ಗದಗ | ಹಲವು ಇಲಾಖೆಗಳ ಖಾಲಿ ಹುದ್ದೆ ನೇಮಕಕ್ಕೆ ಆಗ್ರಹಿಸಿ ಪತ್ರ ಚಳವಳಿ

Date:

ಹಲವು ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಶಿಯಲ್ ವರ್ಕರ್ಸ್, ವೆಲ್ಫೇರ್ ಅಸೋಸಿಯೇಷನ್ ಹಾಗೂ ಚೇತನ ಬಿಎಸ್‌ಡಬ್ಲ್ಯೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪತ್ರ ಚಳವಳಿಯ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಚೇತನ್ ಬಿ ಎಸ್ ಡಬ್ಲ್ಯೂ ಕಾಲೇಜಿನ ಪ್ರಾಂಶುಪಾಲರಾದ ಅಜಯ ನೀಲವಾಣಿ ಮಾತನಾಡಿ, “ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಲ್ಲಿ ಆಪ್ತ ಸಮಾಲೋಚಕರು, ಸಂಯೋಜಕರು, ಮನೋವೈದ್ಯಕೀಯ ಸಮಾಜಕ ಕಾರ್ಯಕರ್ತರು, ಹಿರಿಯ ಮೇಲ್ವಿಚಾರಕ, ತಾಂತ್ರಿಕ ಬೆಂಬಲಿಗ ಸೇರಿದಂತೆ ಇನ್ನಿತರೆ ಇಲಾಖೆಗಳ ವಿವಿಧ ಹುದ್ದೆಗಳಲ್ಲಿ ಸುಮಾರು 10-12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಸರ್ಕಾರ ಈ ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿಯನ್ನು ನಿಲ್ಲಿಸಿ, ಶೀಘ್ರವೇ ಕಾಯಂ ಮಾಡಿಕೊಳ್ಳಬೇಕು” ಎಂದು ಪತ್ರ ಚಳುವಳಿಯ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಬಿಎಸ್‌ಡಬ್ಲ್ಯೂ ಪದವಿ ಮತ್ತು ಎಂಎಸ್‌ಡಬ್ಲ್ಯೂ ಸ್ನಾತಕೋತರ ಪದವಿ ತೇರ್ಗಡೆಯಾದ ಹೊಸ ಅಭ್ಯರ್ಥಿಗಳಿಗೆ ಸರ್ಕಾರದ ವಿವಿಧ ಇಲಾಖೆ ಶಿಕ್ಷಣ, ಸಮಾಜ ಕಲ್ಯಾಣ, ಗೃಹ, ಕಾರ್ಮಿಕ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಹೊಸದಾಗಿ ನೇಮಕ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಎನಿಸುತ್ತದೆ: ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ

ಈ ಪತ್ರ ಚಳುವಳಿ ಕಾರ್ಯಕ್ರಮದಲ್ಲಿ ನರಗುಂದ ತಾಲೂಕ ಪಂಚಾಯತ್ ಎನ್‌ಆರ್‌ಎಲ್‌ಎಂ ಯೋಜನೆಯ ಟಿ ಪಿ ಎಂ ಮೋಹನ್ ಕೃಷ್ಣ ಟಿ, ನರಗುಂದ ತಾಲೂಕ ಆಸ್ಪತ್ರೆ ಐಸಿಟಿಸಿ ಆಪ್ತ ಸಮಾಲೋಚಕ ಲಕಂಠ ಮಡಿವಾಳರ, ನರಗುಂದ ತಾಲೂಕ ಆಸ್ಪತ್ರೆಯ ಎಸ್ ಟಿ ಎಸ್ ಶಿವಾನಂದ ಕುರಹಟ್ಟಿ, ನರಗುಂದ ತಾಲೂಕ ಆಸ್ಪತ್ರೆ ಸ್ನೇಹ ಕ್ಲಿನಿಕ್ ಆಪ್ತ ಸಮಾಲೋಚಕ ಅಕೀಬ ಹುಲ್ಲೂರು, ವಿದ್ಯಾರ್ಥಿಗಳಾದ ಪಾಂಡುರಂಗ ಗುಡದೂರು, ಸಚಿನ ಹೊಸಂಗಡಿ, ನಾಗರಾಜ ಸೋಮಣ್ಣವರ, ರವಿ ಮೇಟಿ, ಬಿಎಸ್ ಡಬ್ಲ್ಯೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...