ಗದಗ | ಇಸ್ರೋ ವಿಜ್ಞಾನಿ ಡಾ. ರಾಮನಗೌಡ ವಿ ನಾಡಗೌಡ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Date:

ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಛಾಪು ಮೂಡಿಸಿರುವ ಇಸ್ರೊ ವಿಜ್ಞಾನಿ ಡಾ. ರಾಮನಗೌಡ ವಿ. ನಾಡಗೌಡ ಅವರಿಗೆ ವಿಜ್ಞಾನ ಹಾಗೂ ತಂತ್ರಜ್ಞಾನ ವಿಭಾಗದಿಂದ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಅವರು ಯು.ಆರ್‌.ರಾವ್‌ ಉಪಗ್ರಹ ಕೇಂದ್ರದ ಯೋಜನಾ ವಿಭಾಗದ ಸಹ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಗದಗ ಜಿಲ್ಲೆಯಿಂದ ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಜನತೆಗೆ ಖುಷಿ ತರಿಸಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ರೈತನ ಮನೆತನದಲ್ಲಿ ಜನಿಸಿದ ಡಾ. ನಾಡಗೌಡರು. ತಂದೆ ಕೃಷಿಕರು. ತಾಯಿ ಗೃಹಿಣಿ. ವಿದ್ಯಾಭ್ಯಾಸ, ಉದ್ಯೋಗ ಸಂಬಂಧಿ ಚಟುವಟಿಕೆಗಳ ಕಾರಣದಿಂದ ಇವರ ನಂಟು ಧಾರವಾಡ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳೊಂದಿಗೆ ಬೆಸೆದುಕೊಂಡಿದೆ. ಕಳೆದ ವರ್ಷ ಗದಗ ನಗರದಲ್ಲಿ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್‌. ಕಿರಣ್‌ ಕುಮಾರ್‌ ಸೇರಿದಂತೆ ಖ್ಯಾತನಾಮ ವಿಜ್ಞಾನಿಗಳೆನ್ನೆಲ್ಲಾ ಒಂದೆಡೆ ಸೇರಿಸಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಿದ್ದನ್ನು ಸ್ಮರಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಡಗೌಡರಿಗೆ ಶಾಲಾ ದಿನಗಳಿಂದಲೇ ವಿಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡವರು. ಧಾರವಾಡದ ಕೆ.ಇ. ಬೋರ್ಡ್ ಶಾಲೆ, ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ ಹಾಗೂ NITK ಸುರತ್ಕಲ್‌ನಲ್ಲಿ ವಿದ್ಯುನ್ಮಾನ ಇಂಜಿನಿಯರಿಂಗ್ ಹಾಗೂ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್‌ನಲ್ಲಿ ಉನ್ನತ ವಿದ್ಯಾಭ್ಯಾಸ ಪಡೆದಿದ್ದಾರೆ.

1989ರಲ್ಲಿ ಇಸ್ರೋದಲ್ಲಿ ವಿಜ್ಞಾನಿಯಾಗಿ ಸೇವೆ ಆರಂಭಿಸಿದ ಅವರು, ಕಾರ್ಟೊಸಾಟ್-1, ಇನ್ಸಾಟ್-4ಬಿ, ಆಸ್ಟ್ರೋಸಾಟ್‌, ಚಂದ್ರಯಾನ, ಮಂಗಳಯಾನ, ರೀಸಾಟ್‌ ಸರಣಿ, ಆದಿತ್ಯ ಎಲ್-1, ನಿಸಾರ್‌ ಮತ್ತು ಗಗನಯಾನ ಸೇರಿದಂತೆ ಅನೇಕ ಪ್ರಮುಖ ಉಪಗ್ರಹ ಯೋಜನೆಗಳಲ್ಲಿ ತಾಂತ್ರಿಕ ನಾಯಕತ್ವ ವಹಿಸಿದ್ದಾರೆ.

ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೊಂಡ ರೀಸಾಟ್ ಉಪಗ್ರಹಗಳು ದೇಶದ ಭದ್ರತೆಯ ಕಣ್ಗಾವಲು ಎಂದು ಪರಿಗಣಿಸಲ್ಪಟ್ಟಿವೆ.

ಇತ್ತೀಚಿನ ʼಆಪರೇಷನ್ ಸಿಂಧೂರ್ʼ ಯಶಸ್ಸಿನಲ್ಲಿಯೂ ಈ ಉಪಗ್ರಹಗಳ ಪಾತ್ರ ಮಹತ್ವದ್ದಾಗಿದೆ. ಉಪಗ್ರಹಗಳ ಅಸೆಂಬ್ಲಿ, ಪರೀಕ್ಷೆ ಮತ್ತು ದೃಢೀಕರಣಕ್ಕಾಗಿ ಅತ್ಯಾಧುನಿಕ ಪ್ರಯೋಗಾಲಯ ನಿರ್ಮಾಣ ಹಾಗೂ ಸ್ವದೇಶೀಕರಣದ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ವೆಚ್ಚವನ್ನು ಉಳಿತಾಯ ಮಾಡಿರುವುದು ಅವರ ಮಹತ್ತರ ಕೊಡುಗೆಯಾಗಿದೆ.

ಆತ್ಮನಿರ್ಭರ್ ಭಾರತ್ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳಿಗೆ ಜೀವ ತುಂಬಿದ ಡಾ. ನಾಡಗೌಡರು, ಬಾಹ್ಯಾಕಾಶ ತಂತ್ರಜ್ಞಾನವನ್ನು ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳೊಂದಿಗೆ ಸಂಪರ್ಕಿಸಿ ನವೋದ್ಯಮ ಹಾಗೂ ಸ್ವಾವಲಂಬನೆಯನ್ನು ಉತ್ತೇಜಿಸಿದ್ದಾರೆ.

ವಿಜ್ಞಾನವನ್ನು ಜನಸಾಮಾನ್ಯರಿಗೂ ತಲುಪಿಸಲು “ರಾಷ್ಟ್ರೀಯ ಬಾಹ್ಯಾಕಾಶ ದಿನ”, “ವಿಶ್ವ ಬಾಹ್ಯಾಕಾಶ ದಿನ”, “ಇಸ್ರೋ ರೋಬೋಟಿಕ್ಸ್ ಸ್ಪರ್ಧೆ” ಹಾಗೂ “ಕನ್ನಡ ತಾಂತ್ರಿಕ ಕಮ್ಮಟ”ಗಳಂತಹ ಅನೇಕ ಕಾರ್ಯಕ್ರಮಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಮೂಡಿಸಿದ್ದಾರೆ.

ತಮ್ಮ ಶ್ರೇಷ್ಠ ಸೇವೆಗಾಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಅವರು, ಗ್ರಾಮೀಣ ಹಿನ್ನೆಲೆಯಿಂದ ಬಂದು ವಿಶ್ವದ ಬಾಹ್ಯಾಕಾಶ ವೇದಿಕೆಯಲ್ಲಿ ಭಾರತದ ಹೆಸರನ್ನು ಬೆಳಗಿಸಿರುವ ಅಪರೂಪದ ವಿಜ್ಞಾನಿಗಳಲ್ಲಿ ಒಬ್ಬರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...