ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.

ಮೃತ ವಿದ್ಯಾರ್ಥಿನಿ ಚಿತ್ರದುರ್ಗದ (ಎಸ್ಸಿ ಎಸ್ಟಿ) ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆ ದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಮತ್ತು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಹಸೀಲ್ದಾರರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಸಂಘಟನೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರ ಚಂದ್ರು ರಾಠೋಡ ಮಾತನಾಡಿ, “ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಬಗ್ಗೆ ಮುಖ್ಯವಾಗಿ ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ವಹಿಸುವಂತಹ ವ್ಯವಸ್ಥೆ ಇಲ್ಲ. ಲೈಂಗಿಕ ಕಿರುಕುಳ ಆಗುತ್ತಿದ್ದರೆ ಅದನ್ನು ತಡೆಗಟ್ಟುವ ಒಂದು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಇಂತಹ ಘಟನೆಗಳು ದಿನನಿತ್ಯ ನಡೆಯುತ್ತಿದ್ದು ಅವುಗಳನ್ನು ತಡೆಯಲು ಸರ್ಕಾರಗಳು ಮತ್ತು ಇಲಾಖೆಗಳು ವಿಫಲವಾಗಿದೆ. ಜಾಗತಿಕವಾಗಿ ಆವರಿಸಿದ ಕರೋನ ನಂತರ ಶೈಕ್ಷಣಿಕ ವಲಯದಲ್ಲಿ ಹಲವಾರು ಬದಲಾವಣೆ ಆಗಿದ್ದು ಇಂದು ಪೋನ್ ಇಲ್ಲದೇ ಬದುಕುವುದು ಕಷ್ಟ ಆಗಿದೆ ಹಾಗಾಗಿ ಅದರ ಬಳಕೆಯ ಮೂಲಕ ಸಾಮಾಜಿಕ ಜಾಲತಾಣಗಳ ಬಳಸಿ ಇಂದು ಇಂತಹ ಘಟನೆಗಳಿಗೆ ಕೆಲವು ಪ್ರೇರಣೆ ನೀಡುವ ಸ್ಥಿತಿಗೆ ತಲುಪಿವೆ ಅವುಗಳನ್ನು ನಿಯಂತ್ರಣ ಮಾಡಲು ನಮ್ಮಲ್ಲಿ ಸರಿಯಾದ ಕಾನೂನು ಇಲ್ಲ, ಸರ್ಕಾರ ಈ ಕುರಿತು ಗಂಭೀರವಾಗಿ ಕಾನೂನು ಜಾರಿ ಮಾಡಬೇಕು ಮತ್ತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಜಾರಿ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ತಾಲೂಕ ತಹಶೀಲ್ದಾರ ಕಿರಣಕುಮಾರ ಕುಲಕರ್ಣಿ ಮನವಿ ಸ್ವೀಕರಿಸಿದರು.

ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ, ತಾಲೂಕ ಅಧ್ಯಕ್ಷರಾದ ಅನಿಲ್ ಆರ್, ಅಭಿಲಾಷ್ ರಾಠೋಡ ಶರಣು ಎಮ್, ಮಹಾಂತೇಶ ಪೂಜಾರ, ಸಾಗರ ಎಚ್, ತನುಜಾ ರಾಯಬಾಗಿ,ವೀಣಾ ಗಾರ್ಗಿ, ಐಶ್ವರ್ಯ ಎಸ್, ಸೋಮು ವಡ್ಡರ, ಮಂಜುಳಾ ಬೆಳವಣಕಿ,ಕೇಶವ ಲಮಾಣಿ, ಅನಿಲ್ ರಾಠೋಡ, ಅನುಷಾ ತಳವಾರ, ಗಣೇಶ ವಡ್ಡರ, ಆಕಾಶ, ಮಹೇಶ್ ಎಮ್ ಎಚ್, ಇದ್ದರು.

ಇದನ್ನೂ ಓದಿ: ಗದಗ | ರಮೇಶ್ ಬೂದಿಹಾಳಗೆ ಸಿಎಂ ಸನ್ಮಾನ

ಬೇಡಿಕೆಗಳು: ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ವರ್ಷಿತಾ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು. ನಗರದ ಹೊರ ವಲಯದಲ್ಲಿರುವ ಶಾಲಾ ಕಾಲೇಜು ವಿವಿ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬೀಟ್ ಪೊಲೀಸ್ ರನ್ನು ನೇಮಿಸಬೇಕು. ನಗರದ ಹೊರವಲಯ ಹಾಗೂ ನಗರದಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದುರಸ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಬದಲಾಯಿಸಿ ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. * ಶಾಲಾ-ಕಾಲೇಜು ಹಾಗೂ ಮಹಿಳೆಯರು ಕೆಲಸ ಮಾಡುವಂತಹ ಪದೇಶಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚನೆ ಮಾಡಬೇಕು. ಪ್ರೊ. ವರ್ಮಾ ಸಮಿತಿಯ ಶಿಪಾರಸುಗಳನ್ನು ಜಾರಿ ಮಾಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...