ಗದಗ | ಮಡಿವಾಳ ಮಾಚಿದೇವ ಜಯಂತಿ ಆಚರಣೆ

Date:

ಅರಸತ್ವ ಮೇಲಲ್ಲ, ಅಗಸತ್ವ ಕೀಳಲ್ಲ ಎಂದು ಕೇವಲ ಬಟ್ಟೆಯನ್ನು ಶುಬ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ಪ್ರಾಧ್ಯಾಪಕ ಡಾ. ರಾಜಶೇಖರ ಎಸ್‌ ದಾನರಡ್ಡಿ ಹೇಳಿದ್ದಾರೆ.

ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಾಹಿತ್ಯವು ಕೇವಲ ಅರಮನೆಗೆ ಸೀಮಿತವಾಗದಾರದೆಂದು ಶ್ರೀಸಾಮಾನ್ಯನಿಗೆ ತಿಳಿಯುವ ಹಾಗೇ ಸರಳ ಭಾಷೆಯಲ್ಲಿ ಬಸವಾದಿ ಶರಣರಲ್ಲಿ ಒಬ್ಬರಾಗಿ ಮಡಿವಾಳ ಮಾಚಿದೇವರು ವಚನಗಳನ್ನು ರಚಿಸಿ ಜನಸಾಮಾನ್ಯರ ಮನ ಮುಟ್ಟಿಸಿದ್ದಾರೆ. ಶಿಕ್ಷಣವೂ ಕೇವಲ ಉಳ್ಳವರಿಗೇ ಮಾತ್ರ ಮೀಸಲಾಗಿದ್ದ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಗುರುಗಳ ಹತ್ತಿರ ಶಿಕ್ಷಣ ಪಡೆದು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವಂತೆ ಎಲ್ಲರಿಗೂ ಬಾಳುವ ಮತ್ತು ಶಿಕ್ಷಣ ಪಡೆಯುವ ಹಕ್ಕಿದೆ ಎಂದು ಮಡಿವಾಳ ಮಾಚಿದೇವರು ಸಾಮಾಜಿಕ ಕ್ರಾಂತಿ ಮೂಡಿಸಿದವರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಡಿವಾಳ ಮಾಚಿದೇವರು ತಮ್ಮ ವಚನಗಳಲ್ಲಿ ಕಾಯಕಕ್ಕೆ ಅತ್ಯಂತ ಪ್ರಾಮುಖ್ಯತೆ ನೀಡಿದ್ದು ಭಕ್ತಿ ಮತ್ತು ನಿಷ್ಟೆಯಿಂದ ಕಾಯಕದಲ್ಲಿ ನಿರತರಾದರೆ ದೇವರು ಸಹ ಒಲಿಯುವನು ಎಂದು ಸಾರಿದ್ದಾರೆ.ನಡೆನುಡಿ ತಪ್ಪದೇ, ತತ್ವ ಸಿದ್ದಾಂತವನ್ನು ಅನುಸರಿಸಿ ನಮ್ಮ ವ್ಯಕ್ತಿತ್ವವನ್ನು ಉನ್ನತಗೊಳಿಸಬೇಕೆಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಶ್ರೀಸಾಮಾನ್ಯನಾಗಿದ್ದ ಮಡಿವಾಳ ಮಾಚಿದೇವರ ಜೀವನ ಸಂದೇಶದ ಕಥೆಯನ್ನು ಅರ್ಥಪೂರ್ಣವಾಗಿ ತಿಳಿಸಿದ ಅವರು 12ನೇ ಶತಮಾನದ ವಚನ ಕ್ರಾಂತಿಯೂ ಕನ್ನಡಕ್ಕೆ ದೊಡ್ಡ ಸಂಪತ್ತು” ಎಂದು ಡಾ. ರಾಜಶೇಖರ ಎಸ್ ದಾನರಡ್ಡಿ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ.ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಸೇರಿದಂತೆ ಗಣ್ಯರು, ಸಮಾಜ ಭಾಂದವರು, ಹಿರಿಯರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...