ಗದಗ | ಅಕ್ರಮ ಪಡಿತರ ಅಕ್ಕಿ ಅಧಿಕಾರಿಗಳ ವಶ

Date:

ಬಡವರ ಹೊಟ್ಟೆ ತುಂಬಿಸಲು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಅಕ್ಕಿ ದಂಧೆಕೋರರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಅನ್ನಭಾಗ್ಯ  ಯೋಜನೇಯ ಅಕ್ಕಿ ಕಾಳು ದಂದೆಕೊರರ ಪಾಲಾಗುತ್ತಿದೆ. ನಗರದಲ್ಲಿ ಬೆಳಗ್ಗೆ ಸರಿಸುಮಾರು 9 ಗಂಟಗೆ ಬಡಾವಣೆಗಳಲ್ಲಿ ಮನೆಮನೆಗೆ ತೇರಳಿ ಬಡವರು, ಕಡು ಬಡವರಿಗೆಂದು ಗುರುತಿಸಿ ಸರಕಾರದಿಂದ ನೀಡಲಾಗುತ್ತಿರುವ ಅನ್ನ ಭಾಗ್ಯ ಯೋಜನೆಯ ಅಕ್ಕಿ ಯನ್ನು ಖರೀದಿಸುತ್ತಿದ್ದಾರೆ.

ಈ ಕಾಳು ದಂಧೆಕೋರರ ಸುಳಿವನ್ನು ಸಾರ್ವಜನಿಕರು ಸ್ಥಳಿಯ ನಾಗರೀಕ ಆಹಾರ ಸರಬರಾಜು ಇಲಾಖೆ ಅಧಿಕಾರಿ ಅನಿಲ್ ಪವಾರ ಹಾಗೂ ಗಣಕಯಂತ್ರ ನಿರ್ವಾಹಕ ಸಿಬ್ಬಂದಿ ರಫ್ಹೀಕ್ ನದಾಫ್ ಮತ್ತು ನರಗುಂದ ಪೊಲೀಸ್ ಠಾಣೆಯ ಪಿಎಸ್ಐ ಮಣ್ಣೂರ್ ಅವರಿಗೆ ಸಾರ್ವಜನಿಕರು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ  ಸರ್ಕಾರದಿಂದ ನೀಡುತ್ತಿರುವ ಪಡಿತರ ಹಕ್ಕಿಯನ್ನು ಮೂಟೆಗಟ್ಟಲೆ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿದ್ದು ಕಂಡು ಬಂದಿದೆ. ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ಚೀಲಗಳನ್ನು ವಶಪಡಿಸೋಕೊಂಡಿದ್ದಾರೆ.

“ಅಲ್ಲದೆ ಕೆಲವು ಕಾಳು ದಂದೆ ಕೋರರು ಯಾರದು ಭಯವಿಲ್ಲದೆ ಕಾನೂನಿನ ಪರಿಜ್ಞಾನವಿಲ್ಲದೆ ಅಕ್ರಮವಾಗಿ ಅನ್ನ ಭಾಗ್ಯ ಯೋಜನೆಯ ಅಕ್ಕಿಗಳನ್ನು  ಶೇಖರಣೆ ಮಾಡುತ್ತಿದ್ದಾರೆ. ಈ ಒಂದು ವ್ಯವಹಾರ ನರಗುಂದ ಪಟ್ಟಣ ಮತ್ತು ತಾಲೂಕಿನ ಸುತ್ತಮುತ್ತ ಹಳ್ಳಿಗಳಲ್ಲಿ ನಡೆಯುತ್ತಿದ್ದು ಕಾಳು ದಂದೆ ಕೋರರಿಗೆ ಕಡಿವಾಣ ಹಾಕಬೇಕಾಗಿದೆ” ಎಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.

ಅನ್ನಭಾಗ್ಯ ಯೋಜನೆಯನ್ನು  ದುರುಪಯೋಗ ಪಡಿಸಿಕೊಂಡು ಅಕ್ರಮ ದಂದೆಗೆ ಇಳಿದಿರುವ ದಂದೆಕೋರರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಗರದ ದಂಡಾಪೂರ್ ಬಡಾವನೆಯ ವಜ್ಜರಂಗ್ಗಿ ಎಂಬುವವರ ಮನೆಯ ಮುಂದೆ ಬಳಿಗಾರ್ ಗಿರಾಣಿಯ  ಆವರಣದಲ್ಲಿ ಹೀರೊ ಹೆಚ್ ಎಫ್, ಗಾಡಿ ಸಂಖ್ಯೆ  KA-24 Q2147 ಗುರುತಿನ ವಾಹನ ಬಳಸಿಕೊಂಡು ಸಂಗ್ರಹಿಸಿಡಲಾದದೆ. ಸುಮಾರು 50ಕೆಜಿ ಸಾಮರ್ಥ್ಯದ 48 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ವಾಹವನವನ್ನು ಬಿಟ್ಟು ಪರಾರಿಯಾಗಿದ್ದಾನೆಂದು ಸ್ಥಳೀಯ ತಿಳಿದ್ದಾರೆ.

ನರಗುಂದ ಪೊಲೀಸ್ ಠಾಣೆಯ  ಪಿಎಸ್ಐ ಮಣ್ಣೂರ್ ರವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ವರದಿ : ಗುರುನಾಥ ಕೆಂಗಾರಕಾರ ಸಿಟಿಜನ್ ಜರ್ನಲಿಸ್ಟ್ ನರಗುಂದ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...