ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
“ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ. ಆತ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಎಸ್ಸಿ ಎಸ್ಟಿ ನಡುವೆ ಗಲಾಟೆ ನಡೆದಿದೆ.
ಈ ಘಟನೆಯಲ್ಲಿ ಎರಡೂ ಗುಂಪಿನ 15 ಜನರಿಗೆ ಗಾಯಗಳಾಗಿದ್ದು, ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಎಸ್‌ಪಿ ರೋಹನ್ ಜಗದೀಶ್ ಅವರು ಭೇಟಿ ನೀಡಿದ್ದು, ಸ್ಥಳದಲ್ಲಿ ಮಾಹಿತಿ ಪೊಲೀಸರನ್ನು ನಿಯೋಜಿಸಲಾಗಿದೆ.





