ಗದಗ | ಭಾರೀ ಮಳೆ; ಕೆರೆಯಂತಾದ ಶಾಲಾ ಆವರಣ

Date:

ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ.

ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು. ಮಳೆಯಿಂದ ಹಳ್ಳಗಳು ತುಂಬಿ ಹರಿದವು. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಸಾಕಷ್ಟು ಸಮಸ್ಯೆಯನ್ನುಂಟುಮಾಡಿತು. ಸಮೀಪದ ನೆಲ್ಲೂರ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಸುತ್ತಲೂ ಮಳೆ ನೀರು ತುಂಬಿಕೊಂಡು ಶಾಲೆ ದ್ವೀಪದಂತಾಯಿತು. ಇದರಿಂದ ತರಗತಿಗಳಿಗೆ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.

“ಪ್ರತಿ ಮಳೆಗಾಲದಲ್ಲಿ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿಯೂ ಮಳೆನೀರು ಸಂಗ್ರಹವಾಗಿ ಶಾಲಾ ಆವರಣ ಕೆರೆಯಂತಾಗಿತ್ತು. ಬಳಿಕ ಗ್ರಾಮ ಪಂಚಾಯಿತಿಯವರು ಮಳೆನೀರು ಹರಿದು ಹೋಗುವಂತೆ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ಕಾಂಗ್ರೆಸ್‌ ಪ್ರತಿಭಟನೆ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದವನ ರಕ್ಷಣೆ: ಸಮೀಪದ ದ್ಯಾಮುಣಸಿ ಗ್ರಾಮದ ಯಲ್ಲಪ್ಪ ಮಾರನಬಸರಿ ಎಂಬುವವರು ಶನಿವಾರ ಬೆಳಿಗ್ಗೆ ಹಳ್ಳ ದಾಟುವಾಗ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋಗಿದ್ದರು. ಹಳ್ಳದ ದಡದಲ್ಲಿದ್ದ ಗಿಡ ಹಿಡಿದುಕೊಂಡು ರಕ್ಷಣೆ ಪಡೆದಿದ್ದ ಅವರನ್ನು ಗ್ರಾಮಸ್ಥರು ಟ್ರ್ಯಾಕ್ಟರ್‌ ಸಹಾಯದಿಂದ ರಕ್ಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...