ಗದಗ | ಆಸ್ಪತ್ರೆಯೊಳಗೆ ‘ರೀಲ್ಸ್‌’ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು; 38 ಮಂದಿ ಅಮಾನತು

Date:

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯೊಳಗೆ ‘ರೀಲ್ಸ್’ ವಿಡಿಯೋ ವೈರಲ್ ಆಗುತ್ತಿದ್ದಂತೆ 38 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದು ವರದಿಯಾಗಿದೆ.

ವೈರಲ್ ಆಗುತ್ತಿರುವ ವೀಡಿಯೊಗಳಲ್ಲಿ ಒಂದು ವೀಡಿಯೊದಲ್ಲಿ ಮೂವರು ವಿದ್ಯಾರ್ಥಿನಿಯರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿದ್ದರೆ, ಇನ್ನೊಂದು ವೀಡಿಯೊದಲ್ಲಿ 10ಕ್ಕೂ ಅಧಿಕ ವಿದ್ಯಾರ್ಥಿಗಳು ಕನ್ನಡ ಹಾಡಿನ ಸಾಹಿತ್ಯಕ್ಕೆ ಅಭಿನಯಿಸಿದ್ದಾರೆ.

ಜಿಮ್ಸ್ ನಿರ್ದೇಶಕ ಡಾ.ಬಸವರಾಜ್ ಬೊಮ್ಮನಹಳ್ಳಿ ಅವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇದೇ ಘಟನೆ ಪುನರಾವರ್ತನೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೀಲ್‌ಗಳಲ್ಲಿ ಯುವ ವಿದ್ಯಾರ್ಥಿಗಳು ‘ಪ್ರೇಮಲೋಕ’ ಚಿತ್ರದ ಕನ್ನಡ ಹಾಡು ಮತ್ತು ಬಾಲಿವುಡ್ ಚಿತ್ರ ‘ಮೊಹ್ರಾ’ದ ಹಿಂದಿ ಹಾಡಿಗೆ ನೃತ್ಯ ಮಾಡಿದ್ದಾರೆ.

ಈ ರೀಲ್‌ಗಳು ಜಿಮ್ಸ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಎತ್ತಿವೆ.

ದಾಖಲಾದ ರೋಗಿಗಳ ಸ್ಥಿತಿ ಮತ್ತು ಜಿಮ್ಸ್‌ನಲ್ಲಿ ಮೇಲ್ವಿಚಾರಣೆಯ ಬಗ್ಗೆ ಅನೇಕ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಅವರಲ್ಲಿ ಕೆಲವರು ಜಿಮ್ಸ್ ಯಾವಾಗ ವೀಡಿಯೊ ಶೂಟಿಂಗ್ ತಾಣವಾಗಿ ಮಾರ್ಪಟ್ಟಿತು? ಎಂದು ಕೇಳಿದ್ದಾರೆ.

“ವೈದ್ಯಕೀಯ ವಿದ್ಯಾರ್ಥಿಗಳ ತಂಡವೊಂದು ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿರುವ ಘಟನೆ ಶುಕ್ರವಾರ ಗಮನಕ್ಕೆ ಬಂದಿದೆ. ಈ ಗುಂಪಿನಲ್ಲಿ 15 ಹೌಸ್ ಸರ್ಜನ್‌ಗಳು ಸೇರಿದ್ದಾರೆ. ಅವರು ಮುಂದಿನ ಕೆಲವು ತಿಂಗಳುಗಳಲ್ಲಿ ಪದವಿ ಪಡೆಯಲಿದ್ದಾರೆ. ನಮ್ಮ ವಿಚಾರಣೆಯ ಸಮಯದಲ್ಲಿ, ಅವರು ತಮ್ಮ ಪದವಿಪೂರ್ವ ಆಚರಣೆಯ ಭಾಗವಾಗಿ ಇದನ್ನು ಮಾಡಿದ್ದಾರೆ” ಎಂದು ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

“ಅವರು 5 ವರ್ಷಗಳ ಕಾಲ ಜಿಮ್ಸ್‌ನಲ್ಲಿ ಅಧ್ಯಯನ ಮಾಡಿದ್ದಾರೆ. ಸಂಸ್ಥೆಯಲ್ಲಿ ಏಪ್ರಿಲ್ 7ರಂದು ಅವರ ಕೊನೆಯ ಕಲಿಕೆಯ ದಿನವಾಗಿದೆ. ಅದಕ್ಕಾಗಿಯೇ ಅವರು ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಜಿಮ್ಸ್ ಆವರಣದಲ್ಲಿ ಈ ರೀತಿ ಮಾಡಬಾರದೆಂದು ನಾವು ಅವರಿಗೆ ಹೇಳಿದ್ದೇವೆ. ನಾವು ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ” ಎಂದು ಡಾ ಬಸವರಾಜ ಬೊಮ್ಮನಹಳ್ಳಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

38 ಜಿಮ್ಸ್ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಆಡಳಿತದ ಕ್ರಮವನ್ನು ಶ್ಲಾಘಿಸಿದ ಕೆಲವು ಟ್ವಿಟರ್ ಬಳಕೆದಾರರು, ಇಂತಹ ಕೃತ್ಯಗಳನ್ನು ಆಸ್ಪತ್ರೆಗಳಲ್ಲಿ ಮಾಡಬಾರದೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...