ಗದಗ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

Date:

2024-25ನೇ ಸಾಲಿನಲ್ಲಿ ಗದಗ ಜಿಲ್ಲಾ ಕೇಂದ್ರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ರಿಂಗ್ ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ‌ ಡಾ. ಎಚ್.ಕೆ ಪಾಟೀಲ್ ಹೇಳಿದರು.

‌ಗದಗ ನಗರದಲ್ಲಿ ಲೋಕೋಪಯೋಗಿ ಇಲಾಖೆ ನಡೆಸುತ್ತಿರುವ ಅಬ್ದುಲ್ ಕಲಾಂ ಶಾದಿಮಹಲ್ ರಸ್ತೆಯಿಂದ ಸಂಬಾಪುರ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

“ಪ್ರಸ್ತುತದಲ್ಲಿ 4 ಕೋಟಿ ರೂ. ಅನುದಾನದಲ್ಲಿ 1.9 ಕಿಮೀ ರಿಂಗ್ ರೋಡ್ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ರಿಂಗ್ ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“‌ಧೋಬಿ ಘಾಟ್‍ದಿಂದ ಮುಂಡರಗಿ ರಸ್ತೆ, ಅಲ್ಲಿಂದ ಬೆಟಗೇರಿ, ನಂತರ ಹೊಂಬಳ ರಸ್ತೆ ಸಂಪರ್ಕ ಕಲ್ಪಿಸಿದರೆ ರಿಂಗ್‍ರೋಡ್ ಕಾಮಗಾರಿ ಪೂರ್ಣಗೊಳ್ಳಲಿದೆ. ಇದಕ್ಕಾಗಿ ₹241 ಕೋಟಿ ಅನುದಾನ ಅಗತ್ಯವಾಗಿದೆ.‌ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ರಿಂಗ್‍ರೋಡ್ ಕಾಮಗಾರಿ ಕೈಗೊಳ್ಳಲು ಅಗತ್ಯವಿರುವ ಅನುದಾನ‌ ನೀಡುವ ಭರವಸೆ ನೀಡಿದ್ದು, ರಿಂಗ್ ರೋಡ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತಿದೆ” ಎಂದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಾಸಕರಿಗೆ ₹25 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದು, ಅದನ್ನು ಅತ್ಯಂತ ಅಗತ್ಯ ಹಾಗೂ ಅನಿವಾರ್ಯ ಕಾಮಗಾರಿಗಳಿಗೆ ಬಳಸಲು ತಿಳಿಸಿದ್ದಾರೆ. ಈ ಅನುದಾನವನ್ನೂ ಕೂಡ ನಗರದ ಕಾಮಗಾರಿಗಳನ್ನು ಕೈಗೊಳ್ಳಲು ಬಳಸಲಾಗುವುದು” ಎಂದು ತಿಳಿಸಿದರು.

“ಕಳೆದ ಸಾಲಿನ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಲ್ಲಿ ಪೂರ್ಣವಾಗದ ಹಾಗೂ ಆರಂಭವಾಗದ ಅಂದಾಜು 15 ಕಾಮಗಾರಿಗಳು ಬಾಕಿ ಇದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನಹರಿಸಬೇಕು. ಅಲ್ಲದೆ ಮುಂದಿನ ಒಂದು ತಿಂಗಳೊಳಗಾಗಿ ಈ ಎಲ್ಲ ಕಾಮಗಾರಿಗಳನ್ನು ಆರಂಭಿಸಿ ಪೂರ್ಣಗೊಳಿಸಬೇಕು” ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಚಿವ ಎಚ್.ಕೆ.ಪಾಟೀಲ ಅವರು ನಿರ್ದೇಶನ ನೀಡಿದರು.

ಗದಗ ಬೆಟಗೇರಿ ನಗರಸಭೆ ಸದಸ್ಯ ಎಲ್ ಡಿ ಚಂದಾವರಿ ಮಾತನಾಡಿ, “ಇಂದು ಆರಂಭವಾದ ಕಾಮಗಾರಿ ಪೂರ್ಣಗೊಂಡರೆ ರಿಂಗ್ ರೋಡ್ ಕಾಮಗಾರಿ ಶೇ.75 ರಷ್ಟು ಪ್ರಗತಿ ಸಾಧಿಸಿದಂತಾಗುತ್ತದೆ. ಇದರಿಂದ ನಗರದ ಸಂಚಾರಿ ದಟ್ಟಣೆ ನಿಯಂತ್ರಣ ಖಂಡಿತವಾಗಿಯೂ ಕಡಿಮೆಯಾಗಲಿದೆ” ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯ ಬಿ ಬಿ ಅಸೂಟಿ ಮಾತನಾಡಿ, “ಈ ಹಿಂದೆ ಎಚ್‌ ಕೆ ಪಾಟಿಲ್ ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ವೇಳೆಯಲ್ಲಿ ಅಪಾರ ಅನುದಾನ ಜಿಲ್ಲೆಗೆ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ. ಅವರು ಅಭಿವೃದ್ಧಿ ಕಲ್ಪನೆಯೂ ಅಪಾರವಾಗಿದೆ. ರಿಂಗ್‍ರಸ್ತೆ ಪೂರ್ಣ ಆದಲ್ಲಿ, ರೋಣ, ಗಜೇಂದ್ರಗಡದಿಂದ ಆಗಮಿಸುವ ವಾಹನಗಳು ನಗರದ ಹೊರಗಿನಿಂದಲೇ ಸಾಗುವ ಮೂಲಕ ಸಂಚಾರ ದಟ್ಟಣೆ ನಿಯಂತ್ರಣ ಆಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾಮಾಂತರ | ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆ; ವಿಕಲಚೇತನರಿಂದ ಅರ್ಜಿ ಆಹ್ವಾನ

“ನವೆಂಬರ್ 1 ರಿಂದ 3ರವರೆಗೆ ಕರ್ನಾಟಕ ಸಂಭ್ರಮ-50 ಉತ್ತಮ ಕಾರ್ಯಕ್ರಮ ಮಾಡಿ, ಐತಿಹಾಸಿಕ ಸಂಭ್ರಮಕ್ಕೆ ಕಾರಣರಾದವರು ಎಚ್ ಕೆ ಪಾಟಿಲ್.‌ ಕರ್ನಾಟಕ ಸಂಭ್ರಮದಿಂದಾಗಿ 50 ವರ್ಷದ ಹಿಂದಿನ ಗತ ವೈಭವ ಮರುಸೃಷ್ಟಿಯನ್ನು ನಾವೆಲ್ಲ ಅನುಭವಿಸುವಂತಾಯಿತು” ಎಂದರು.

ಕಾರ್ಯಕ್ರಮದಲ್ಲಿ ಗಣ್ಯರಾದ ಬಿ ಎಸ್ ತಳವಾರ, ಕರಿಸೋಮನಗೌಡ್ರ, ರೋಣದ ಅಜ್ಜಣ್ಣ ಪಾಟಿಲ್, ಶರಣು, ಯರನಾಳ, ಅಶೋಕ ಮಂದಾಲಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...