ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಾದ ಅಧಿಕೃತ ಆದೇಶದ ಪತ್ರಗಳನ್ನು ಗಣರಾಜ್ಯೋತ್ಸವದಂದೇ ಹಸ್ತಾಂತರಿಸಲಾಗುವುದು” ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿಯ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
“ಅಲ್ಲದೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ, ಇದೊಂದು ವಿಶೇಷ ಪ್ರಕರಣ ಎಂದು ಭಾವಿಸಿ, ನಿಧಿಯ ಕಾಲಘಟ್ಟವನ್ನು ನಿರ್ಣಯಿಸಿ ಪ್ರೋತ್ಸಾಹ ಧನ ನೀಡಲಾಗುವುದು. ಸಿಕ್ಕಿರುವ ನಿಧಿಯ ಕಾಲಘಟ್ಟವನ್ನು ನಿರ್ಧರಿಸಲು ತಾಂತ್ರಿಕ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಅದರ ಸೂಚನೆ ಮೇರೆಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು” ಎಂದು ಸಚಿವ ಎಚ್ ಕೆ ಪಾಟೀಲ ತಿಳಿಸಿದರು.
ಈ ವೇಳೆ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಲಹಾ ಸಮಿತಿಯ ಸದಸ್ಯ ಸಿದ್ದು ಪಾಟೀಲ, ಅ ದ ಕಟ್ಟಿಮನಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಪುರಾತತ್ವ ಇಲಾಖೆ ಆಯುಕ್ತ ದೇವರಾಜ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ. ಶರಣು ಗೊಗೇರಿ, ಲಕ್ಕುಂಡಿ ಗ್ರಾ ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಅಧಿಕಾರಿಗಳಾದ ಗಂಗಪ್ಪ ಎಂ, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ತೇಜಶ್ವರ, ಮಲ್ಲಯ್ಯ ಕೆ, ಅಮೀರ್ ನಾಯ್ಕ, ಸೇರಿದಂತೆ ಇತರರು ಇದ್ದರು.





