ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ ಕಾಮಗಾರಿಗೆ ಸಂಬಂಧಿಸಿದಂತೆ 11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಗುತ್ತಿಗೆದಾರನಿಂದ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಶಾಸಕ ಚಂದ್ರು ಲಮಾಣಿ, ಪಿಎಗಳಾದ ಮಂಜುನಾಥ್ , ಗುರು ಲಮಾಣಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.





