ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

Date:

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ 2019ರಲ್ಲಿ ಘಟನೆ ನಡೆದಿತ್ತು. ಪ್ರಬಲ ಜಾತಿಯ ಗಂಗವ್ವ ರಾಠೋಡ್ ಮತ್ತು ತಳಸಮುದಾಯದ ರಮೇಶ್‌ ಮಾದರ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಗಂಗವ್ವ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, 2017ರಲ್ಲಿ ಊರು ತೊರೆದು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ನಡೆಸಿದ್ದರು.

ವಿವಾಹವಾದ 2 ವರ್ಷಗಳ ಬಳಿಕ, 2019ರಲ್ಲಿ ದಂಪತಿಗಳು ತಮ್ಮೂರಿಗೆ ಮರಳಿದ್ದರು. ಬೇರೊಂದು ಮನೆ ಮಾಡಿಕೊಂಡು ಜೀವನ ಆರಂಭಿಸಿದ್ದರು. 2019ರ ನವೆಂಬರ್ 6ರಂದು ಅವರ ಮನೆಗೆ ನುಗ್ಗಿದ ಗಂಗವ್ವ ಅವರ ಚಿಕ್ಕಪ್ಪ ಶಿವಪ್ಪ ರಾಠೋಡ್, ಪರಶುರಾಮ ರಾಠೋಡ್ ಮತ್ತು ಆಕೆಯ ತಮ್ಮಂದಿರಾದ ರವಿ, ರಮೇಶ್‌ ದಂಪತಿಗಳ ಮೃಗೀಯವಾಗಿ ಹಲ್ಲೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗವ್ವ-ರಮೇಶ್‌ ದಂಪತ್ತಿಗಳನ್ನು ಮನೆಯಿಂದ ಹೊರಗೆಳೆದು ತಂದು, ಕಟ್ಟಿಗೆಗಳು, ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿ, ಕಲ್ಲು ಎತ್ತಿಹಾಕಿ, ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿದ್ದರು. ಗಂಗವ್ವ-ರಮೇಶ್‌ ಹತ್ಯೆ ಇಡೀ ಗದಗ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಸೆಕ್ಷನ್ 427, 449, 302, 506(2) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಡನೆಸಿದ್ದ ಗಜೇಂದ್ರಗಢ ಪೊಲೀಸರು 2020ರ ಜವವರಿ 18ರಂದು ಚಾರ್ಜ್‌ಶೀಟ್‌ ಸಲ್ಲಿಸದ್ದರು.

ಐದು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಗದಗ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಸ್‌ ಬಸವರಾಜ್‌ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದಾರೆ. ನಾಲ್ವರು ಅಪರಾಧಿಗಳಿಗೂ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...