ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

Date:

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಈ ಕಾಲೇಜಿನಲ್ಲಿ ಇರುವುದು ಕೇವಲ ಮೂವರು ಬೋಧಕರು ಮಾತ್ರ. ಭೋದಕ ಸಿಬ್ಬಂದಿಯ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಈ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು 2013ರಲ್ಲಿ ಆರಂಭವಾದಾಗ ಮೂವತ್ತೊಂದು ಬೋಧಕ ಸಿಬ್ಬಂದಿಗಳನ್ನು ಒಳಗೊಂಡಿತ್ತು. ತಾಂತ್ರಿಕ ಶಿಕ್ಷಣ ಇಲಾಖೆಯು ಪ್ರತೀ ವರ್ಷ ಇಲ್ಲಿನ ಬೋಧಕರನ್ನು ವರ್ಗಾವಣೆ ಮಾಡುತ್ತಾ ಬಂದಿದೆ. ಪರಿಣಾಮ, ಈಗ ಕೇವಲ ಮೂವರು ಬೋಧಕರು ಉಳಿದಿದ್ದಾರೆ. ಅದರಲ್ಲಿ ಒಬ್ಬರು ಪ್ರಭಾರಿ ಪ್ರಾಚಾರ್ಯರು, ಇಬ್ಬರು ಬೋಧಕರು. ಇವರೊಂದಿಗೆ, ಸುಮಾರು ಇಪ್ಪತೈದು ಅರೆಕಾಲಿಕ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐದು ವಿಭಾಗಗಳಿವೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಏಳು ಬೋಧಕ ಸಿಬ್ಬಂದಿ ಪೈಕಿ ಒಬ್ಬರು ಮಾತ್ರವೇ ಇದ್ದು, ಆರು ಹುದ್ದೆಗಳು ಖಾಲಿ ಇವೆ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ನಾಲ್ಕು ಬೋಧಕ ಸಿಬ್ಬಂದಿ ಪೈಕಿ, ಮೂರು ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಎಂಟರಲ್ಲಿ ಎಂಟೂ ಹುದ್ದೆಗಳು ಖಾಲಿ ಇವೆ. ಇಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಷನ್ ಸೈನ್ಸ್ ವಿಭಾಗದಲ್ಲಿ ಆರಕ್ಕೆ ಆರು ಹುದ್ದೆಗಳೂ ಖಾಲಿ ಉಳಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೋದಕ ಸಿಬ್ಬಂದಿ ಕೊರತೆಯಿಂದ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಾಗಿದೆ. ಇದನ್ನು ತಡೆಯಲು ಅರೆಕಾಲಿಕ ಉಪನ್ಯಾಸಕರು ಪಾಠ ಹಾಗೂ ಪ್ರಯೋಗಾಲಯಗಳನ್ನು ನಡೆಸುತ್ತಿದ್ದಾರೆ.

ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಪ್ರೊ. ಕೃಷ್ಣ ಯರಡೋಣಿ ಮಾತನಾಡಿ, “ಇತ್ತೀಚೆಗೆ ಪ್ರಾಂಶುಪಾಲರು ವರ್ಗವಾಗಿದ್ದರಿಂದ ನಾನು ಪ್ರಭಾರಿ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸದ್ಯ ಕಾಲೇಜಿನಲ್ಲಿ ಇಬ್ಬರು ಉಪನ್ಯಾಸಕರು ಮಾತ್ರ ಭೋದಕರಿದ್ದು, ಮೂವತ್ತು ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗದಿರಲಿ ಎಂದು ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದರು

ಈ ಕುರಿತು ಈದಿನ.ಕಾಮ್ ನೊಂದಿಗೆ ಮಾತನಾಡಿದ ಹೆಸರು ಹೇಳದ ವಿದ್ಯಾರ್ಥಿ, “ಖಾಯಂ ಬೋಧಕರು ಇಲ್ಲದಿರುವುದರಿಂದ ಇತ್ತೀಚೆಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಯೋಗ್ಯತೆ ಇದ್ದರೆ ಕಾವೇರಿ ಸಮಸ್ಯೆ ಬಗೆಹರಿಸಿ, ಇಲ್ಲ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ: ಯಡಿಯೂರಪ್ಪ ಗುಡುಗು

ಈದಿನ.ಕಾಮ್ ಜೊತೆ ಮಾತನಾಡಿದ ಎಸ್‌ಎಫ್‌ಐ ಮುಖಂಡ ಚಂದ್ರು ರಾಠೋಡ್, “ಗಜೇಂದ್ರಗಡ ನಗರವು ತಾಲೂಕಾಗಿ ದಿನದಿಂದ ದಿನಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಬೆಳೆಯುತ್ತಿರುವ ನಗರವಾಗಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಗರದ ಸುತ್ತಮುತ್ತಲಿನ ಸುಮಾರು ಹಳ್ಳಿಗಳಿಂದ ಡಿಪ್ಲೊಮಾ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಬರುತ್ತಾರೆ. ಆದರೆ ಇಲ್ಲಿ ಸರಿಯಾಗಿ ಉಪನ್ಯಾಸಕರೆ ಇಲ್ಲ, ಸರಿಯಾಗಿ ಲ್ಯಾಬ್‌ಗೆ ಬೇಕಾಗಿರುವ ಪ್ರಾಯೋಗಿಕ ಸಾಮಗ್ರಿಗಳು ಇಲ್ಲ, ಲೈಬ್ರರಿಯಲ್ಲಿ ಸರಿಯಾಗಿ ಪುಸ್ತಕಗಳು ಇಲ್ಲ, ಕಾಲೇಜಿನ ಸುಮಾರು 350 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆಯಾ ವಿಭಾಗಗಳಿಗೆ HOD ಗಳೆ ಇಲ್ಲ ಹಾಗಾಗಿ ಇಷ್ಟೇಲ್ಲ ಸಮಸ್ಯೆಗಳನ್ನ ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ ಅದಷ್ಟು ಬೇಗ ಮಾನ್ಯ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದನ್ನ ಬಗೆಹರಿಸಲು ಮುಂದಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ SFI ಸಂಘಟನೆ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ಮಾಡಲಾಗುವುದು” ಎಂದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿಯೇ ನಿರ್ಮಾಣವಾಗಿದ್ದ ಹಾಸ್ಟೇಲ್‌ನಲ್ಲಿ ವಾರ್ಡನ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳೂ ಉಳಿಯುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೆ, ಹಾಸ್ಟೆಲ್ ಸುತ್ತಲು ಮುಳ್ಳುಕಂಟಿ ಬೆಳೆದು ನಿಂತಿದೆ ಪಾಳು ಬಿದ್ದಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...