ಗದಗ | ಮಕ್ಕಳ ಆಸಕ್ತಿ ಅಭಿರುಚಿ ಗುರುತಿಸಿ ಪ್ರೋತ್ಸಾಹ ನೀಡಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Date:

“ಶಿಕ್ಷಕರು, ಪೋಷಕರು ತಮ್ಮ ಮಕ್ಕಳ ಆಸಕ್ತಿ ಅಭಿರುಚಿ ಗುರುತಿಸಿ ಪ್ರೋತ್ಸಾಹ ನೀಡಿದರೇ ಮುಂದೆ ಜೀವನದಲ್ಲಿ ಮಹತ್ತರ ಸಾಧನೆ ಮಕ್ಕಳಿಂದ ಸಾಧ್ಯ”  ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.

ಗದಗ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ  ಗ್ರಾಮ ಗಂಗೋತ್ರಿಯಲ್ಲಿ “ಪ್ರಾಚ್ಯಪ್ರಜ್ಞೆ” ರಾಜ್ಯ ಮಟ್ಟದ ಸ್ಪರ್ಧೆ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿದರು.

“ಬಾಲ್ಯದಿಂದಲೇ ಮಕ್ಕಳಿಗೆ ಶ್ರದ್ಧೆ ಶಿಸ್ತು ಕಲಿಸಬೇಕು. ಎಲ್ಲಿ ಹೇಗೆ ವರ್ತಿಸಬೇಕು ಎಂಬ ಕುರಿತು ತಿಳುವಳಿಕೆ ನೀಡಬೇಕು. ಅದು ಅವರ ಜೀವನದಲ್ಲಿ ಅಗಾದ ಬದಲಾವಣೆಗೆ ಕಾರಣವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಲ್ಪಕಲೆಗಳು ನಮ್ಮ ದೇಶದ ಪರಂಪರೆಯನ್ನು ಬಿಂಬಿಸುತ್ತವೆ. ಅವುಗಳ ಉಳಿವಿಗೆ ಸರ್ಕಾರ ಸಹ ಪ್ರಯತ್ನ ನಡೆಸಿದ್ದು, ಸಾರ್ವಜನಿಕರ‌ ಸಹಬಾಗಿತ್ವವು ಅಷ್ಟೇ ಪ್ರಮುಖ” ಎಂದರು.

“ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ಮಕ್ಕಳು ಭಾಷಣ, ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ ಸ್ಪರ್ದೇಗಳಲ್ಲಿ ಪಾಲ್ಗೊಂಡು ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಈ‌ ಮೂಲಕ ಪ್ರಾಚ್ಯ ಶಿಲ್ಪ ಕಲೆಯ ಕುರಿತು ಅರಿವು ಹೊಂದಿದ್ದಾರೆ” ಎಂದು ಹೇಳಿದರು.

ಅವ್ವ ಟ್ರಸ್ಟ್ : ಪ್ರತಿ ವರ್ಷ ನಡೆಸುವ ಈ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಗಳಲ್ಲಿ ಒಂದಾದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಹೆಣ್ಣು ಮಗುವಿಗೆ ಪ್ರಶಸ್ತಿ ನೀಡಲು ಅವ್ವ ಟ್ರಸ್ಟ್ ವತಿಯಿಂದ 3 ಲಕ್ಷ ಅನುದಾನ ನೀಡುತ್ತೇನೆ. ಅದನ್ನು ಠೇವಣಿ ಇಟ್ಟು, ಅದರಿಂದ ಬರುವ ಬಡ್ಡಿ ಹಣದಿಂದ ಪ್ರಶಸ್ತಿಯನ್ನು ನೀಡಬೇಕು” ಎಂದು ಇದೆ ವೇಳೆ ಬಸವರಾಜ ಹೊರಟ್ಟಿ ನುಡಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜ್ ಎ ಮಾತನಾಡಿ, “ಸಚಿವರಾದ ಎಚ್ ಕೆ ಪಾಟೀಲ ಅವರು ಪ್ರವಾಸೋದ್ಯಮ ಇಲಾಖೆ ಸಚಿವರಾದ ಮೇಲೆ ಈ ಪುರಾತತ್ವ ಇಲಾಖೆಗೆ ಹೊಸ ಚೈತನ್ಯ, ರೂಪರೇಶ‌ ನೀಡಿದ್ದಾರೆ. ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ, ಇವುಗಳನ್ನು ಕೆಲವು ಎನ್ ಜಿ ಒ ದತ್ತು ಪಡೆದು ಅಭಿವೃದ್ಧಿ ಮಾಡಲು ಮುಂದೆ ಬಂದಿವೆ. ಅವರಿಗೆ ಧನ್ಯವಾದಗಳು” ಎಂದರು.

“ಈವರೆಗೆ ರಾಜ್ಯದಲ್ಲಿ 14450 ಗ್ರಾಮಗಳ‌ ಸ್ಮಾರಕ ಶಿಲ್ಪಗಳ ಜಿಯೋ ಟ್ಯಾಗಿಂಗ್ ಮಾಡಲಾಗಿದೆ. ಇನ್ನು ಕಾರ್ಯ ನಿರಂತರ ನಡೆದಿದೆ. ಈ ಕಾರ್ಯ ಶೀಘ್ರದಲ್ಲೇ ಪೂರ್ಣಮಾಡುವ ಬಗ್ಗೆ ಕೆಲಸ ನಡೆದಿದೆ. ಪೂರ್ಣವಾದರೆ ದೇಶದಲ್ಲೇ ಜಿಯೊ ಟ್ಯಾಂಗಿಂಗ್ ಮಾಡಿದ ರಾಜ್ಯ ಕರ್ನಾಟಕ ಆಗುತ್ತದೆ. ಇದು ನಮ್ನ ಹೆಮ್ಮೆ” ಎಂದರು.

“ಜಿಯೊ ಟ್ಯಾಗಿಂಗ್ ಮಾಡಿದಲ್ಲಿ ಆ ಶಿಲ್ಪ ಒಂದು ವೇಳೆ ಹಾಳಾದರೆ ಅದನ್ನು ಪುನಃ ಸಿದ್ದಪಡಿಸಲು ಸಹಕಾರಿ ಆಗಿದೆ” ಎಂದು ಮಾಹಿತಿ ನೀಡಿದರು.

“ಮಕ್ಕಳಲ್ಲಿನ ಪ್ರತಿಭೆಯನ್ನು ಅನಾವರಣ ಮಾಡುವ ವೇದಿಕೆ ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಇದಾಗಿದೆ. ಪ್ರತಿ ತಾಲ್ಲೂಕಿಗೆ 20 ಸಾವಿರ ಪ್ರಾಚ್ಯ ಪ್ರಜ್ಞೆ ಸ್ಪರ್ದೆ ನಡೆಸಲು ನೀಡಲಾಗುತ್ತಿದೆ. ನಂತರ ಜಿಲ್ಲಾ ಮಟ್ಟದ ಸ್ಪರ್ದೇಗೆ  25-30 ಸಾವಿರ ನೀಡಿ, ರಾಜ್ಯಮಟ್ಟದ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.

ವಿವಿ ಕುಲಪತಿ ಪ್ರೊ. ಸುರೇಶ್ ನಾಡಗೌಡರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಆರ್ ಎಸ್ ಬುರಡಿ, ಡಾ. ಡಿ ಸ್ಮಿತಾ, ಡಾ. ಆರ್ ಶೇಜೇಶ್ವರ, ಡಾ. ಸಿ ಎನ್ ಮಂಜುಳಾ, ತಾರಕೇಶ್ ಟಿ ಹಾಜರಿದ್ದರು.

ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...