ಗದಗ | ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಸಂಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಿ: ವಸಂತ ಜೋಗಣ್ಣವರ್

Date:

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದಿಂದ ಬಂಡಾಯದ ನಾಡು ನರಗುಂದದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು, ತಮಟೆ ಬಾರಿಸುವುದರ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ತಹಶಿಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ಹಿರಿಯ ನಾಯಕ ವಸಂತ ಜೋಗಣ್ಣವರ್ ಮಾತನಾಡಿ, ಕೂಡಲೆ ಸರಕಾರ ಒಳ ಮೀಸಲಾತಿಯನ್ನು ಸಂಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಬೇಕು. ಸದನದಲ್ಲಿ 56 ಸಾವಿರಕ್ಕೂ ಹೆಚ್ಚು ಹುದ್ದೆಗಳು ಭರ್ತಿಗೆ ಅನುಮೋದನೆ ಸಿಕ್ಕಿದ್ದು ಆ ಹುದ್ದೆಗಳನ್ನು ಒಳ ಮೀಸಲಾತಿಗೆ ಅನುಗುಣವಾಗಿ ತುಂಬಬೇಕು ಎಂದು ಹೇಳಿದರು.

ಮಾದಿಗ ಯುವ ಸೇನೆಯ ರಾಜ್ಯಾಧ್ಯಕ್ಷ ಸುರಕೋಡ್ ಮಾತನಾಡಿ, ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಜನರು ಅನಾದಿ ಕಾಲದಿಂದ ಅನ್ಯಾಯಕ್ಕೆ ಒಳಗಾಗುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಆಡಳಿತಕ್ಕೆ ಬರುವ ಸರ್ಕಾರಗಳು ಒಳ ಮೀಸಲಾತಿ ಜಾರಿ ಮಾಡುವಲ್ಲಿ ಧೋರಣೆಯನ್ನು ತೋರುತ್ತಿವೆ. ಆದ್ದರಿಂದ ಆಡಳಿತ ಪಕ್ಷ ಬೇಗನೆ ಎಚ್ಚೆತ್ತುಕೊಂಡು ಒಳ ಮೀಸಲಾತಿ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ದಲಿತ ಯುವ ಮುಖಂಡ ದತ್ತಾತ್ರೇಯ ಜೋಗಣ್ಣವರ್ ಮಾತನಾಡಿ, ಸರ್ಕಾರ ಒಳ ಮೀಸಲಾತಿಯಲ್ಲಿ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸದೆ ಹೋದರೆ ಮುಂದಿನ ದಿನಮಾನಗಳಲ್ಲಿ ಸರ್ಕಾರದ ವಿರುದ್ಧ ತಮಟೆ ಚಳುವಳಿ ಮತ್ತು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುದೆಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ ಧಾರವಾಡ | ಮಾರ್ಚ್ 12ರಂದು ಡಾ. ದ.ರಾ.ಬೇಂದ್ರೆ ಗೀತೆಗಳ ಸಿಂಚನ ಕಾರ್ಯಕ್ರಮ

ಈ ಪ್ರತಿಭಟನೆಯಲ್ಲಿ ದುರ್ಗಪ್ಪ ಜೋಗನ್ನವರ್, ಸಣ್ಣದುರುಗಪ್ಪ ದಂಡಾಪುರ, ಲಕ್ಷ್ಮಣ್ ಮ್ಯಾಗೇರಿ, ಕಿರಣ್ ಜೋಗನ್ನವರ್, ಪ್ರಶಾಂತ್ ತಡಸಿ, ನವೀನ್ ಜೋಗನೂರ್, ಮಹಾಂತೇಶ ಪೂಜಾರ್, ಮಂಜುನಾಥ್ ಜೋಗನ್ನವರ್ , ದೇವರಾಜ್ ಮಾದರ್, ವೆಂಕಟೇಶ್ ಖಾನ್ ಪೇಟೆ, ಮಂಜುನಾಥ್ ದುತ್ತರಗಿ, ಸೋಮು ಮಾದರ, ಹಣಮಂತ್ ಮಾದರ್, ಅರ್ಜುನ್ ಮಾದರ್, ಈಶ್ವರ್ ಮ್ಯಾಗೇರಿ, ರಂಜಿತ್ ಹೊನಕೇರಿ ಹಾಗೂ ನರಗುಂದ ತಾಲೂಕಿನ ಮಾದಿಗ ಮತ್ತು ಮಾದಿಗ ಸಂಬಂಧಿತ ಸಮಾಜದ ಯುವಕರು, ಹಿರಿಯರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ವರದಿ: ಗುರುನಾಥ ಕೆಂಗಾರಕರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...