ಗದಗ | ಹಸುಗೂಸನ್ನು ಹೊತ್ತೊಯ್ದ ತಂದೆ; ಪೊಲೀಸರಿಂದ ಮಗು ರಕ್ಷಣೆ

Date:

ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಗದಗನಲ್ಲಿ ಮಗುವಿನ ಜೊತೆ ಬಾಣಂತಿ ಹಾಗೂ ಪತಿ ವಾಸವಿದ್ದರು. ಕುಡಿದ‌ ಮತ್ತಿನಲ್ಲಿ ತಾಯಿಯ ಮಡಿಲಲ್ಲಿದ್ದ ಆರು‌ ದಿನದ ಕಂದಮ್ಮನನ್ನು ತಂದೆ ಹೊತ್ತೊಯ್ದಿದ್ದ.

ಹಸುಗೂಸಿನ ಜೊತೆ ವ್ಯಕ್ತಿಯ‌ ಅನುಮಾನಾಸ್ಪದ ಓಡಾಟ ಕಂಡ ಸ್ಥಳಿಯರು, ಕೂಡಲೇ ಲಕ್ಷ್ಮೇಶ್ವರ ಠಾಣಾ ಪೊಲೀಸರಿಗೆ‌ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಣೆ ಮಾಡಿದ್ದು, ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಗುವನ್ನು ಮಕ್ಕಳ ದತ್ತು ಸ್ವೀಕಾರ ಕೇಂದ್ರದಲ್ಲಿ ಆರೈಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಳಿಕ ಮಗುವಿನ ತಂದೆ ಸ್ಥಳದಿಂದ ಪರಾರಿಯಾಗಿದ್ದ. ಮರುದಿನ ಮಗು ಹುಡುಕಿಕೊಂಡು ಪೋಷಕರು ಬಂದಿದ್ದಾರೆ. ಈ ವೇಳೆ ಮಗು ಹಸ್ತಾಂತರಿಸಲು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಿಂದೇಟು ಹಾಕಿದ್ದು, ಸೂಕ್ತ ತನಿಖೆ ನಡೆಸಿದ ಬಳಿಕ ಪೋಷಕರಿಗೆ ಮಗು ನೀಡಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...