ಗದಗ | ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು: ಬಸವರಾಜ ಬೊಮ್ಮಾಯಿ

Date:

“ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಎಲ್ಲ ರೈತರಿಗೆ ಘೋಷಣೆ ಮಾಡಿರುವ 250 ರೂ. ಪ್ರೋತ್ಸಾಹ ಧನವನ್ನು ಏಜೆಂಟರ ಹಾವಳಿ ತಪ್ಪಿಸಿ ನೇರವಾಗಿ ರೈತರ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು. ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌.

ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಹಾಗೂ ಖರೀದಿ ಕೇಂದ್ರದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಸಭೆ ಉದ್ದೇಶಿಸಿ ಮಾತನಾಡಿದರು. 

“ಕಳೆದ ವರ್ಷ ಮೆಕ್ಕೆಜೋಳಕ್ಕೆ ಎರಡು ಸಾವಿರ  ರೂ. ಮೇಲೆ ದರ ಸಿಗುತ್ತಿತ್ತು. ಈ ವರ್ಷ ದರ ಸಂಪೂರ್ಣ ಕುಸಿದಿದೆ. ರೈತರು ಬಹಳ ಸಂಕಷ್ಟದಲ್ಲಿ ಸಿಕ್ಕಾಕ್ಕಿಕೊಂಡಿದ್ದಾರೆ. ಗದಗ ಜಿಲ್ಲೆಯ ರೈತರು ವಿಶೇಷವಾಗಿ ಲಕ್ಷ್ಮೇಶ್ವರದಲ್ಲಿ  ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಅಲ್ಲಿಗೆ ಜಿಲ್ಲಾಧಿಕಾರಿಗಳು ಬಂದು ಸರ್ಕಾರಕ್ಕೆ ಎಲ್ಲ ಮಾಹಿತಿ ನೀಡಿದ್ದಾರೆ. ಸರ್ಕಾರ ಮೊದಲು 10 ಲಕ್ಷ ಮೆಟ್ರಿಕ್ ಟನ್ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಈಗ ಖರೀದಿ ಬಹಳ ಮಂದಗತಿಯಲ್ಲಿ ನಡೆಯುತ್ತಿದೆ. ಇದುವರೆಗೂ ಒಂದು ಲಕ್ಷ ಟನ್ ಕೂಡ  ಖರಿದಿಯಾಗಿಲ್ಲ. ಖರಿದಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ರೈತರು ಯಾರು ಖರಿದಿ ಕೇಂದ್ರಕ್ಕೆ ಮೆಕ್ಕೆಜೋಳ ತರುತ್ತಾರೆ ಅದನ್ನು ಖರಿದಿಸಬೇಕು. ರೈತರ ಸಂಕಷ್ಟ ನೀಗಿಸುವ ಯಾವುದೇ ಕ್ರಮ ಕಾಣಿಸುತ್ತಿಲ್ಲ. ಈಗ ರೈತರಿಗೆ 250 ರೂ. ಕೊಡುವ ಹೊಸ ಸ್ಕಿಮ್ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನಾವು ತೆಗೆದುಕೊಂಡು ಹೋಗಿರುವ ಮೆಕ್ಕೆಜೋಳದ ಪರಿಸ್ಥಿತಿ ಏನು?. ಯಾರು ಖರೀದಿ ಕೇಂದ್ರಕ್ಕೆ  ಮೆಕ್ಕೆಜೋಳ ತೆಗೆದುಕೊಂಡು ಹೋಗಿದ್ದಾರೆ. ಅದನ್ನು ಖರೀದಿ ಮಾಡಬೇಕು. ಮೆಕ್ಕೆಜೋಳ ಖರಿದಿಯಾಗದಿರುವ ರೈತರಿಗೆ 250 ರೂ. ಪ್ರೋತ್ಸಾಹ ಧನವನ್ನು ಯಾವ ರೀತಿ ಪರಿಹಾರ ನೀಡುತ್ತಾರೆ ಎನ್ನುವುದನ್ನು ತಿಳಿಸಬೇಕು” ಎಂದು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಡಾ ಚಂದ್ರು ಲಮಾಣಿ, ವಿಧಾನ ಪರಿಷತ್ತ ಸದಸ್ಯ ಎಸ್.ವಿ ಸಂಕನೂರ,  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ರೋಹನ್ ಜಗದೀಶ ಸೇರಿದಂತೆ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...