ಗದಗ | ನಿರುದ್ಯೋಗಿಗಳು ಸ್ವಾವಲಂಬಿಗಳಾಗಲು ಸಹಕಾರಿ: ಸಚಿವ ಎಚ್ ಕೆ ಪಾಟೀಲ

Date:

“ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ” ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಗದಗ ಪಟ್ಟಣದ ಕಾಟನ್ ಸೇಲ್ ಸೊಸೈಟಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ 50 ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು.

“ಸರ್ಕಾರದಿಂದ ಪ್ರತಿ ಟ್ಯಾಕ್ಸಿಗೆ 5 ಲಕ್ಷ ( ಸಬ್ಸಿಡಿ) ಸಹಾಯಧನ ಸೌಲಭ್ಯವಿದ್ದು ಫಲಾನುಭವಿಗಳು ಈ ಯೋಜನೆಯ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕು” ಎಂದರು.

ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ , ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಗ್ಯಾರಂಟಿ ಯೊಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಡಿ.ಆರ್.ಪಾಟೀಲ, ಗಣ್ಯರು, ಪ್ರಮುಖರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...