ಗದಗ | ಶೈಕ್ಷಣಿಕ ಪ್ರಗತಿಗೆ ಒತ್ತು ಕೊಡುವ ಜಿಲ್ಲೆಯಾದರೂ; ಫಲಿತಾಂಶ ಸುಧಾರಣೆ ಸಮಾಧಾನಕರವಿಲ್ಲ: ಶಾಸಕ ಜಿ. ಎಸ್ ಪಾಟೀಲ

Date:

“ಒಬ್ಬ ಶ್ರೇಷ್ಠ ತತ್ವಜ್ಞಾನಿ, ರಾಷ್ಟಪತಿ ಡಾ. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆಯಾಗಿ ಆಚರಣೆ‌ ಮಾಡುತ್ತಿರುವುದು ಸಂತಸ ತಂದಿದೆ. ಗದಗ ಜಿಲ್ಲೆ ಶೈಕ್ಷಣಿಕ ಪ್ರಗತಿಗೆ ಒತ್ತು ಕೊಡುವ ಜಿಲ್ಲೆಯಾಗಿದೆ. ಆದರೂ ಪಲಿತಾಂಶ ಸುದಾರಣೆ ಅಷ್ಟೇನು ಸಮಾದಾನಕರವಿಲ್ಲ. ಇನ್ನು ಮುಂದಾದರೂ ಸಹ ಇನ್ನಷ್ಟು ಪಲಿತಾಂಶ ಸುದಾರಣೆಗೆ ಶ್ರಮಿಸೋಣ” ಎಂದು ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಗದಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

“ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರು ಸಹ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಾರೆ. ಶಾಲೆಗಳ ಕಟ್ಟಡ, ಶೌಚಾಲಯ ಸುದಾರಣೆ ದುರಸ್ತಿಗೆ ಸರ್ಕಾರಕ್ಕೆ ಒತ್ತಾಯಿಸಿ, ಅನುದಾನ ಬಿಡುಗಡೆಗೆ ಪ್ರಯತ್ನ ಮಾಡುತ್ತಿದ್ದೇವೆ. ಶಿಕ್ಷಕರಿಗೆ ಇರುವ ಕೊರತೆಗಳ ಬಗ್ಗೆ ಸಹ ಸಮಾಲೋಚನೆ ಮಾಡಲಾಗುತ್ತಿದೆ. ನಿಮ್ಮ ಬೇಡಿಕೆಗಳನ್ನು ಇಡೇರಿಸಲು ಪ್ರಯತ್ನ ಸಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಂದ್ರದಂತೆ, ರಾಜ್ಯ ಶಿಕ್ಷಣ ನೀತಿಯಲ್ಲಿ ಅಷ್ಟೇನು‌ ಬದಲಾವಣೆ ಇರದು, ಮಕ್ಕಳ ಶಿಕ್ಷಣಕ್ಕೆ ರಾಜ್ಯ ಶಿಕ್ಷಣ ನೀತಿ ಸಹ ಹೆಚ್ಚು ಸಹಕಾರಿಯಾಗಲಿದೆ ಎಂದರು. ಈ ವರ್ಷ ಪಬ್ಲಿಕ್ ಶಾಲೆ ಆರಂಬಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆದಿದೆ. ಶಿಘ್ರದಲ್ಲೆ ಇನ್ನಷ್ಟು ಪಬ್ಲಿಕ್ ಶಾಲೆ ಆರಂಬಿಸಲು ಕ್ರಮ ವಹಿಸಲಾಗುವುದು. ಅಲ್ಲದೇ ಶಿಕ್ಷಕರ‌ ನೇಮಕಕ್ಕೂ ಶ್ರಮಿಸಲಾಗುತ್ತಿದೆ. ಒಟ್ಟಾರೆ ಶಿಕ್ಷಣ ಕ್ಷೇತ್ರದ ಅಭಿರುದ್ದಿಗೆ ನಮ್ಮ‌ ಸರ್ಕಾರದ ಆಧ್ಯತೆ ನೀಡಿದೆ” ಎಂದು ಜಿ ಎಸ್ ಪಾಟೀಲ ತಿಳಿಸಿದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ದೇಶದಲ್ಲಿ ಉನ್ನತ‌ಮಟ್ಟದ ಗೌರವಯುತ ಹುದ್ದೆ ಎಂದರೆ ಅದು ಶಿಕ್ಷಕ. ಜೀವನದಲ್ಲಿ ಶಿಕ್ಷಕ ಪಾತ್ರ ಬಹುದೊಡ್ಡದಾಗಿದೆ. 

ಶಾಲಾ ಶಿಕ್ಷಕ ವರ್ಗಾವಣೆ ಆದಾಗ ಆ ಶಾಲೆ ಮಕ್ಕಳು ಗ್ರಾಮಸ್ಥರು ವರ್ಗಾವಣೆ ಆಗಿರುವ ಶಿಕ್ಷರನ್ನು ಬಿಳ್ಕೊಡಲು ಒಪ್ಪುವದಿಲ್ಲ. ಅನಿವಾರ್ಯವಾಗಿ ಕಳಿಸುತ್ತಾರೆ. ಇಂತಹ ಅನೇಕ ಉತ್ತಮ ಶಿಕ್ಷಕರನ್ನು ನಾವಿಂದು ಸಮಾಜದಲ್ಲಿ ಕಾಣುತ್ತೇವೆ” ಎಂದರು.

“ಶಾಲೆಯಲ್ಲಿ ಪಾಠದೊಂದಿಗೆ ಮೌಲ್ಯಯುತ ಶಿಕ್ಷಣವನ್ನು ಸಹ ಶಿಕ್ಷಕರು ಮಕ್ಕಳಿಗೆ ಕಲಿಸಬೇಕು ಎಂದು ಅಭಿಪ್ರಾಯ ಪಟ್ಟರು. ಶಿಕ್ಷಕರು ನಿವೃತ್ತಿ ಆದ ದಿನವೇ ಅವರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ನಿವೃತ್ತಿ ಉಪದಾನಗಳು ಲಭ್ಯವಾಗಬೇಕು” ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, “ದೇಶದ ಉಪರಾಷ್ಟ್ರಪತಿಗಳಾಗಿ, ರಾಷ್ಟ್ರಪತಿಯಾಗಿ ಅಪಾರ ಸೇವೆ ಸಲ್ಲಿಸಿದವರು ಡಾ. ರಾಧಾಕೃಷ್ಣನ್ ಅವರು. ರಾಧಾಕೃಷ್ಣನ್ ಅವರು ದೇಶಕ್ಕೆ ಹಾಗೂ ಶಿಕ್ಷಕ ಸಮುದಾಯಕ್ಕೇ ತಮ್ಮದೇ ಆದ ಅಪಾರ ಕೊಡುಗೆ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಾಗೋಣ” ಎಂದರು.

“ಜಿಲ್ಲೆಯಲ್ಲಿ ರಾಜ್ಯ ಪುರಸ್ಕೃತ ಶಿಕ್ಷಕ ಬಿ ಜಿ ಅಣ್ಣಿಗೇರಿ ಅವರು ಸಹ ಉತ್ತಮ ಶಿಕ್ಷಕರಾಗಿದ್ದರು. ಅವರ ಹೆಸರನ್ನು ಒಂದು ಉಧ್ಯಾನವನಕ್ಕೆ ಬಿ ಜಿ ಅಣ್ಣಿಗೇರಿ ಎಂದು ನಾಮಕರಣ ಮಾಡಲಾಗಿದೆ” ಎಂದು ಹೇಳಿದರು.

“ನಮ್ಮ ಶಿಕ್ಷಣ ವ್ಯವಸ್ಥೆ ಸರಿ ಇದ್ದರೇ ಎಲ್ಲವೂ ಸುಭದ್ರವಾಗಿರುತ್ತದೆ. ಒಬ್ಬ ಶಿಕ್ಷಕ ಸಮಾಜದ ಎಲ್ಲ ರಂಗಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ವ್ಯಕ್ತಿಗಳನ್ನು ತಯಾರು ಮಾಡುವ ಶಕ್ತಿ ಹೊಂದಿದ್ದಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಎಸ್ ಎನ್ ಬಳ್ಳಾರಿ, ಎಡಿಸಿ ಡಾ. ದುರಗೇಶ್ ಕೆ ಆರ್, ಜಿಪಂ ಉಪಕಾರ್ಯರ್ಶಿ ಸಿ ಆರ್ ಮುಂಡರಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಡಯಟ್‌ದ ಉಪನಿರ್ದೇಶಕರಾದ ( ಅಭಿವೃದ್ಧಿ) ಮಂಗಳಾ ತಾಪಸ್ಕರ್ , ಗದಗ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಸಿ ಕೊರವನವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಶೆಟ್ಟೆಪ್ಪನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...