲಿತ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸಲು ಡಿಎಸ್ಎಸ್ ಮನವಿ

Date:

“ಶಿರಹಟ್ಟಿ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ದಲಿತ ಸಮುದಾಯವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ದಲಿತ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ದಲಿತ ಮುಖಂಡ ಮುತ್ತು ಬಾವಿಮನಿ ಒತ್ತಾಯಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ತಹಸೀಲ್ದಾರ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕಿನಾದ್ಯಾಂತ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ, ಇಂದು ಸೋಮವಾರ ತಹಶೀಲ್ದಾರ್ ಕೆ ರಾಘವೇಂದ್ರ ರಾವ್. ಅವರಿಗೆ ಮನವಿ ಸಲ್ಲಿಸಿದರು.

ಕಡಿಎಸ್ಎಸ್  ತಾಲೂಕು ಸಂಚಾಲಕ ರವಿ ಗುಡಿಮನಿ ಮಾತನಾಡಿ, “ತಾಲೂಕಿನಾದ್ಯಾಂತ ದಲಿತ ಸಮುದಾಯಕ್ಕೆ ಅವಶ್ಯವಿದ್ದ ಕಡೆ ಹೊಸ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಹಾಗೂ ಈಗಿರುವ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು. ಕೆಲವು ಗ್ರಾಮಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ದಲಿತರಿಗೆ ಮಂಜೂರಾದ ನಿವೇಶನಗಳಿಗೆ ಕೂಡಲೇ ಹಕ್ಕು ಪತ್ರಗಳನ್ನು ನೀಡಬೇಕು. ಪ್ರತಿಯೊಂದು ಗ್ರಾಮದ ದಲಿತ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಶೀಘ್ರವಾಗಿ ಅಭಿವೃದ್ಧಿಪಡಿಸಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಬೇಕು” ಒತ್ತಾಯಿಸಿದರು. ಎಂದು ಹೇಳಿದರು.

“ತಹಸೀಲ್ದಾರರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು, ನಮ್ಮ ಮನವಿಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ  ಕರ್ನಾಟಕ ದಲಿತ ಸಂಘರ್ಷ  ಸಮಿತಿಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಮನವಯಲ್ಲಿ ಕಡಿಎಸ್ಎಸ್ ಜಿಲ್ಲಾ ಸಂಘಟನಾ ಮಹಿಳಾ ಸಂಚಾಲಕರು ಅಂಜನಾದೇವಿ ಮ್ಯಾಗೇರಿ, ಎಂ. ಕೆ. ಲಮಾಣ, ಪ್ರಕಾಶ್ ಬಡನ್ನವರ, ಚಂದ್ರು ಪೋತರಾಜ, ಹನುಮಂತಪ್ಪ ಬಡ್ಡೆಪ್ಪನವರ, ಅಶೋಕ್ ಬಡನ್ನವರ, ರಮೇಶ್ ಗುಡಿಮನಿ, ಶಿವನಗೌಡ ಪಾಟೀಲ, ಯಲ್ಲಪ್ಪ ಗೋಡನ್ನವರ, ಪರಮೇಶ್ ಗುಡಿಮನಿ, ಸುಭಾಷ್ ಮುಳಗುಂದ, ಮರಿಯಪ್ಪ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ವರದಿ: ಅಣ್ಣಪ್ಪ ಗುತ್ತೆಮ್ಮನವರ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...