ಗದಗ | ದಲಿತ ಮಹಿಳೆಗೆ ಅವಮಾನ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು

Date:

‘ಚಾಮುಂಡಿ ದೇವಿಗೆ ಹೂ ಹಾಕುವವರು ಸನಾತನ ಧರ್ಮದವರೇ ಆಗಿರಬೇಕು. ಸಾಮಾನ್ಯ ದಲಿತ ಮಹಿಳೆಗೂ ಅಧಿಕಾರವಿಲ್ಲ’ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಕೆಡಿಎಸ್ಎಸ್ ತಾಲ್ಲೂಕು ಅಧ್ಯಕ್ಷ  ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಸುರೇಶ ನಂದೆಣ್ಣನವರ ನೇತೃತ್ವದಲ್ಲಿ ಬಸವನಗೌಡ ಪಾಟೀಲ ಯತ್ನಾಳ ಮೇಲೆ ಇಂದು ಸಬ್ ಇನ್ಸಪೆಕ್ಟರಗೆ ದೂರು ನೀಡಿದ್ದಾರೆ.

ನಂತರ ಸುರೇಶ ನಂದೆಣ್ಣನವರ ಮಾತನಾಡಿ, “ಮೈಸೂರು ದಸರಾ ಉದ್ಘಾಟಕರ ವಿಷಯದ ಕುರಿತು ಬಸವನಗೌಡ ಪಾಟೀಲ್ ಯತ್ನಾಳ ಮಾತನಾಡುವಾಗ ‘ಕರ್ನಾಟಕ ರಾಜ್ಯದ ಸಮಸ್ತ ದಲಿತ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿ, ದಲಿತರಿಗೆ ಹಾಗೂ ದಲಿತ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿ ಜಾತಿ ನಿಂದನೆ ಮಾಡಿದ್ದು, ಖಂಡನೀಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250919 200224

“ಶಾಸಕ ಬಸವನಗೌಡ ಪಾಟೀಲ ಯತ್ನಾಳ ಮೇಲೆ ಎಸ್ಸಿ ಎಸ್ಟಿ ಪ್ರಕರಣ ದಾಖಲು ಮಾಡಿ, ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರು ನೀಡಿದ್ದು, ವಿಳಂಬ ಮಾಡದೇ ಪ್ರಕರಣ ದಾಖಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ದಲಿತ ಮುಖಂಡರು ಫಕ್ಕಿರೇಶ ಮ್ಯಾಟನವರ, ಬಸವಣ್ಣೆಪ್ಪ ನಂದೆಣ್ಣವರ, ಕೋಟೆಪ್ಪ ವರ್ದಿ, ದೇವಪ್ಪ ನಂದೆಣ್ಣವರ, ನಾಗಪ್ಪ ನಂದೆಣ್ಣವರ, ಜಗದೀಶ ಹುಲಿಗೆಮ್ಮನವರ, ಮಲ್ಲೇಶ ಬಸವನಾಯ್ಕರ, ಮಾಂತೇಶ  ಗುಡಸಲಮನಿ, ರಾಮು ಗಡದವರ, ಬಸರಾಜ ಹಿರೆಮನಿ, ಸದಾನಂದ ನಂದೆಣ್ಣವರ, ನಾಗರಾಜ ಗೋನಾಳ, ನಾಗರಾಜ ಅಮರಾಪೂರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...