ಗದಗ | ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Date:

ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ಪ್ರಗತಿಪರ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ನಗರದ ಸೋಮನಾಥ ದೇವಸ್ಥಾನದಿಂದ ಪಾದಯಾತ್ರೆ ಮುಖಾಂತರ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ ರೈತರು, ಭಜಾರ ಲೈನ್ ಮುಖಾಂತರ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ಸಾಂಕೇತಿಕವಾಗಿ ಗದಗ-ಲಕ್ಷ್ಮೇಶ್ವರ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದರು.

ಈ ಭಾಗದ ರೈತರ ಗೋವಿನ ಜೋಳದ ಫಸಲು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನು ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ, ಇದರಿಂದ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡ ಟಾಕಪ್ಪ ಸಾತಪತಿ ಮಾತನಾಡಿ, “ಶಿರಹಟ್ಟಿ ಭಾಗದಲ್ಲಿ ಅತಿ ಹೆಚ್ಚು ಗೋವಿನ ಜೋಳ ಬೆಳೆಯನ್ನು ಬೆಳೆದಿದ್ದು ಖರೀದಿ ಕೇಂದ್ರ ಪ್ರಾರಂಭದ ನಿರೀಕ್ಷೆಯಲ್ಲಿದ್ದೇವೆ. ಮನೆಯಲ್ಲಿ ಸಂಗ್ರಹಿಸಿಟ್ಟ ಗೋವಿನ ಜೋಳಕ್ಕೆ ಕೀಟ ಕಾಟ ಪ್ರಾರಂಭವಾಗುವ ಮೊದಲು ಸರಕಾರ ಎಚ್ಚೆತ್ತುಕೊಂಡು ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು. ರೈತರ ಆರ್ಥಿಕ ಸಂಕಷ್ಟಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ವರ್ತಕರು ಹಾಗೂ ದಲ್ಲಾಳಿಗಳು ಗೋವಿನಜೋಳವನ್ನು 1,500ರೂ ಗಳಿಂದ 1.600 ರೂ. ಗಳವರೆಗೆ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಸರಕಾರ ಈ ಕೂಡಲೇ ಖರೀದಿ ಕೇಂದ್ರ ಪ್ರಾರಂಭ ಮಾಡುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗದಗ | ಮಕ್ಕಳ ಆರೋಗ್ಯ, ಶಿಕ್ಷಣ ಪಾಲಕರ ಮೊದಲ ಆದ್ಯತೆಯಾಗಲಿ: ಡಾ. ಗೋಣೇಶ

ಇನ್ನು ಧರಣಿ ಸ್ಥಳಕ್ಕೆ ಶಿರಹಟ್ಟಿ-ಲಕ್ಷ್ಮೇಶ್ವರ ತಹಶೀಲ್ದಾರರು ಆಗಮಿಸಿ ರೈತರ ಮನವೊಲಿಸಲು ಪ್ರಯತ್ನ ಮಾಡಿದರು. ಆದರೆ ರೈತರು ಸರಕಾರದಿಂದ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಪ್ರಾರಂಭವಾದ ನಂತರ ನಾವು ಮನೆಗೆ ಹೋಗುತ್ತೇವೆ, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಧರಣಿಯಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ರವಿಕಾಂತ ಅಂಗಡಿ, ನಾಗಪ್ಪ ಚಂಚಲಿ, ಚನ್ನಪ್ಪ ಸಣ್ಣಕ್ಕಿ, ಬಸಪ್ಪ ಬೆಂಡಿಗೇರಿ, ಹೊನಪ್ಪ ಒಡ್ಡರ ಹಾಗೂ ಹಲವು ಮಂದಿ ರೈತರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...