ಗದಗ | ಮಾರ್ಚ್ 16: ಕೆ. ಎಚ್. ಪಾಟೀಲ್ ಜನ್ಮಶತಮಾನೋತ್ಸವ ಆಚರಣೆ

Date:

“ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ ಮತ್ತು ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ” ಎಂದು ಮಾಜಿ ಶಾಸಕ ಹಾಗೂ ಸಮಿತಿ ಅಧ್ಯಕ್ಷ ಡಿ.ಆರ್. ಪಾಟೀಲ್ ಹೇಳಿದರು.

ಗದಗ ಪಟ್ಟಣದಲ್ಲಿ ಇಂದು ಶುಕ್ರವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ಕೆ.ಎಚ್. ಪಾಟೀಲ ಪ್ರತಿಷ್ಠಾನ ವತಿಯಿಂದ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕಾರ್ಯಕ್ರಮ ಜರುಗಲಿದ್ದು, ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರ” ಎಂದು ಹೇಳಿದರು.

“ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸುವರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಘನ ಉಪಸ್ಥಿತಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಹಾಗೂ ಕೋ-ಆಪರೇಟಿವ್ ಫೆಡರೇಶನ್ ಅಧ್ಯಕ್ಷ ಜಿ.ಟಿ. ದೇವೇಗೌಡ, ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್‌. ಶಂಕರ, ಕಾರ್ಮಿಕ ಸಚಿವ ಸಂತೋಷ ಲಾಡ್, ಜವಳಿ, ಎಪಿಎಂಸಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು” ಎಂದರು.

“ಕೆ.ಎಚ್. ಪಾಟೀಲ ಅವರು 1954ರಲ್ಲಿ ರಾಜಕೀಯ ಜೀವನ ಆರಂಭಿಸಿದರು. ಸರಪಂಚ್ ಆಗಿ, ಎಪಿಎಂಸಿ ಅಧ್ಯಕ್ಷರಾಗಿ, ದಿ. ಗದಗ ಕಾಟನ್ ಸೇಲ್ ಸೊಸೈಟಿ ಅಧ್ಯಕ್ಷರಾಗಿ, ರಾಜ್ಯದ ಪ್ರಭಾವಿ ಸಚಿವರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ ಪ್ರಕರಣ: ಕಾನೂನು, ಸಂವಿಧಾನ ಮತ್ತು ಅಧಿಕಾರಶಾಹಿ

“ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಕೆ.ಎಚ್. ಪಾಟೀಲ ಅವರು ಎಪಿಎಂಸಿಯಲ್ಲಿ ಮೊಟ್ಟ ಮೊದಲ ಬಾರಿ ಟೆಂಡರ್ ಪದ್ಧತಿಯನ್ನು ಆರಂಭಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ಯಾವ ಯಾವ ಸ್ಥಾನಮಾನದಲ್ಲಿ ಕೆಲಸ ಮಾಡುವ ಅವಕಾಶ ಪಡೆದುಕೊಂಡಿದ್ದರು, ಅಲ್ಲಲ್ಲಿ ತಮ್ಮ ಛಾಪನ್ನು ಅಚ್ಚಳಿಯದ ಹಾಗೆ ಕೆಲಸ ನಿರ್ವಹಿಸಿ ಜನಮಾನಸದಲ್ಲಿ ನೆನಪಾಗಿ ಉಳಿಸಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...