ಗದಗ | ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Date:

ನಾವು ಈಗ 78ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಆದರೆ ನಮಗೆ ಸ್ವಾತಂತ್ರ್ಯ ಸಿಕ್ಕಿದೆಯಾ ಎಂದು ಯೋಚಿಸಿದರೆ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಎಚ್‌ ಪೂಜಾರ್‌ ಹೇಳಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ʼನಮ್ಮ ಕರ್ನಾಟಕ ರಕ್ಷಣಾ ವೇದಿಕೆʼಯಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ದೊರಕಿದೆ. ಆದರೆ ನಮ್ಮ ಹಕ್ಕುಗಳಿಗಾಗಿ ಇನ್ನೂ ಹೋರಾಟ ಮಾಡುತ್ತ ಬಂದಿದ್ದೇವೆ. ಇದು ವಿಪರ್ಯಾಸ ಸಂಗತಿ” ಎಂದರು.

ಅತಿಥಿಯಾಗಿ ಆಗಮಿಸಿದ್ದ ಸಾರ್ವಜನಿಕರ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ್ ನವಲಗುಂದ ಮಾತನಾಡಿ, “ಅನೇಕ ತ್ಯಾಗ ಬಲಿದಾನಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಈಗಿನ ವಾಸ್ತವ್ಯದ ಸಂದರ್ಭದಲ್ಲಿ ನೋಡಿದರೆ ಸ್ವಾತಂತ್ರ್ಯ ಯಾರಿಗೆ ಸಿಕ್ಕಿದೆ ಎಂದು ಆಲೋಚಿಸಬೇಕಿದೆ. ಶೋಷಿತ ಸಮುದಾಯಗಳು ಇಂದಿಗೂ ಸ್ವಾತಂತ್ರ್ಯ ಪಡೆದುಕೊಂಡಿಲ್ಲ. ಇವತ್ತಿಗೂ ಅವರು ಸ್ವಂತ ಬದುಕು ಕಟ್ಟಿಕೊಳ್ಳದ ಕೆಳಮಟ್ಟದಲ್ಲಿ ಬದಕುತ್ತಿದ್ದಾರೆ. ಈ ಸಮಾಜದಲ್ಲಿ ಯಾವುದೇ ಸಮುದಾಯ ಇರಲಿ, ಎಲ್ಲರೂ ಸಮಾನರು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಶೋಷಿತ ಸಮುದಾಯಗಳು ಮುನ್ನೆಲೆಗೆ ಬಂದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆಯುತ್ತದೆ” ಎಂದು ಅಭಿಪ್ರಾಯಪಟ್ಟರು. ಜತೆಗೆ ಮುಂಡರಗಿ ತಾಲೂಕಿನ ಅಭಿವೃದ್ಧಿ ಹಿನ್ನೆಡೆ ಕುರಿತು, ಸಮಗ್ರವಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೋವಿ ಸಮಾಜದ ತಾಲೂಕು ಅಧ್ಯಕ್ಷ ರಾಘವೇಂದ್ರ ನರೇಗಲ್ ಅವರು ಸ್ವಾತಂತ್ರ್ಯ ಹೋರಾಟಗಾರರು ನಡೆದುಬಂದ ಹಾದಿ ಬಗ್ಗೆ, ಪ್ರಜಾಪ್ರಭುತ್ವದ ಕರ್ತವ್ಯದ ಬಗ್ಗೆ, ಸಮಗ್ರ ಆಡಳಿತದ ಸುಧಾರಣೆ ಕುರಿತು ಸಂಕ್ಷಿಪ್ತವಾಗಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಜಂತ್ಲಿ-ಶಿರೂರದ ಪ್ರಸಿದ್ಧ ಜಾನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಖರೀದಿಸುವಂತೆ ಲೇಖಕರ ವೇದಿಕೆಯಿಂದ ಮನವಿ

ಕಾರ್ಯಕ್ರಮದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ಅಲೆಮಾರಿ ಗೋಂದಳಿ ಸಮಾಜದ ಅಧ್ಯಕ್ಷ ವಿಠ್ಠಲ್‌ ಗಣಾಚಾರಿ, ಮೌಲಾನ್ ಆಜ಼ಾದ್ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಇಸ್ಮಾಯಿಲ್ ನಮಾಜಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗವಿಸಿದ್ದಪ್ಪ ಹ್ಯಾಟಿ, ಹಿರಿಯ ದಲಿತ ಹೋರಾಟಗಾರ ಹನುಮಂತ ಪೂಜಾರ, ಉಮೇಶ್ ಕಲಾಲ್ ಹಾಗೂ ಮುಂಡರಗಿ ತಾಲೂಕಿನ ಸಮಸ್ತ ಗುರು ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...