ಗದಗ | ಅನೈತಿಕ ಚಟುವಟಿಕೆ ತಾಣವಾದ ‘ಇಂದಿರಾ ಕ್ಯಾಂಟೀನ್’; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

Date:

ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಹೃದಯ ಭಾಗ ಪಿಡಬ್ಲೂಡಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿದ್ದು, ಆರ್ಥಿಕವಾಗಿ ಹಿಂದುಳಿದ ಜನರ ಹಸಿವನ್ನು ನಿಗಿಸಬೇಕಿತ್ತು. ಆದರೆ ಈ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಉದ್ಘಾಟನೆಗೊಳ್ಳದೆ ಸುಮಾರು ಏಳೆಂಟು ತಿಂಗಳಿಂದ ನನೆಗುದಿಗೆ ಬಿದ್ದಿದೆ. ಇದರಿಂದ ಅನೈತಿಕ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿದೆ.

ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ, ಆಟೋ ಚಾಲಕರಿಗೆ ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬಡವರ ಹಸಿವನ್ನು ನೀಗಿಸುವ ಸಲುವಾಗಿ ಕಡಿಮೆ ಹಣದಲ್ಲಿ ಹೊಟ್ಟೆತುಂಬಾ ಊಟ ಮಾಡಬೇಕೆಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಆದರೆ ಇಲ್ಲೊಂದು ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳಿಂದ ಕೂಡಿದ್ದು, ಕುಡುಕರ ಅಡ್ಡವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಣ ಪಟ್ಟಣಕ್ಕೆ ಸುತ್ತಮುತ್ತಲಿನ ಹಳ್ಳಿಗಳಿಂದ ಕೂಲಿ ಕಾರ್ಮಿಕರು, ರೈತರು, ಶಾಲೆ-ಕಾಲೇಜಿಗೆ ಬರುವ ವಿದ್ಯಾರ್ಥಿಗಳು, ಆಟೋ ಚಾಲಕರು ಹೀಗೆ ಬೇರೆ ಬೇರೆ ದುಡಿಯುವ ವರ್ಗದವರು ಬರುತ್ತಾರೆ. ಹತ್ತಿರದಲ್ಲಿಯೇ ಬಸ್ ನಿಲ್ದಾಣವಿದೆ. ಹೆಚ್ಚು ವಹಿವಾಟು ನಡೆಯುವ ಸ್ಥಳದಲ್ಲಿಯೇ ಈ ಇಂದಿರಾ ಕ್ಯಾಂಟೀನ್ ಇದೆ. ಹೀಗೆ ಪಟ್ಟಣಕ್ಕೆ ಬರುವ ಜನರ ಹಸಿವನ್ನು ನೀಗಿಸಬೇಕಿದ್ದ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆ ತಾಣವಾಗಿದೆ. ಈ ಇಂದಿರಾ ಕ್ಯಾಂಟೀನನ್ನೇ ಸ್ಥಳೀಯರು ಶೌಚಾಲಯವನ್ನಾಗಿಯೂ ಮಾಡಿಕೊಂಡಿದ್ದಾರೆ. ಕ್ಯಾಂಟೀನ್ ಒಳಗಡೆ ಹೋದರೆ, ಮಲಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತದೆ.

ಇಂದಿರಾ ಕ್ಯಾಂಟೀನ್‌ 1

ನಿತ್ಯವೂ ಕುಡುಕರು ಇಂದಿರಾ ಕ್ಯಾಂಟೀನ್‌ಗೆ ಬಂದು ಕುಡಿಯುವ ಕುಡುಕರು ಸಾರಾಯಿ ಬಾಟಲಿ, ಪ್ಯಾಕೆಟ್‌ಗಳು, ನೀರಿನ ಬಾಟಲಿ, ಪೌಚುಗಳನ್ನು ಕ್ಯಾಂಟೀನ್ ತುಂಬಾ ಬಿಸಾಕಿ ಹೋಗುತ್ತಾರೆ. ಗುಟಕಾ ತಿಂದು ಉಗುಳಿದ್ದರಿಂದ ಗಬ್ಬುನಾತ ಬೀರುತ್ತದೆ. ರಾತ್ರಿಯಾದರೆ, ಇಲ್ಲಿ ಬೇರೆ ಬೇರೆ ರೀತಿಯ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಇಂದಿರಾ ಕ್ಯಾಂಟೀನ್ ಸುತ್ತಮುತ್ತ ಕಸಕಡ್ಡಿಗಳಿಂದ ತುಂಬಿದೆ. ಗೇಟಿನ ಪಕ್ಕದಲ್ಲಿಯೇ ಸಾರಾಯಿ ಪಾಕೇಟ್‌ಗಳ ರಾಶಿ ಕಂಡುಬರುತ್ತದೆ.

ಶಾಸಕರ ಜನಸಂಪರ್ಕ ಕಚೇರಿ ಪಕ್ಕದಲ್ಲಿಯೇ ಇಂದಿರಾ ಕ್ಯಾಂಟೀನ್

ರೋಣ ಪಟ್ಟಣದ ಹೃದಯ ಭಾಗದಂತಿರುವ ಪಿಡಬ್ಲೂಡಿ ಆವರಣದಲ್ಲಿ ಪ್ರವಾಸಿ ಮಂದಿರ, ಪಿಡಬ್ಲೂಡಿ ಕಚೇರಿ ಅಷ್ಟೇ ಅಲ್ಲದೆ ಆಡಳಿರಾರೂಢಿಯಲ್ಲಿರುವ ಸರ್ಕಾರದ ಶಾಸಕರ ಜನಸಂಪರ್ಕ ಕೇಂದ್ರವು ಇದೆ. ಇಲ್ಲಿಗೆ ನಿತ್ಯ ನೂರಾರು ಜನರು ಬರುತ್ತಿದ್ದು, ಇಂದಿರಾ ಕ್ಯಾಂಟೀನ್ ಬಡವರ ಹಸಿವು ನೀಗಿಸದಂತಾಗಿದೆ.

ಇಂದಿರಾ ಕ್ಯಾಂಟೀನ್‌ 2

ಮಾದಿಗ ದಂಡೋರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಂಜುನಾಥ ಬುರಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶ್ರಮಿಕ ವರ್ಗದವರು ಕಡಿಮೆ ಹಣದಲ್ಲಿ ಹೊಟ್ಟೆತುಂಬಾ ಊಟ ಮಾಡಲೆಂದು ಸಿದ್ದರಾಮಯ್ಯನವರು ಇಂದಿರಾ ಕ್ಯಾಂಟೀನ್‌ನಂತಹ ಒಳ್ಳೆ ಯೋಜನೆ ಜಾರಿಗೊಳಿಸಿದ್ದಾರೆ. ಆದರೆ ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್ ಪ್ರಯೋಜನಕ್ಕೆ ಬಾರದಾಗಿದೆ. ಇನ್ಮುಂದಾದರೂ ಕೂಡಲೇ ಇಂದಿರಾ ಕ್ಯಾಂಟೀನ್ ಆರಂಭಿಸಿ ಶ್ರಮಿಕ ವರ್ಗದವರ ಹಸಿವನ್ನು ನೀಗಿಸಬೇಕು” ಎಂದು ಒತ್ತಾಯಿಸಿದರು.

ದಲಿತ ಮುಖಂಡ ಹಣಮಂತ ಪೂಜಾರ್ ಮಾತನಾಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬಡವರಿಗೆ, ಎಲ್ಲ ವರ್ಗದವರಿಗೆ ಊಟ ಸಿಗಲೆಂದು ಈ ಯೋಜನೆ ಆರಂಭಿಸಲಾಗಿದೆ. ಆದರೆ, ಇಲ್ಲಿಯ ಶಾಸಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕೂಡಲೇ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ನಿಟ್ಟೂರು ಪುರ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ರೋಣ ಪುರಸಭೆ ಚೀಫ್ ಅಫೀಸರ್ ರಮೇಶ್ ಹೊಸಮನಿ ಈ ದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ್ದು, “ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಏಜೆನ್ಸಿಗೆ ಕೊಟ್ಟಿದ್ದು, ತಡವಾಗುತ್ತಿರುವುದರ ಕುರಿತು ಮಾಹಿತಿ ಪಡೆದು, ಆದಷ್ಟು ಬೇಗ ಇಂದಿರಾ ಕ್ಯಾಂಟೀನ್ ಆರಂಭಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸ್ಥಳೀಯ ಶಾಸಕರು, ಅಧಿಕಾರಿಗಳು ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್‌ನಲ್ಲಿ ನಡೆಯಿತ್ತಿರುವ ಅನೈತಿಕ ಚಟುವಟಿಕೆಗಳನ್ನು ನಿಲ್ಲಿಸಿ, ಶ್ರಮಿಕ ವರ್ಗದವರ ಹಸಿವನ್ನು ನೀಗಿಸಲು ಶೀಘ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಆರಂಭಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...