ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ

Date:

ಸಂಘಟನೆ ಜೊತೆಗೆ ಸಾಯುವವರೆಗೂ ಕೈ ಜೋಡಿಸುವೆ. ಸಂಘಟನೆಗೆ ಎಲ್ಲರ ಸಹಕಾರ ಮುಖ್ಯ ಸಂಘಟನೆಯಲ್ಲಿ ಶಕ್ತಿ ತುಂಬುವುದರ ಜತೆಗೆ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಸಮಾಜದ ಸೇವೆಗೆ ನಾನು ಸದಾ ಬದ್ಧ. ಸಮಾಜದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ನಿಷ್ಠೆಯಿಂದ ನಿರ್ವಹಿಸಬೇಕು ಎಂದು ನಿವೃತ್ತ ಶಿಕ್ಷಕ ಎಚ್ ಎಸ್ ಜೋಗಣ್ಣವರ ಹೇಳಿದರು.

ಗದಗ ಜಿಲ್ಲೆಯ ರೋಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾಜದಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ 50ರ ಸಂಭ್ರಮಚಾರಣೆ ಕುರಿತು ಪೂರ್ವಭಾವಿ ಸಭೆ ಹಾಗೂ ನಿವೃತ್ತ ಶಿಕ್ಷಕ ಎಚ್ ಎಸ್ ಜೋಗಣ್ಣವರ ಅವರಿಗೆ ಮಾಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಮಾಜದ ಮುಖಂಡ ವೀರಪ್ಪ ತೆಗ್ಗಿನಮನಿ ಮಾತನಾಡಿ, “ಸಮಾಜದಲ್ಲಿ, ಸಂಘಟನೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಕೀರ್ತಿ ಜೋಗಣ್ಣವರ ಅವರಿಗೆ ಸಲ್ಲುತ್ತದೆ. ಹೋರಾಟದ ಹಾದಿಯನ್ನು ಯುವಕರಿಗೆ ತಿಳಿಸಿದ್ದಾರೆ. ಸಂಘಟನೆ ಬೆಳವಣಿಗೆಯಲ್ಲಿ ಇವರ ಪಾತ್ರ ಮಹತ್ವ ಸರ್ಕಾರ ರಚನೆ ಮಾಡುವಂತ ಶಕ್ತಿ ಸಂಘಟನೆಗೆ ಇದೆ. ಜಾತಿಗೊಂದು ಸಂಘಟಗಳು ಆಗಿವೆ. ರಾಜಕೀಯ ಪಕ್ಷಕ್ಕೊಂದು ಸಂಘಟನೆಗಳು ಇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜ ಮುಖಂಡ ಮೌನೇಶ ಹಾದಿಮನಿ ಮಾತನಾಡಿ, “ಜೋಗಣ್ಣವರ ಅವರು ಸಮಾಜದ ಜತೆಗೆ ಪ್ರೀತಿ ಒಡನಾಟ ಬಾಂಧವ್ಯ, ಹಾಗೂ ಇತರೆ ಸಮಾಜದ ಜತೆಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಸಂಘಟನೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಮಾಜವನ್ನು ಒಂದುಗೂಡಿಸಿ ಅವರ ಹೋರಾಟ ಸಮಾಜಕ್ಕೆ ಒಂದು ಮಾದರಿಯಾಗಿದೆ. ಆನೇಕ ಹೋರಾಟದ ಮೂಲಕ ಸಮಾಜಕ್ಕೆ ಒಳ್ಳೆಯದನ್ನು ಬಯಸಿದ್ದಾರೆ” ಎಂದು ಹೇಳಿದರು.

ಮಾರುತಿ ಹಾದಿಮನಿ ಮಾತನಾಡಿ, “ಇಂದಿನ ಆಧುನಿಕ ಯುಗದಲ್ಲಿ ಸಂಘಟನೆಗಳು ಇಬ್ಬಾಗವಾಗಿವೆ. ಸಂಘಟನೆ ಒಂದು ಕಡೆ, ಸಮಾಜ ಒಂದು ಕಡೆ ಆಗಿದೆ. ಸಂಘಟನೆ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸಿದ ಕೀರ್ತಿ ಜೋಗಣ್ಣವರ ಅವರಿಗೆ ಸಲ್ಲುತ್ತದೆ. ಅವರ ಶಿಕ್ಷಕ ವೃತ್ತಿ ಜೊತೆಗೆ ಸಂಘಟನೆಯಲ್ಲಿ ಭಾಗಿಯಾಗುವುದರೊಂದಿಗೆ ಇತರರಿಗೆ ಮಾದರಿಯಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಇದೇ ಸಂದರ್ಭದಲ್ಲಿ ಸೋಮು ನಾಗರಾಜ, ಮಂಜುನಾಥ ಬುರಡಿ, ರಮೇಶ ಕಡೆಮನಿ, ಪ್ರಕಾಶ ಹೊಸಳ್ಳಿ, ಸುರೇಶ ನಡುವಿನಮನಿ, ಪರಶುರಾಮ ಹೊಸಮನಿ, ಮುತ್ತಪ್ಪ ಪೂಜಾರ, ಹನುಮಂತ ದ್ವಾಸಲ, ಮುತ್ತಪ್ಪ ಜೋಗಣ್ಣವರ, ಲಕ್ಷಣ ಹೊಸಮನಿ, ಸಂಗಪ್ಪ ಹೊಸಮನಿ, ಬಾಳಪ್ಪ ಭಜೇಂತ್ರಿ, ಮಹಾದೇವಪ್ಪ ಮುಂದಿನಮನಿ, ಪುಂಡಲೀಕ ಮಾದರ, ವೀರಪ್ಪ ತೆಗ್ಗಿನಮನಿ, ಎಸ್ ಎಸ್ ಹಲಗಿ, ಹುಚ್ಚೀರಪ್ಪ ಬಾವಿಮನಿ, ಪರಸಪ ಪೂಜಾರ, ಅಭಿಷೇಕ ಕೊಪ್ಪದ್‌, ರಮೇಶ, ನಂದಿ ಸುರೇಶ, ಹಲಗಿವೀರಪ್ಪ ಬಾವಿಮನಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...