ಗದಗ | ಶಿರೋಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ

Date:

ಮತದಾನ ಎಂಬುದು ಪ್ರತಿ  ಭಾರತೀಯನ ಹಕ್ಕು  ಆಗಿದೆ.  ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು,  ಮತದಾನದ ದಿನವಾದ ಮೇ-07 ರಂದು ಕಡ್ಡಾಯವಾಗಿ ತಪ್ಪದೇ  ಮತ ಚಲಾಯಿಸಬೇಕೆಂದು, ನರಗುಂದ-68 ಸಹಾಯಕ ಚುನಾವಣಾಧಿಕಾರಿ ಡಾ. ಹಂಪಣ್ಣ ಸಜ್ಜನ್ ಅವರು ತಿಳಿಸಿದರು.

ಲೋಕಸಭಾ ಚುನಾವಣೆ-2024ರ ಅಂಗವಾಗಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಗದಗ ಜಿಲ್ಲೆಯ ನರಗುಂದ ತಾ.ಪಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ನರಗುಂದ ತಾಲೂಕಿನ ಶಿರೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುನಾವಣಾ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಚುನಾವಣಾ ಜಾಗೃತಿ ಕುರಿತು ಚುನಾವಣಾ ಆಯೋಗದಿಂದ 2 ನಿಮಿಷಗಳ ವಿಡಿಯೋ ಚಿತ್ರಣ ಕೂಡಾ ಪ್ರಚುರ ಪಡಿಸಲಾಯಿತು. ತಾ,ಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದರ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರದೀಪ ನಾಡಗೇರ, ವ್ಯದ್ಯಾಧಿಕಾರಿ  ಡಾ .ಪಂಕಜಾ ಮೈತ್ರಿ, ಪಿಡಿಒ ವಾಯ್‌.ಬಿ.ಸಂಕನಗೌಡ್ರ, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಪಂಚಾಯತ ಸಿಬ್ಬಂದಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...