ಗದಗ | ರೈತರ ಸಮಸ್ಯೆಗಳು ರಾಜಕೀಯ ದಾಳಕ್ಕೆ ಬಳಕೆ: ಕುರುಬೂರು ಶಾಂತಕುಮಾರ ಆತಂಕ

Date:

ರೈತರ ಸಮಸ್ಯೆಗಳು ರಾಜಕೀಯ ದಾಳಕ್ಕೆ ಬಳಕೆಯಾಗುತ್ತಿರುವುದನ್ನು ಅರಿತು ಒಗ್ಗಟ್ಟು ಮೂಡಿಸಲು ನಿರಂತರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮಹದಾಯಿ ನಿರಂತರ ಹೋರಾಟ ವೇದಿಕೆಯಿಂದ ರೈತ ಸೇನೆ ಕರ್ನಾಟಕ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ರೈತ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು. ಬಳಿಕ ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪವಿಭಾಗಾಧಿಕಾರಿ ಗಂಗಪ್ಪ, ತಹಶೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಿದರು.

“ಕೆಲವು ರೈತ ಸಂಘಟನೆಗಳು ರಾಜಕೀಯ ಪಕ್ಷಗಳ ಬಾಲಂಗೋಚಿಯಂತೆ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ ದಾಳಕ್ಕೆ ಬಳಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ರೈತ ಸಂಘಟನೆಗಳಲ್ಲಿರುವ ಒಡಕಿನ ಕಾರಣಕ್ಕೆ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಬದಲಿಗೆ ರೈತ ಸಂಘಟನೆಗಳ ಸಂಖ್ಯೆ ಹೆಚ್ಚಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಹೋರಾಟ ಪ್ರತಿಷ್ಠೆಯ ವಿಷಯವಾಗಬಾರದು. ಬದಲಾಗಿ ರೈತರ ಹಿತ ಕಾಯುವಂತಿರಬೇಕು. ಹೃದಯವಂತಿಕೆ ತೋರಿ ಸಾಮೂಹಿಕ ಸಮಸ್ಯೆಗಳ ಪರಿಹಾರಕ್ಕೆ ಒಂದಾಗಿ ಹೋರಾಟ ಮಾಡಬೇಕು. ಎಲ್ಲ ರಾಜಕೀಯ ಪಕ್ಷಗಳು ರೈತರ ಸಮಸ್ಯೆಗಳನ್ನು ರಾಜಕೀಯ ದಾಳಕ್ಕೆ ಬಳಸಿಕೊಳ್ಳುತ್ತಿವೆ. ಬಂಡವಾಳಶಾಹಿಗಳ ಹಿತರಕ್ಷಣೆಗಾಗಿ ಕಾನೂನುಗಳು ಜಾರಿಯಾಗುತ್ತಿವೆ. ಇದರಿಂದ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ” ಎಂದು ಹೇಳಿದರು.

ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಮಾತನಾಡಿ, “ರೈತರಿಗಾಗಿ ಹೋರಾಟ ನಡೆಸಲಾಗುತ್ತಿದೆ. ಆದರೆ ಈ ಹೋರಾಟವನ್ನು ಆರಂಭದಿಂದಲೂ ಹತ್ತಿಕ್ಕುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. ಈಗಲೂ ಮುಂದುವರಿದರೆ ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ” ಎಂದು ಎಚ್ಚರಿಸಿದರು.

“ಮಹದಾಯಿ ಸಮಸ್ಯೆ ರಾಜಕೀಯವಾಗಿ ಬಳಸಿಕೊಳಲು ಯತ್ನಿಸಿದರೆ ನಾವು ಸುಮ್ಮನಿರುವುದಿಲ್ಲ. ನೀರಾವರಿ ಕಾಲುವೆಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು” ಎಂದರು.

ತಮಿಳುನಾಡು ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ ಆರ್ ಪಾಂಡ್ಯನ್ ಸಮಾವೇಶ ಉದ್ಘಾಟಿಸಿ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಹಿಡಿತದಲ್ಲಿದೆ. ಇದನ್ನು ಹೊಡೆದೋಡಿಸಲು ಸಂಘಟಿತ ಹೋರಾಟ ಅಗತ್ಯವಿದೆ” ಎಂದು ಹೇಳಿದರು.

ತಮಿಳುನಾಡಿನ ರೈತ ಸಂಘಟನೆ ಒಕ್ಕೂಟದ ನಾಯಕಿ ಸುಧಾ ಧರ್ಮಲಿಂಗಂ ಮಾತನಾಡಿ, “ಮಹಿಳೆಯರು ಪುರುಷರಷ್ಟೇ ಕೃಷಿಯಲ್ಲಿ ಭಾಗವಹಿಸುತ್ತಿದ್ದಾರೆ. ಅದರೆ ಅವರಿಗೆ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ. ಇದನ್ನು ಪಡೆಯಲು ಈ ಸಂಘಟನೆ ಜೊತೆ ಕೈಜೋಡಿಸಬೇಕು” ಎಂದರು.‌

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲೆನಾಡಿನ ಪ್ರಮುಖ ಬಿಕ್ಕಟ್ಟು, ಪರಿಹಾರ ಮಾರ್ಗ ಕುರಿತು ಶಾಸಕರ ಭವನ-2ರಲ್ಲಿ ದುಂಡು ಮೇಜಿನ ಸಭೆ

ಸಮಾವೇಶಕ್ಕೂ ಮೊದಲು ಪುರಸಭೆಯಿಂದ ಮಹದಾಯಿ ಹೋರಾಟದ ವೇದಿಕೆವರೆಗೆ ರೈತರ ಪ್ರತಿಭಟನಾ ಮೆರವಣಿಗೆ ನಡೆಯಿತು.

ಸಮಾವೇಶದಲ್ಲಿ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕರಬಸಪ್ಪ, ರಾಜ್ಯ ಕಬ್ಬು ಬೆಳೆಗಾರ ಸಂಘದ ಕಾರ್ಯಾಧ್ಯಕ್ಷ ವೀರನಗೌಡ ಪಾಟೀಲ, ಸುರೇಶ ಪಾಟೀಲ, ಕಲಬುರಗಿ ದಯಾನಂದ ಪಾಟೀಲ, ಮಹೇಶ ಬೆಳಗಾಂವಕರ, ಸಿ ಎಸ್ ಪಾಟೀಲ, ಸಂಗಮೇಶ ಕೊಳ್ಳಿಯವರ, ಪರಶುರಾಮ ಎತ್ತಿನಗುಡ್ಡ, ಚಿಕ್ಕಮಗಳೂರಿನ ಎಚ್ ಎನ್ ಸೋಮಶೇಖರಯ್ಯ, ಕಡೂರಿನ ಎಸ್ ಎಂ ಅಜಯ್‌ಕುಮಾರ್‌, ಮೈಸೂರಿನ ಶಿವಸ್ವಾಮಿ, ಮಹದೇವಸ್ವಾಮಿ, ನಾಗಣ್ಣ, ಚಿಕ್ಕಬಳ್ಳಾಪುರದ ಗೋವಿಂದರಡ್ಠಿ, ಕೊಪ್ಪಳದ ಅಂದಪ್ಪ ಹುಬ್ಬಳ್ಳಿ, ಉಮೇಶ ಗೋವನಕೊಪ್ಪ, ಮಲ್ಲಣ್ಣ ಅಲೇಕಾರ, ಸಣ್ಣಫಕೀರಪ್ಪ ಜೋಗಣ್ಣವರ, ವೀರಬಸಪ್ಪ ಹೂಗಾರ, ಹನಮಂತ ಮಡಿವಾಳರ, ಲೀಲಕ್ಕ ಹಸಬಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...