ಗದಗ | ಆರೋಗ್ಯ ತಪಾಸಣಾ ಶಿಬಿರ; 5 ಮಂದಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಲಹೆ

Date:

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆಗೆ ಒಳಪಡಿಸಿದ್ದು, 5 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲು ಧಾರವಾಡದ ಎಸ್‌ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ವೈದ್ಯ ಡಾ. ಜಯಪ್ರಕಾಶ ಅವರು ಸಲಹೆ ನೀಡಿದರು.

ವೈದ್ಯರ ದಿನಾಚರಣೆ ಅಂಗವಾಗಿ ಎಸ್‌ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಚಿಕ್ಕನರಗುಂದ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಆರೋಗ್ಯ ಶಿಬಿರದಲ್ಲಿ ಡಾ. ಜಯಪ್ರಕಾಶ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಭಿಷೇಕ್ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಿ ಸಲಹೆ ನೀಡಿದರು. ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು. 100 ಹೆಚ್ಚು ಮಂದಿಗೆ ಬಿಆರ್‌ಬಿಎಸ್, ಬಿಪಿ, ಇಸಿಜಿ, 2ಡಿ ಎಕೋ ಪರಿಕ್ಷೇಗಳನ್ನು ಮಾಡಿದ್ದು, ಹೃದ್ರೋಗಿಗಳಿಗೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿಕ್ಕನರಗುಂದ ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಗೆ ಇದೊಂದು ಸುವರ್ಣ ಅವಕಾಶ ಎನ್ನಬಹುದು. ಇನ್ನೊಂದು ಸುವರ್ಣಾವಕಾಶ ಏನೆಂದರೆ ಧಾರವಾಡ  ನಾರಾಯಣ ಹೃದಯಾಲಯದ ಹೃದಯರೋಗ ತಜ್ಞ ಡಾ. ರವಿ ಜೈನಾಪೂರ ಪ್ರತಿ ತಿಂಗಳ ಮೊದಲನೇ ಬುಧವಾರ ಸಂದರ್ಶನದಲ್ಲಿ ಲಭ್ಯವಿರುತ್ತಾರೆ. ಈ ವಾರ 7 ನೇ ತಾರೀಖಿನಂದು ಭೇಟಿ ಮಾಡಬಹುದು” ಎಂದು ಡಾ. ಜಯಪ್ರಕಾಶ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನ ಭೂಮಿ ಮಂಜೂರಾತಿಗೆ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಆಗ್ರಹ

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಸದಸ್ಯರುಗಳಾದ ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ವಿರಯ್ಯ ಬಾಳಿಕಾಯಿ ಸೇರಿದಂತೆ ಆರೊಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಇದ್ದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಸದಸ್ಯರುಗಳಾದ ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ವಿರಯ್ಯ ಬಾಳಿಕಾಯಿ ಸೇರಿದಂತೆ ಆರೊಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...