ಗದಗ | ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ; ಎಸ್ ಎಫ್ ಐ ಶೈಕ್ಷಣಿಕ ಜಾಥಾ

Date:

ಸರ್ಕಾರಿ ಶಾಲಾ-ಕಾಲೇಜುಗಳನ್ನು ಉಳಿಸಬೇಕು. ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಹಾಸ್ಟೆಲ್ಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೇಂದು ಒತ್ತಾಯಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ಸಂಘಟನೆಯು ರಾಜ್ಯ ಮಟ್ಟದ ಶೈಕ್ಷಣಿಕ ಜಾಥಾ ಪ್ರಾರಂಭಸಿದ್ದು, ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಎಸ್ ಎಫ್ ಐ ಮಾಜಿ ಮುಖಂಡರು, ವಕೀಲರು ಬಾಲು ರಾಠೋಡ ಮಾತನಾಡಿ, “ರಾಜ್ಯ, ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಒಂದು ಶಿಕ್ಷಣ ನೀತಿಯನ್ನು ಸರ್ಕಾರ ವಿದ್ಯಾರ್ಥಿಗಳಿಗೆ ಜಾರಿ ಮಾಡುತ್ತಿಲ್ಲ ದಿನದಿಂದ ದಿನಕ್ಕೆ ಶಿಕ್ಷಣ ಕ್ಷೇತ್ರ ಸಂಪೂರ್ಣ ಖಾಸಗಿಕರಣವಾಗುತ್ತಿದೆ. ಖಾಸಗಿಕರಣದ ನೆಪದಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯನ್ನೆ ಕೇಸರಿಕರಣ ಮಾಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಇದು ಸಂವಿಧಾನದ ಆಶಯಗಳನ್ನು ಹೊಂದಿರುವ ದೇಶವಾಗಿದೆ ಎಲ್ಲರೂ ಸಂವಿಧಾನದ ಭಾಗವಾಗಿಯೇ ಇರಬೇಕು ವಿನಃ ಯಾವುದೋ ಕೋಮುವಾದಿ ಸಂಘಗಳು ಹೇಳುವ ಹಾಗೆ ವ್ಯವಸ್ಥೆ ಸೃಷ್ಟಿ ಮಾಡುವುದಲ್ಲ” ಎಂದು ಹೇಳಿ ಕೀಡಿಕಾರಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರು ಚಂದ್ರು ರಾಠೋಡ ಮಾತನಾಡಿ, “ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಕುಸಿಯುತ್ತಿದೆ ಸರ್ಕಾರಿ ಶಾಲೆಗಳು ವಿಲಿನದ ಹೆಸರಿನಲ್ಲಿ ಹಾಜರಾತಿ ನೆಪವೊಡ್ಡಿ ಸರ್ಕಾರಿ ಶಾಲಾ -ಕಾಲೇಜುಗಳನ್ನು  ಸರ್ಕಾರ ಮುಚ್ಚುತ್ತಿದೆ, ಸರಿಯಾಗಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿ ಪ್ರಾರಂಭಿಸದೆ ಮುದ್ರಿತ ಅಂಕ ಪಟ್ಟಿ ಕಲ್ಪಿಸದೆ ಸರ್ಕಾರ ಹಣ ಪಾವತಿಸಿಕೊಂಡು ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದೆ ಇದು ನಿಲ್ಲಬೇಕು ವಿದ್ಯಾರ್ಥಿಗಳಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಸರ್ಕಾರಿ ಶಾಲಾ ಕಾಲೇಜುಗಳನ್ನು ಬಲಿಷ್ಠಗೋಳಿಸಬೇಕು   ಇಲ್ಲವಾದರೆ ಮುಂದಿನ ಬೆಳಗಾವಿ ಅಧಿವೇಶನ ಚಲೋ ಮಾಡಿ ನಿಮಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ ಎಫ್ ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, “ರಾಜ್ಯದಲ್ಲಿ ಇರುವ ವಸತಿ ನಿಲಯಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗದೆ  ಬಡ ರೈತ ಕಾರ್ಮಿಕ ಮಕ್ಕಳನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ವಸತಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ” ಎಂದು ಆರೋಪಿಸಿದರು.

ಕಾರ್ಮಿಕ ಸಂಘಟನೆಯ ಜಿಲ್ಲಾ ಮುಖಂಡರು ಪೀರು ರಾಠೋಡ ಮಾತನಾಡಿ, “ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಧನ ಸಹಾಯ ಸರ್ಕಾರ ಕಲ್ಪಿಸುತ್ತಿಲ್ಲ , ವರ್ಷದಿಂದ ವರ್ಷಕ್ಕೆ ಶೈಕ್ಷಣಿಕ ಧನ ಸಹಾಯ ಕಡಿತ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ನಾಟಕ ರತ್ನ ಡಾ// ವಿಷ್ಣುವರ್ಧನ್ ಅವರ ಪುತ್ತಳಿ ನಿರ್ಮಿಸಲು ಕರವೇ ಸ್ವಾಭಿಮಾನಿ ಬಳಗ ಒತ್ತಾಯ

ಈ ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿ ಘೋಷಣೆ ಹಾಕುವ ಮೂಲಕ ಜಾಥಾ ನಗರದ ಕೀತ್ತೂರಾಣಿ ಚೇನ್ನಮ್ಮ ವೃತ್ತದವರೆಗೆ ನಡೆದು, ಮಾನವ ಸರಪಳಿ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್, ಉಪಾಧ್ಯಕ್ಷರಾದ ಗಣೇಶ ರಾಠೋಡ, ಬಸವರಾಜ ಗುಳೇದಾಳ, ಬಾಲು ರಾಠೋಡ, ಪೀರು ರಾಠೋಡ, ಮೆಹಬೂಬ ಹವಾಲ್ದಾರ ತಾಲೂಕ ಅಧ್ಯಕ್ಷರಾದ ಅನಿಲ್ ಆರ್, ಶರಣು ಮಾಟರಂಗಿ, ಗುರು ಜೀಗೇರಿ, ಕವಿತಾ ಹೋಸಮನಿ, ನಾಗಮ್ಮ, ಗಾಯತ್ರಿ, ಅಶ್ವಿನಿ, ಜ್ಯೋತಿ, ಗೌತಮ, ರಾಹುಲ್, ಭೀಮೇಶ, ರಫೀಕ್, ಆಫೀಜ್, ದರ್ಶನ , ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...