ಗದಗ | ಸಾರ್ವಜನಿಕ ಸೇವೆ ಮಾನವೀಯತೆಯಿಂದ ಕೂಡಿರಲಿ: ಸಚಿವ ಪ್ರಿಯಾಂಕ್ ಖರ್ಗೆ

Date:

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆ ನೀಡಬೇಕು ಹಾಗೂ ಕೆಲಸ ಕೇಳುವವರಾಗದೇ ನೀಡುವವರಾಗಬೇಕೆಂದು ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗದಗ ಜಿಲ್ಲೆಯ ನಾಗಾವಿಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಬಹುತೇಕ ಗ್ರಾಮೀಣ ಪ್ರದೇಶದಿಂದ ಬಂದಿರುವ ಯುವ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಅವಿಸ್ಮರಣೀಯ ಹಾಗೂ ಸಂತೃಪ್ತಿ ತರುವಂತಹ ದಿನವಾಗಿದೆ. ಈ ಜ್ಞಾನ ಬಂಢಾರದಿಂದ ಜೀವನದ ಮೌಲ್ಯ, ಸಿದ್ಧಾಂತಗಳನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು. ಸಾರ್ಥಕ ಜೀವನ ನಡೆಸುವ ಕನಸು ಮತ್ತು ಸಾಧಿಸಬೇಕೆಂದು ಕಿಚ್ಚು ಹೊತ್ತು ಇಲ್ಲಿಂದ ಹೊರಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಆರೈಸಿದರು.

ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಘಟಿಕೋತ್ಸವವು ಮಹತ್ವದ ಹೆಜ್ಜೆಯಾಗಿದೆ. ವಿಶ್ವ ವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿ. ಗ್ರಾಮೀಣ ಪರಿವರ್ತನೆಯ ಸಂಕಲ್ಪ ಹೊತ್ತು ಸಾಗಿರುವ ತಾವುಗಳು ವಿಶ್ವ ವಿದ್ಯಾಲಯದ ರಾಯಭಾರಿಗಳಾಗುತ್ತೀರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಆಧುನಿಕ ಯುವ ಜನಾಂಗದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಸಮಸ್ಯೆಗಳನ್ನು ಸಂಪೂರ್ಣವಾಗಿ ಪರಿಹರಿಸಲು ಅವರು ಸಿಂಹಗಳಂತೆ ಶ್ರಮಿಸುತ್ತಾರೆ, ಎಂದು ಅಭಿಮಾನದಿಂದ ಹೇಳಿದ ಅವರು, ಕಲೆಗೆ ವಿಜ್ಞಾನ ಅಳವಡಿಸುವುದೇ ತಂತ್ರಜ್ಞಾನ ಎಂದು ಸರಳ ಭಾಷೆಯಲ್ಲಿ ಹೇಳಬಹುದು. ದೇಶದ ಆರ್ಥಿಕ ಪ್ರಗತಿಯಲ್ಲಿ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದೆ ಎಂದರು.

ವಿಶ್ವವಿದ್ಯಾಲಯವು ಪಠ್ಯಕ್ರಮದಲ್ಲಿ ಶಿಕ್ಷಣ, ಸಂಶೋಧನೆ, ತರಬೇತಿ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ಅಳವಡಿಸಿಕೊಂಡಿದ್ದು ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನ, ಮಿಶ್ರಿತ ಬೋಧನಾ ಕಲಿಕಾ ಕ್ರಮಗಳನ್ನು ಅನುಸರಿಸುತ್ತಿದೆ. ವಿಶ್ವ ವಿದ್ಯಾಲಯದ ಸ್ಥಾಪನೆಗೆ ಪ್ರೋತ್ಸಾಹ ಹಾಗೂ ಶ್ರಮಿಸಿದ ನಾಡಿನ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಗದಗ ಜಿಲ್ಲೆಯ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಗೌತಮ ಬುದ್ಧರ ಹಿತವಚನದಂತೆ ʼನೀನು ಇನ್ನೊಬ್ಬರ ದಾರಿಗೆ ಬೆಳಕು ನೀಡುವ ದೀಪ ಹಚ್ಚಿದರೆ, ಅದು ನಿನ್ನ ದಾರಿಗೂ ಬೆಳಕು ಚೆಲ್ಲುತ್ತದೆ,ʼ ಎಂದರು.

ಕೇಂದ್ರ ಸರ್ಕಾರದ ಪಂಚಾಯತ್‌ರಾಜ್ ಮಂತ್ರಾಲಯದ ಮಾಜಿ ಜಂಟಿ ಕಾರ್ಯದರ್ಶಿ ಡಾ. ಟಿ.ಆರ್. ರಘುನಂದನ್ ಅವರು ಘಟಿಕೋತ್ಸವದ ಭಾಷಣ ಮಾಡುತ್ತಾ, ಕೃಷಿ ವಲಯವು ಕುಂಠಿತವಾಗಿರುವ ಇಂದಿನ ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಯಲ್ಲಿ ಗ್ರಾಮೀಣ ಆರ್ಥಿಕತೆ ವಿಶೇಷವಾಗಿ,  ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ. ಪ್ರಜಾಸತ್ತಾತ್ಮಕ ವಿಕೇಂದ್ರೀಕರಣದ ಅರ್ಥಪೂರ್ಣ ಮತ್ತು ಭಾರತ ಪರಿಣಾಮಕಾರಿ ವ್ಯವಸ್ಥೆಯ ಅನುಪಸ್ಥಿತಿಯಲ್ಲಿ ಅರ್ಥಪೂರ್ಣ ಗ್ರಾಮೀಣ ಅಥವಾ ನಗರ  ಅಭಿವೃದ್ಧಿಯನ್ನು ಸಾಧಿಸಲಾಗುವುದಿಲ್ಲ ಎಂದರು.

ಡಾ. ಭೀಮರಾವ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ಪಂಚಾಯತ್ ವ್ಯವಸ್ಥೆಯ ವಿಕೇಂದ್ರೀಕರಣದ ಪರವಾಗಿದ್ದರು. ಆದರೆ, ಸ್ಥಳೀಯ ಸರ್ಕಾರಗಳು ಎಲ್ಲ ಸಾಮಾಜಿಕ ವರ್ಗಗಳನ್ನು ಒಳಗೊಂಡಿರಬೇಕು ಎಂದು ಬಯಸಿದ್ದರು ಎಂದರು.

ಎಪ್ಪತ್ತಮೂರನೇ ಮತ್ತು ಎಪ್ಪತ್ತನಾಲ್ಕನೆಯ ಸಂವಿಧಾನಿಕ ತಿದ್ದುಪಡಿಗಳ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ಥಳೀಯ ಸರ್ಕಾರಗಳಿಗೆ ಸಂವಿಧಾನಿಕ ಸ್ಥಾನಮಾನ ನೀಡಿ, ಮೂವತ್ತು ವರ್ಷಗಳಾಗಿದ್ದರೂ, ಪಂಚಾಯತ್ ರಾಜ್‌ನ ಅನುಷ್ಠಾನವು ಎಲ್ಲಾ ರಾಜ್ಯಗಳಲ್ಲಿ ಅರೆಮನಸ್ಸಿನಿಂದ ಅನುಷ್ಠಾನ ಆಗಿರುವುದು ಕಂಡು ಬಂದಿದೆ ಎಂದು ಹೇಳಿದರು.

ನಾವೆಲ್ಲ ವಿವಿಧ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಪ್ರಾದೇಶಿಕ ಮತ್ತು ಭಾಷಾ ಹಿನ್ನೆಲೆಯಿಂದ ಬಂದವರು. ವಿಭಜನೆಯನ್ನು ಉತ್ತೇಜಿಸಲು ಅಥವಾ ಏಕತೆಯನ್ನು ಉತ್ತೇಜಿಸಲು ನಾವು ಇವುಗಳನ್ನು ಬಳಸಬಹುದು. ನಿಮ್ಮ ವೈವಿಧ್ಯತೆಯು ಏಕತೆ, ಸಹಾನುಭೂತಿ ಮತ್ತು ದೇಶಭಕ್ತಿಗೆ ಅಡ್ಡಿ ಬಾರದಂತೆ ಖಚಿತಪಡಿಸಿಕೊಳ್ಳಲು ಸರಳವಾದ ಮಾರ್ಗವಿದೆ ಎಂದರು.

ಸಂವಿಧಾನವು ಸುಮಾರು 400ವಿಧಿಗಳನ್ನು ಹೊಂದಿರುವ ಸುದೀರ್ಘ ದಾಖಲೆಯಾಗಿದೆ. ಅದೆಲ್ಲವನ್ನು ನೆನಪಿಟ್ಟುಕೊಳ್ಳುವ ಅಗತ್ಯವಿಲ್ಲ. ಏಕೆಂದರೆ ಇಡೀ ಸಂವಿಧಾನವನ್ನು 5ಗಾಂಧೀ ತತ್ವಗಳಲ್ಲಿ ಸಂಕ್ಷಿಪ್ತಗೊಳಿಸಬಹುದು. ಅವುಗಳೆಂದರೆ ಸತ್ಯ, ಅಹಿಂಸೆ, ಸ್ವರಾಜ್, ಸರ್ವೋದಯ ಮತ್ತು ಅಂತ್ಯೋದಯ. ಈ ತತ್ವಗಳನು ಅನುಸರಿಸಲು ನಿಮಗೆ ಎರಡು ಪ್ರಮುಖ ಗುಣಲಕ್ಷಣಗಳು ಅಗತ್ಯವಾಗಿವೆ. ಅವುಗಳೆಂದರೆ ಧೈರ್ಯ ಮತ್ತು ತಾಳ್ಮೆ ಎಂದು ನೆರೆದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕುಲಪತಿ ಪ್ರೊ. ವಿಷ್ಣುಕಾಂತ ಚಟಪಲ್ಲಿ, ಕುಲಸಚಿವರಾದ ಡಾ. ಸುರೇಶ ನಾಡಗೌಡ್ರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...