ಗದಗ | ಖೊಟ್ಟಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ಡಿಎಸ್ಎಸ್ ಖಂಡನೆ

Date:

ಗದಗ ಜಿಲ್ಲೆಯ ಬಿದರಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಸುನಿತಾ ಅವರು ಖೊಟ್ಟಿ ಜಾತಿ (ಎಸ್‌ಸಿ) ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದನ್ನು ತಡೆಗಟ್ಟಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ. ಗದಗ ಅಪರ ಜಿಲ್ಲಾಧಿಕಾರಿಗೆ ದಸಂಸ ಕಾರ್ಯಕರ್ತರು ಖಂಡನಾ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಡಿಎಸ್ಎಸ್ ಮುಖಂಡ ಎಸ್.ಎನ್ ಬಳ್ಳಾರಿ, “2024ನೇ ಸಾಲಿನ ಮುಂದಿನ ಅವಧಿಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಆದರೆ, ಆ ಗ್ರಾಮ ಪಂಚಾಯತಿಗೆ ಒಳಪಡುವ ಬಿದರಹಳ್ಳಿ ಕ್ಷೇತ್ರದಿಂದ (ಸಾಮಾನ್ಯ ಮೀಸಲು) ಗ್ರಾಮ ಪಂಚಾಯತಿ ಸದಸ್ಯಳಾಗಿ ಸುನಿತಾ ಆಯ್ಕೆಯಾಗಿದ್ದಾರೆ. ಅಲ್ಲದೆ, ಈ ಹಿಂದೆ ಸಾಮಾನ್ಯ ವರ್ಗಕ್ಕೆ ನೀಡಲಾಗಿದ್ದ ಅಧ್ಯಕ್ಷ ಹುದ್ದೆಗೆ ಅವರು ಆಯ್ಕೆಯಾಗಿ, ಅಧಿಕಾರ ಚಲಾಯಿಸಿದ್ದಾರೆ. ಈಗ, ಮತ್ತೆ ನಡೆಯುತ್ತಿರುವ ಅಧ್ಯಕ್ಷರ ಚುನಾವಣೆಗೆ ಎಸ್‌ಸಿ ಮೀಸಲಾತಿಯಡಿ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಲು ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಅವರು ಹಿಂದು ಮಡ್ಡಿ ಜಾತಿಗೆ (ಪ್ರವರ್ಗ-1) ಸೇರಿದ್ದು, ಹಿಂದು ಭೋವಿ ಎಂದು ಹೇಳಿಕೊಂಡು ಕೊಟ್ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂವಿಧಾನ ವಿರೋಧಿಯಾಗಿದೆ” ಎಂದು ಕಿಡಿಕಾರಿದ್ದಾರೆ.

ಡಿಎಸ್ಎಸ್ ತಾಲೂಕು ಸಂಚಾಲಕ ದುರಗಪ್ಪ‌ ಹರಿಜನ ಮಾತನಾಡಿ, “ಈಗಾಗಲೇ ಬಿದರಹಳ್ಳಿ ಗ್ರಾಮದಲ್ಲಿ ಈ ಮಡ್ಡಿ ಜಾತಿಗೆ ಸೇರಿದ ಜನಾಂಗವು ಪ್ರವರ್ಗ-1ರಲ್ಲಿ ಸೇರುವುದಾಗಿ ಮಾನ್ಯ ಜಿಲ್ಲಾಧಿಕಾರಿಗಳು, ಹಾಗೂ ಜಿಲ್ಲಾ ಜಾತಿ ಪರಿತೀಲನಾ ಸಮಿತಿ ರವರು ದಿನಾಂಕ: 30-08-2015 ರಂದು ಸೂಚಿಸಿದ್ದಾರೆ. ಆದರೆ ಬಿದರಳ್ಳಿ ಗ್ರಾಮದ ಸದರಿ ಶ್ರೀಮತಿ ಸುನಿತಾ ನಾಗಪ್ಪ ಹಾರೋಗೇರಿ ಅವರ ಸಂಬಂಧಿಕರಾದ ದೇವೆಂದ್ರಪ್ಪ ಸತ್ಯಪ್ಪ ತುರಗೋಡಿ ಹಾಗೂ ಈ ಹಿಂದೆ ಅದೇ ಜಾತಿಗೆ ಸೇರಿದ ಶ್ರೀಮತಿ, ರೇಣುಕಾ ಸತ್ಯಪ್ಪ ಕುರಗೋಡಿ ಎಂಬವರು ಪೋಲಿಸ್ ಹುದ್ದೆಯಲ್ಲಿ ನ ಜಾರಿ ಕೋಟಾದಿಂದ ನೇಮಕ ಗೊಂಡಿದ್ದನ್ನು ಪ್ರಶ್ನಿಸಿ ಜಾತಿ ಪರಿಶೀಲನೆಗೆ ಒಳಪಡಿಸಿದಾಗ ಖೊಟ್ಟಿ ಜಾತಿ ಪ್ರಮಾಣ ಪತ್ರ ರದ್ದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖೊಟ್ಟಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಎಸ್‌ಸಿ ಮೀಸಲಾತಿ ಅಧ್ಯಕ್ಷ ಸ್ಥಾನಕ್ಕೆ ಸುನಿತಾ ಸ್ಪರ್ಧಿಸಿರುವುದನ್ನು ತಡೆಗಟ್ಟಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ದುರಗಪ್ಪ ಹರಿಜನ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...