ಗದಗ | ಮನರೇಗಾ ಸಹಾಯಧನ; ಕೈ ಹಿಡಿದ ಕರಿಬೇವು

Date:

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕಿನ ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರದೂರ ಗ್ರಾಮದ ರೈತ ಮೈಲೆಪ್ಪ ತಳಗೇರಿ ಅವರು ಕರಿಬೇವು ಬೆಳೆಯುವ ಮೂಲಕ ಆರ್ಥಿಕ ಸ್ವಾವಲಂಬನೆ ಕಂಡುಕೊಂಡಿದ್ದಾರೆ.

ಈ ಮೊದಲು, ಮೈಲೆಪ್ಪ ತಮ್ಮ ಒಂದು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ, ಜೋಳ, ಹೆಸರು ಕಾರು ಬೆಳೆಯುತ್ತಿದ್ದರು. ಆದರೆ, ಇತ್ತೀಚೆಗೆ ಮನರೇಗಾ ಯೋಜನೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಒದಗಿಸಲಾಗುವ ಸೌಲಭ್ಯಗಳ ಅರಿತು, ಕರಿಬೇವು ಬೆಳೆಯಲು ನಿರ್ಧರಿಸಿದ್ದರು. 2023-24ನೇ ಸಾಲಿನಲ್ಲಿ 1.20 ಲಕ್ಷ ಸಹಾಯಧನ ಪಡೆದು 800 ಕರಿಬೇವು ಸಸಿ ತಂದು ನೆಟ್ಟಿದ್ದರು.

ಕೆಲವೇ ತಿಂಗಳುಗಳಲ್ಲಿ ಕರಿಬೇವು ಆದಾಯ ನೀಡುತ್ತಿದ್ದು, ಈಗ ಮೈಲೆಪ್ಪ ವಾರ್ಷಿಕವಾಗಿ ಐವತ್ತರಿಂದ ಅರವತ್ತು ಸಾವಿರ ರೂಪಾಯಿ ಲಾಭ ಪಡೆಯುತ್ತಿದ್ದಾರೆ. ಕರಿಬೇವು ಸಸಿ ಬೆಳೆದಂತೆ ಇಳುವರಿಯು ಅಧಿಕವಾಗಲಿದ್ದು, ಆದಾಯ ಕೂಡ ಹೆಚ್ಚಾಗಲಿದೆ. ಇದರೊಂದಿಗೆ ವಾಣಿಜ್ಯ ಬೆಳೆಗಳ ಆದಾಯ ಸಹ ಪ್ರತ್ಯೇಕವಾಗಿ ಕೈ ಸೇರಲಿದೆ ಎಂದು ಮೈಲೆಪ್ಪ ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನರೇಗಾ ಯೋಜನೆಯ ಸದ್ಬಳಕೆಯಿಂದ ಮಿಶ್ರ ಬೇಸಾಯದ ಮಹತ್ವವನ್ನು ರೈತ ಮೈಲೆಪ್ಪ ಎತ್ತಿ ಹಿಡಿದಿದ್ದಾರೆ. ಈಗಾಗಲೇ ತಾಲೂಕು ಹಾಗೂ ಜಿಲ್ಲಾ ಮಾರುಕಟ್ಟೆಗೆ ಕರಿಬೇವನ್ನು ಪೂರೈಕೆ ಮಾಡುತ್ತಿದ್ದು, ಕೆ.ಜಿಗೆ 30 ರೂಪಾಯಿ ದರದಲ್ಲಿ ಮಾರಾಟವಾಗಿದೆ. ಸೀಸಸ್‌ಗೆ ತಕ್ಕಂತೆ ದರ ಏರುಮುಖ ಆಗುವುದರಿಂದ ಮುಂಬರುವ ದಿನಗಳಲ್ಲಿ ಉತ್ತಮ ಆದಾಯ ನಿರೀಕ್ಷೆ ಮಾಡಬಹುದು ಎಂದು ಮೈಲೆಪ್ಪ ಹೇಳಿದ್ದಾರೆ.

“ಮನರೇಗಾ ಯೋಜನೆ ಸದ್ಬಳಕೆ ಮೂಲಕ 2023-24ನೇ ಸಾಲಿನಲ್ಲಿ ಸಹಾಯಧನ ಪಡೆದು ರೈತ ಮೈಲೆಪ್ಪ ಉತ್ತಮ ಆದಾಯ ಕಂಡಿರುವುದು ಖುಷಿಯ ಸಂಗತಿ. ಇದು ನರೇಗಾ ಯೋಜನೆ ಸದುಪಯೋಗದ ಜೊತೆಗೆ ಮಿಶ್ರ ಬೇಸಾಯದ ಮಹತ್ವ ಸಾರುವ ಮೂಲಕ ರೈತರ ಉತ್ತಮ ಆರ್ಥಿಕತೆಗೆ ನಿದರ್ಶನವಾಗಿರುವುದು ಖುಷಿಯ ಸಂಗತಿ” ಎಂದು ಮುಂಡರಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...