ಗದಗ | ಫೈನಾನ್ಸ್ ಕಂಪನಿ ಕಿರುಕುಳ: ಕುಟುಂಬ ಸಮೇತ ಹೋಟೆಲ್ ಉದ್ಯಮಿ ನಾಪತ್ತೆ

Date:

ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್‌ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

ಗದಗ ನಗರದ ಎಪಿಎಂಸಿ ಬಳಿ ಹೋಟೆಲ್ ನಡೆಸುತ್ತಿದ್ದ ಪರಶುರಾಮ್ ಅವರು ತಮ್ಮ ಹೋಟೆಲ್‌ಗೆ ಬೀಗ ಹಾಕಿ, ಕುಟುಂಬ ಸಮೇತ ನಗರ ತೊರೆದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಫೈನಾನ್ಸ್‌ ಕಂಪನಿಯ ಕಿರುಕುಳದಿಂದಾಗಿ ನಗರದ ತೊರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳಲು ಯೋಜಿಸಿದ್ದೇವೆಂದು ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಫೈನಾನ್ಸ್‌ ಕಂಪನಿಯಲ್ಲಿ ಸಾಲ ಪಡೆದುಕೊಂಡು, ಪ್ರತಿ ವಾರ ಬಡ್ಡಿ ಪಾವತಿ ಮಾಡುತ್ತಲೇ ಬಂದಿದ್ದರೂ 60 ಲಕ್ಷ ರೂ.ವರೆಗೆ ಫೈನಾನ್ಸ್‌ ಕಂಪನಿ ಬಾಕಿ ಇದೆ ಎಂದು ಹೇಳುತ್ತಿದೆ. ಹಣವನ್ನು ಪಾವತಿಸುವಂತೆ ಮಹಿಳಾ ಪೇದೆಯೊಬ್ಬರ ಪತಿ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಪಾವತಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪರಶುರಾಮ್ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಕಂಪನಿಗಳ ಕಿರುಕುಳ ಹೆಚ್ಚುತ್ತಲೇ ಇದೆ. ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಸಹಿಸಲಾರದೆ ಹಲವರು ಊರು ಬಿಡುತ್ತಿದ್ದಾರೆ. ಕೆಲವರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಹೀಗಾಗಿ, ಮೈಕ್ರೋಫೈನಾನ್ಸ್‌ ಕಿರುಕುಳವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶನಿವಾರ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಕರೆಯಲಾಗಿದ್ದು, ಮೈಕ್ರೋಫೈನಾನ್ಸ್‌ ಹಾವಳಿಗೆ ಕಡಿವಾಣ ಹಾಕಲು ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...