ಗದಗ | ರಾಜ್ಯ ಮಟ್ಟದ ʼಮಹರ್ಷಿ ವಾಲ್ಮೀಕಿʼ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ

Date:

ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 10 ಕೊನೆಯ ದಿನವಾಗಿದೆ ಎಂದು ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಬರಟ್ಟಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಶ್ರೀ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಏಳಿಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಕ್ಟೋಬರ್ 7 ರಂದು ಜರಗುವ ಜಯಂತಿಯಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ” ಎಂದು ಸಭೆಗೆ ಮಾಹಿತಿ ನೀಡಿದರು.

“ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ನಿಗದಿ ಮಾಡಿದ ದಿನದಂದು ಜಿಲ್ಲಾಡಳಿತ ಭವನದಲ್ಲಿ ಸಾಂಕೇತಿಕವಾಗಿ ನಡೆಸಲಾಗುವುದು. ಮುಂದೆ ಸಮುದಾಯದವರು ತಿರ್ಮಾನಿಸಿದಂತೆ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗುವುದು” ಎಂದು ಜಿಲ್ಲಾಧಿಕಾರಿ ಸಿ ಎನ್ ‌ಶ್ರೀಧರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ಅವರ ಸಾಧನೆ ಕುರಿತು ಮುಂದಿನ ಪೀಳಿಗೆಗೆ ತಿಳಿಸಿಕೊಡುವಂತೆ ಆಗಬೇಕು. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಾಲ್ಮೀಕಿ ಅವರ ಕುರಿತು ಸಣ್ಣ ಕಥೆಗಳ ಬರವಣಿಗೆಯ ಸ್ಪರ್ಧೆ ಏರ್ಪಡಿಸಿ ಆಯ್ದ ಕಥೆಗಳನ್ನು ಸಂಕಲನದಲ್ಲಿ ಪ್ರಕಟಿಸುವಂತೆ ಹೇಳಿದರು.

ಸಮುದಾಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಸಾಹಿತಿಗಳು, ಪಿ ಎಚ್ ಡಿ ಮಾಡಿದಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಾಲ್ಮೀಕಿ ಅವರ ಕುರಿತು ಸುರ್ಧಿಘವಾಗಿ ಅಧ್ಯಯನ ಮಾಡಿದ ಇಬ್ಬರು ಸಂಪನ್ಮೂಲ ವ್ಯಕ್ತಿಗಳ ಹೆಸರುಗಳನ್ನು ತಿಳಿಸಲು ಸಮುದಾಯದ ಮುಖಂಡರಿಗೆ ತಿಳಿಸಿದರು.

ಇದನ್ನೂ ಓದಿ: ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು

ಸಮುದಾಯದ ಮುಖಂಡರು ಮಾತನಾಡಿ, “ಭೀಷ್ಮ ಕೆರೆಯ ಹತ್ತಿರುವಿರುವ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನೇಮಕ ಮಾಡಲಾಗಿದೆ. ಅದನ್ನು ಅಭಿವೃದ್ಧಿ ಪಡಿಸಬೇಕು. ಜಯಂತಿ ದಿನದಂದು ಮೆರವಣಿಗೆಗೆ ಕಲಾವಿದರ ತಂಡವನ್ನು ಒದಗಿಸಿಕೊಡಬೇಕು. ಜಿಲ್ಲೆಯಲ್ಲಿ ವಾಲ್ಮೀಕಿ ಭವನಗಳ ಕಾಮಗಾರಿಯನ್ನು ಚುರುಕುಗೊಳಬೇಕು” ಎಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್, ಡಿವೈಎಸ್ ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ,‌ ಎ ಸಿ ಗಂಗಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಗಣ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...